LATEST NEWS
ಕೆಎಸ್ ಆರ್ ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ !
Published
7 days agoon
By
NEWS DESK3ಮಂಗಳೂರು/ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಗಳಲ್ಲಿ ಈಗಗಾಲೇ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಈಗ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ.
ಡಿಜಿಟಲ್ ಇಂಡಿಯಾ ಅಭಿಯಾನದಡಿ ದೇಶಕ್ಕೆ ದೇಶವೇ ಈಗಾಗಲೇ ಡಿಜಿಟಲ್ ಪಾವತಿ ಮಾಡುತ್ತಿದೆ. ಅದೇ ರೀತಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್ಆರ್‌ಟಿಸಿ ಬಸ್ಗಳಿಗೂ ವಿಸ್ತರಣೆಯಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೆಎಸ್ಆರ್‌ಟಿಸಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಇದನ್ನೂ ಓದಿ: ದರ್ಶನ್ ಗೆ ರಾಜ್ಯ ಸರ್ಕಾರದಿಂದ ಶಾಕ್ !
ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನವೆಂಬರ್ 6 ರಂದು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲಾ 8,941 ಬಸ್‌ಗಳಿಗೆ ವಿಸ್ತರಿಸಲಾಗಿದೆ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಆರಂಭದಲ್ಲೇ ಗಣನೀಯ ಯಶಸ್ಸನ್ನು ಸಾಧಿಸಿದೆ. ಸಂಸ್ಥೆಯ ದೈನಂದಿನ ಆದಾಯದ 7 ಕೋಟಿ ರೂ. (ಶಕ್ತಿ ಯೋಜನೆ ಮತ್ತು ವಿದ್ಯಾರ್ಥಿ ಪಾಸ್ ಫಲಾನುಭವಿಗಳನ್ನು ಹೊರತುಪಡಿಸಿ) ಪೈಕಿ 30-40 ಲಕ್ಷ ರೂಪಾಯಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಮೂಲಕವೇ ಪಾವತಿಯಾಗಿದೆ ತಿಳಿದುಬಂದಿದೆ
ಎನಿವೇರ್ ಎನಿಟೈಮ್ ಅಡ್ವನ್ಸ್ಡ್ ರಿಸರ್ವೇಶನ್ (ಅವತಾರ್) ಮೂಲಕ 28,000 ಬುಕ್ಕಿಂಗ್ ಗಳಿಂದ ಕೆಎಸ್ ಆರ್ ಟಿಸಿ ಇನ್ನೂ 1.5 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದೆ. 2024-25ರ ಆರ್ಥಿಕ ಅಂತ್ಯದ ವೇಳೆಗೆ, ತನ್ನ ದೈನಂದಿನ ಆದಾಯದ ಶೇ.60-70 ರಷ್ಟನ್ನು ಡಿಜಿಟಲ್ ಮತ್ತು ಕ್ಯುಆರ್ ಕೋಡ್ ಪಾವತಿ ವಿಧಾನಗಳ ಮೂಲಕ ಪಡೆಯುವ ಗುರಿಯನ್ನು ಕೆ ಎಸ್ ಆರ್ ಟಿಸಿ ಹೊಂದಿದೆ.
ಒಟ್ಟಿನಲ್ಲಿ ಕೆಎಸ್ ಆರ್ ಟಿಸಿ ಬಸ್ಸಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕರಿಗೆ ಡಿಜಿಟಲ್ ಪಾವತಿಯೊಂದಿಗೆ ಚಿಲ್ಲರೆ ಕಾಟ ತಪ್ಪಿದಂತಾಗುತ್ತದೆ.
DAKSHINA KANNADA
ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ
Published
13 minutes agoon
12/12/2024ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.
2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :
ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.
Ancient Mangaluru
ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !
Published
27 minutes agoon
12/12/2024By
NEWS DESK3ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.
DAKSHINA KANNADA
ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ
Published
30 minutes agoon
12/12/2024ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.
ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್ ಡಿ’ ಸೋಜಾ ತಿಳಿಸಿದರು.
ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್.ಆರ್.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!
ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ.
LATEST NEWS
ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ
ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್ ಚಲನಚಿತ್ರ ತೆರೆಗೆ !!
ಆರ್ಬಿಐ ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ !!
ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ !
ವಿಚ್ಛೇದನ ನೀಡದೆ ಎರಡನೇ ಮದುವೆ; ಮಂಟಪದಲ್ಲೇ ಮೊದಲ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ
Trending
- BIG BOSS4 days ago
ಚೈತ್ರಾ ಕಣ್ಣೀರು, ಐಶ್ವರ್ಯ ಆಕ್ಟಿವಿಟಿ ರೂಮ್….ಎಲಿಮಿನೆಟ್ ಆಗಿದ್ದು ?
- BIG BOSS5 days ago
BBK11: ಈ ವಾರ ಬಿಗ್ಬಾಸ್ ಮನೆಯಲ್ಲಿ ಕಾದಿದ್ಯಾ ಬಿಗ್ ಟ್ವಿಸ್ಟ್; ಎಲಿಮಿನೇಷನ್ ಇರೋದು ಡೌಟ್
- BIG BOSS5 days ago
ಬಿಗ್ಬಾಸ್ ನಿರ್ಧಾರಗಳಿಗೆ ರೆಸ್ಪೆಕ್ಟೇ ಇಲ್ಲ -ಇಬ್ಬರು ಸ್ಪರ್ಧಿಗಳಿಗೆ ಕಿಚ್ಚ ಖಡಕ್ ಕ್ಲಾಸ್
- BANTWAL6 days ago
ಬಂಟ್ವಾಳ: ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ