Saturday, November 27, 2021

Good News : ದ.ಕ. ದಲ್ಲಿ ಹೊಸ ಕೊರೋನಾ ಪ್ರಕರಣ ದಾಖಲಾತಿಯಲ್ಲಿ ತೀವ್ರ ಇಳಿಕೆ..!

Good News : ದ.ಕ. ದಲ್ಲಿ ಹೊಸ ಕೊರೋನಾ ಪ್ರಕರಣ ದಾಖಲಾತಿಯಲ್ಲಿ ತೀವ್ರ ಇಳಿಕೆ..!

ಮಂಗಳೂರು : ರಾಜ್ಯದಲ್ಲಿನ ಉಳಿದ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕೊರೊನಾ ಪ್ರಕರಣ ದಾಖಲಾತಿಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ.

ರವಿವಾರ 139 ಮಂದಿಗೆ ಕೊರೋನ ಸೋಂಕು ತಗುಲಿದ್ದು, 3 ಮಂದಿ ಮಾತ್ರ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದೇ ಸಂದರ್ಭ 211 ಮಂದಿ ಗುಣಮುಖರಾಗಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 2,45,373 ಮಂದಿಯ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 2,15,833 ಮಂದಿಯ ವರದಿ ನೆಗೆಟಿವ್ ಮತ್ತು 29,540 ಮಂದಿಯ ವರದಿ ಪಾಸಿಟಿವ್ ಬಂದಿದೆ.

ಅಲ್ಲದೆ ಒಟ್ಟು 663 ಮಂದಿ ಸಾವಿಗೀಡಾಗಿದ್ದಾರೆ. 26,336 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 2,541 ಸಕ್ರಿಯ ಪ್ರಕರಣಗಳಿವೆ.

ಇದೇ ಸಂದರ್ಭ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 9,550 ಪ್ರಕರಣಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲಿಸಲಾಗಿದ್ದು,10,82,005 ರೂ. ದಂಡ ವಸೂಲಿ ಮಾಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...