ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆ.ಜಿ. 300 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ವಿದೇಶಗಳಿಂದ ಬೆಂಗಳೂರಿಗೆ ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಗಳ ಕುರಿತು ಖಚಿತ ಮಾಹಿತಿಯ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 67.59 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಡಿಆರ್ ಅಧಿಕಾರಿಗಳ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದರು.
ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಎರಡು ಪ್ರಕರಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಂದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಅಧಿಕಾರಿಗಳನ್ನು ಮೋಸ ಮಾಡಿ ಚಿನ್ನ ಸಾಗಣೆ ಮಾಡಲು ಮುಂದಾಗಿದ್ದ ವ್ಯಕ್ತಿಯೂ ದುಬೈನಿಂದ ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ಎನ್ನಲಾಗಿದ್ದು,
ಕಸ್ಟಮ್ಸ್ ಅಧಿಕಾರಿಯ ಕಣ್ಗಾವಲಿನಲ್ಲಿ ಸಿಕ್ಕಿ ಬಿದಿದ್ದಾನೆ ಎಂದು ಮಾಹಿತಿ ದೊರೆತಿದೆ.