Connect with us

    LATEST NEWS

    ಮೊದಲು ಉಳುವವನೇ ಭೂಮಿ ಒಡೆಯ-ಈಗ ಉಳ್ಳವನೇ ಭೂಮಿಯೊಡೆಯ: ಮಾಜಿ ಸಿಎಂ ಸಿದ್ದು

    Published

    on

    ಉಡುಪಿ: ಇಂದಿರಾಗಾಂಧಿ- ದೇವರಾಜ ಅರಸು ಉಳುವವನೇ ಭೂಮಿಯ ಒಡೆಯ ಎಂದಿದ್ದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯನಾಗಿದ್ದಾನೆ. ಭೂಮಸೂದೆ ಕಾಯ್ದೆ ಜಾರಿಗೆ ಬಂದಮೇಲೆ ಕರಾವಳಿಯಲ್ಲೂ ಸಾವಿರಾರು ಜನರು ಭೂಮಿ ಒಡೆಯರಾದರು ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.


    ಅವರು ಉಡುಪಿಯ ಹಿರಿಯಡ್ಕದಲ್ಲಿರುವ ಗಾಂಧೀ ಮೈದಾನದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ಭೂ ಮಸೂದೆ ಕಾಯಿದೆಯ” ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನೆ ನಡೆಸಿ ಮಾತನಾಡಿದರು.

    ಕರ್ನಾಟಕದಲ್ಲಿ ದೇವರಾಜು ಅರಸು ಈ ಕಾನೂನು ಜಾರಿಗೆ ತಂದರು. ಇದು ಜಾರಿಗೆ ಬಂದಮೇಲೆ ಕರಾವಳಿಯಲ್ಲೂ ಸಾವಿರಾರು ಜನರು ಭೂಮಿ ಒಡೆಯರಾದರು. ರಾಜ್ಯದಲ್ಲಿ 6 ಲಕ್ಷ ಕುಟುಂಬಗಳು ಭೂಮಿ ಒಡೆಯರಾದರು. 1974ರ ಭೂಸುಧಾರಣಾ ಕಾಯಿದೆಯ ಪ್ರಕಾರ ಜಮೀನು ಹೊಂದಬೇಕಾದರೆ ಆದಾಯದ ಮಿತಿಯಿತ್ತು.

    ಕೃಷಿಕರಲ್ಲದವರಿಗೆ ಭೂಮಿ ಪಡೆಯುವಂತಿರಲಿಲ್ಲ. ಜೊತೆಗೆ ಒಂದು ಕುಟುಂಬಕ್ಕೆ ಇಂತಿಷ್ಟೇ ಜಮೀನು ಎಂಬ ಮಿತಿ ಇತ್ತು. ಅಫಿದಾವಿತ್‌ನಲ್ಲಿ ತಪ್ಪು ಮಾಹಿತಿ ನೀಡಿದವರಿಗೆ ದಂಡಿಸುವ ನಿಯಮವಿತ್ತು. ಕೃಷಿಯೇತರರಿಗೆ ಜಮೀನು ವರ್ಗಾವಣೆ ಮಾಡಲು ತಡೆಯಿತ್ತು.

    ಆದರೆ ಇಂದು ಅದನ್ನು ಬಿಜೆಪಿ ಸರ್ಕಾರ ರದ್ದು ಮಾಡಿದೆ. ಇಂದಿರಾಗಾಂಧಿ- ದೇವರಾಜ ಅರಸು ಉಳುವವನೇ ಭೂಮಿಯ ಒಡೆಯ ಎಂದಿದ್ದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯನಾಗಿದ್ದಾನೆ ಇದು ಒಪ್ಪಿಗೆಯಾ? ಎಂದು ಪ್ರಶ್ನಿಸಿದ ಅವರು ಇದು ಒಪ್ಪಿಗೆಯಾಗದಿದ್ದಲ್ಲಿ ರದ್ದುಗೊಳಿಸಿದ ಸರ್ಕಾರವನ್ನು ಕಿತ್ತೊಗೆಯಿರಿ ಎಂದರು.

    ಭಾರತದ ಸಂವಿಧಾನದ ಮೂಲ ತತ್ವ ಸಹಿಷ್ಣುತೆ ಮತ್ತು ಸಹಬಾಳ್ವೆ. ಈ ದೇಶದಲ್ಲಿ ಅಭಿವೃದ್ಧಿ ಕಾಣಬೇಕಾದರೆ ಶಾಂತಿ ಮುಖ್ಯ. ಇದು ಬಹುತ್ವದಿಂದ ಕೂಡಿದ ದೇಶ. ಈ ದೇಶ ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ. ಇಂತಹ ದೇಶದಲ್ಲಿ ಅಭಿವೃದ್ಧಿ ಕಾಣಬೇಕಾದರೆ ದೇಶ ಶಾಂತಿ, ನೆಮ್ಮದಿಯಿಂದ ಇರಬೇಕು.

    ಯಾವ ದೇಶದಲ್ಲಿ ಅಶಾಂತಿ, ಅಭದ್ರತೆ ಇರುತ್ತೆ ಅದು ಅಭಿವೃದ್ದಿ ಆಗಲು ಸಾಧ್ಯವಿಲ್ಲ. ಸಮಾಜದಲ್ಲಿ ಇರುವಂತಹ ತಾರತಮ್ಯವನ್ನು ಹೋಗಲಾಡಿಸುವಂತಹ ವ್ಯವಸ್ಥೆ ಇರಲಿ’ ಎಂದು ಅಭಿಪ್ರಾಯ ಪಟ್ಟರು.

    ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರದ ಬಗ್ಗೆ ಮಾತನಾಡಿದ ಅವರು ಸಂವಿಧಾನ ಬದ್ಧವಾಗಿ ಚುನಾಯಿತವಾದ ರೂಪಿತವಾದ ಸರ್ಕಾರ. ಹಾಗಂದ ಮೇಲೆ ಅಧಿಕಾರಕ್ಕೆ ಬಂದ ಮೇಲೆ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವುದು ಪ್ರತಿಯೊಬ್ಬ ನಾಗರಿಕ ಸಮುದಾಯದ ಕರ್ತವ್ಯ. ಭಾರತದಂತಹ ದೇಶ ಅಥವಾ ರಾಜ್ಯಗಳು ಪ್ರಗತಿ ಯಾಗಬೇಕಾದರೆ ಶಾಂತಿ, ಸುವ್ಯವಸ್ಥೆ ತುಂಬಾ ಮುಖ್ಯವಾದದ್ದು.

    ವ್ಯವಸ್ಥೆ ಸರಿ ಇದ್ದರೆ ಮಾತ್ರ ನೆಮ್ಮದಿ ಕಾಣಲು ಸಾಧ್ಯ. ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ. ಆದರೂ ಇನ್ನೂ ಕೂಡ ನಾವು ಸಾಮಾಜಿಕ, ಆರ್ಥಿಕವಾಗಿ ತುಂಬಾ ಹಿಂದುಳಿದಿದ್ದೇವೆ, ನಾವು 75ನೇ ಸ್ವಾತಂತ್ರ್ಯವನ್ನು ಆಚರಣೆ ಮಾಡುತ್ತಿದ್ದೇವೆ, ಸಂವಿಧಾನ ಬಂದು 72ನೇ ವರ್ಷ ಸಂದಿದೆ.

    ಇನ್ನೂ ಕೂಡ ನಾವು ಜಾತ್ಯಾತೀತ ರಾಷ್ಟ್ರವನ್ನು, ಸಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗದ ವಿಚಿತ್ರವನ್ನು ನೋಡುತ್ತಿದ್ದೇವೆ.

    ಅವಕಾಶವಂಚಿತರಿಗೆ ಅವಕಾಶ ಕಲ್ಪಿಸಿಕೊಟ್ಟಾಗ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಕೆಳವರ್ಗದ ಜನರು ಕೂಡ ಮುಖ್ಯವಾಹಿನಿಗೆ ಬರಬೇಕು. ಕರಾವಳಿ ಭಾಗದಲ್ಲಿ, ಮಲೆನಾಡು ಪ್ರದೇಶಗಳಲ್ಲಿ ಅನೇಕ ರೀತಿಯ ಹೋರಾಟಗಳು ನಡೆಯುತ್ತಿರುತ್ತದೆ. ರಾಜಕೀಯ ಭಾಷಣ ಮಾಡಲು ಒಮ್ಮೆ ಬರೋಣ, ನಾನು ಬಿಜೆಪಿ ಜನರ ಜೊತೆ ಚರ್ಚೆ ನಡೆಸಲು ಸಿದ್ಧನಿದ್ದೇನೆ.

    ಇವತ್ತು ದೇಶ ಮಾಡಿರುವ ಸಾಲ, ನೀಡಿರುವ ಉದ್ಯೋಗದ ಬಗ್ಗೆ ಕೂಲಂಕುಷವಾಗಿ ಚರ್ಚಿಸೋಣ’ ಎಂದು ಕಿಡಿಕಾರಿದರು.
    ದೇಶ, ಸಂವಿಧಾನ, ಸುವ್ಯವಸ್ಥೆ ಉಳಿಯಬೇಕಾದರೆ ನಾವು ಧರ್ಮದ ಆಧಾರದ ಮೇಲೆ ಆಡಳಿತ ನಡೆಸುವವರಿಂದ ದೂರವಿರಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮುಖಂಡ ಐವನ್ ಡಿಸೊಜಾ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending