ಕೊರೋನಾ ಶುಭಸುದ್ದಿ : ಭಾರತ್ ಬಯೋಟೆಕ್ನಿಂದ ಪ್ರಾಣಿಗಳ ಮೇಲೆ ಕೊವಾಕ್ಸಿನ್ ಕೊರೋನಾ ಲಸಿಕೆ ಯಶಸ್ವಿ..!
ನವದೆಹಲಿ : ಕೊರೋನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಕೆಲವು ಈಗಾಗಲೇ ಲಸಿಕೆಗಳು ಆರಂಭದಲ್ಲೇ ಫಲ ಕಾಣದೇ ವಿಫಲವಾಗಿವೆ, ಈ ಮಧ್ಯೆ ಭಾರತದಲ್ಲೇ ಭಾರಿ ನಿರೀಕ್ಷೇ ಇಟ್ಟುಕೊಂಡಿರುವ ಲಸಿಕೆ ಶುಭ ಸುದ್ದಿಯನ್ನು ನೀಡಿದೆ.
ಪ್ರಮುಖ ಔಷಧಿ ಸಂಸ್ಥೆಗಳಲ್ಲೊಂದಾದ ಹೈದ್ರಾಬಾದಿನ ಭಾರತ್ ಬಯೋಟೆಕ್ ಕಂಡುಹಿಡಿದಿರುವ ಕೊರೋನಾ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದ್ದು, ಆ ಲಸಿಕೆ ಯಶಸ್ವಿಯಾಗಿದೆ ಎಂದು ಘೋಷಿಸಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಜೊತೆ ಸೇರಿಕೊಂಡು ಭಾರತ್ ಬಯೋಟೆಕ್ ಇಂಡಿಯಾ ಲಿಮಿಟೆಡ್ ಕೊವಾಕ್ಸಿನ್ ಲಸಿಕೆಯನ್ನು ಕಂಡುಹಿಡಿದಿದೆ. ಈಗಾಗಲೇ ಈ ಲಸಿಕೆಯನ್ನು ಪ್ರಾಣಿಗಳ ಪ್ರಯೋಗ ಮಾಡಲಾಗಿದ್ದು, ಯಶಸ್ಸು ಸಿಕ್ಕಿದೆ.
ಈ ಮೂಲಕ ಭಾರತದ ಔಷಧ ಕಂಪನಿಯೊಂದು ಕೊರೋನಾ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ಬಹುತೇಕ ಯಶಸ್ಸು ಕಂಡಿದೆ.ವಿಶ್ವದಲ್ಲಿ ಸುಮಾರು 140 ಕಂಪೆನಿಗಳಲ್ಲಿ ಕೋವಿಡ್-19ಗೆ ಲಸಿಕೆ ಕಂಡುಹಿಡಿಯುತ್ತಿರುವ ಕಾರ್ಯ ನಡೆಯುತ್ತಿದೆ. ಅವುಗಳಲ್ಲಿ 16 ಕಂಪೆನಿಗಳು ಕ್ಲಿನಿಕಲ್ ಪ್ರಯೋಗದ ಹಂತ ತಲುಪಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಅವುಗಳಲ್ಲಿ ಚೀನಾ ದೇಶದಲ್ಲಿ 5, ಅಮೆರಿಕದಲ್ಲಿ 3, ಇಂಗ್ಲೆಂಡ್ ನಲ್ಲಿ 2, ಜರ್ಮನಿ, ರಷ್ಯಾ ಮತ್ತು ಆಸ್ಟ್ರೇಲಿಯಾಗಳಲ್ಲಿ ತಲಾ ಒಂದು ಕಂಪೆನಿಗಳು ಕ್ಲಿನಿಕಲ್ ಪ್ರಯೋಗ ಹಂತ ತಲುಪಿವೆ.
ಇದೀಗ ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಗೆ ಭಾರತ್ ಬಯೋಟೆಕ್ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿತ್ತು.
ಇದೀಗ ಈ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೊವಾಕ್ಸಿನ್ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದ್ದು, ಯಶಸ್ವಿಯಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ಟ್ವೀಟ್ ಮಾಡಿದೆ.
ಭಾರತ್ ಬಯೋಟೆಕ್ ಸಂಸ್ಥೆ ಇದುವರೆಗೆ ಪೋಲಿಯೋ, ರೇಬಿಸ್, ರೊಟಾ ವೈರಸ್, ಚಿಕಾನ್ ಗುನ್ಯಾ, ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಜಿಂಕಾ ವಿರುದ್ಧದ ಕಾಯಿಲೆಗಳಿಗೆ ಲಸಿಕೆಯನ್ನು ಕಂಡುಹಿಡಿದಿದೆ. ಇದೀಗ ಮಾರಣಾಂತಿಕ ಕೊರೋನಾ ವೈರಸ್ಗೂ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ಬಹುತೇಕ ಯಶಸ್ಸು ಕಂಡಿದೆ.
ಮಂಗಳೂರು/ಚಿಕ್ಕಮಗಳೂರು : ಆರು ಜನ ನಕ್ಸಲರು ಶರಣಾಗತಿ ಆದ ಬೆನ್ನಲ್ಲೇ ಪೊಲೀಸರು ಶಸ್ತ್ರಾಸ್ತ್ರ, ಮದ್ದು ಗುಂಡು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ಘಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಶರಣಾದ ಒಂದೇ ದಿನದಲ್ಲಿ ಮೂರು ಲಕ್ಷ ಪ್ಯಾಕೇಜ್ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಆಗಿದೆ. ಮತ್ತೊಂದು ಕಡೆ ಎನ್ ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ಬಿಜೆಪಿ ಮೊರೆ ಹೋಗುತ್ತಿದೆ.
ಶರಣಾಗತಿ ನಂತರ ನ್ಯಾಯದ ಪ್ರಕ್ರಿಯೆ ಶುರುವಾಗಿದೆ. 6 ಜನ ನಕ್ಸಲರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು 6 ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಒಟ್ಟು 14 ದಿನಗಳ ಕಾಲ ಅಂದ್ರೆ ಜನವರಿ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೆ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇದೆಲ್ಲದರ ನಡುವೆ ನಿನ್ನೆ ಕೊಪ್ಪ ತಾಲೂಕು ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಲೆಗುಳಿ ಕುಗ್ರಾಮ ಸಮೀಪದ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ.
ಎಕೆ 56, 303 ರೈಫಲ್, ಸ್ವದೇಶೀ ನಿರ್ಮಿತ ಪಿಸ್ತೂಲ್ ಸೇರಿದಂತೆ ಒಟ್ಟು ಶಸ್ತ್ರಾಸ್ತ್ರಗಳು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಂತೆ 7.62 ಎಂಎಂ ಎಕೆ ಮದ್ದುಗುಂಡು, ಬೋರ್ ಕರ್ಟ್ರಿಜ್ಗಳು, ಸ್ವದೇಶಿ ನಿರ್ಮಿತ ಪಿಸ್ತೂಲ್, ಮದ್ದುಗುಂಡುಗಳು ಸೇರಿದಂತೆ ಒಟ್ಟು 176 ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಜಯಪುರ ಪಿಎಸ್ ನಲ್ಲಿ ಅಪರಾಧ ಸಂಖ್ಯೆ 14/25 ರಲ್ಲಿ ಕಲಂ 3, 25(1), 7 ಮತ್ತು 25(10) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.
ಶರಣಾದ ನಕ್ಸಲರು ನೀಡಿರುವ ಮಾಹಿತಿ ಆಧರಿಸಿ ಈ ಕಾರ್ಯಚರಣೆ ನಡೆದಿದೆ ಎನ್ನಲಾಗಿದೆ. ನಕ್ಸಲರು ಶಸ್ತ್ರಾಸ್ತ್ರ ಒಪ್ಪಿಸಿಲ್ಲ ಎಲ್ಲಿ ಅಡಗಿಸಿದ್ದಾರೆ ಎನ್ನುವ ಪ್ರಶ್ನೆಗೆ ಮೊದಲ ಹಂತದ ಉತ್ತರ ಸಿಕ್ಕಿದಂತಾಗಿದೆ.
ಉಡುಪಿ : ಬೈಕ್ ಗೆ ಟ್ರಕ್ ಡಿ*ಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃ*ತಪಟ್ಟು, ಟ್ರಕ್ ಸಂಪೂರ್ಣ ಬೆಂ*ಕಿಗಾಹುತಿಯಾದ ಘಟನೆ ಶುಕ್ರವಾರ (ಜ.10) ಮದ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.
ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃ*ತ ಯುವಕ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರಕ್‌ಗೆ ಡಿ*ಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂ*ಭೀರ ಏ*ಟಾಗಿದ್ದ ಬೈಕ್ ಸವಾರ ಸ್ಥ*ಳದಲ್ಲೇ ಮೃ*ತಪಟ್ಟಿದ್ದಾನೆ.
ಘಟನೆಯ ಮರುಕ್ಷಣ ಟ್ರಕ್ ನಲ್ಲೂ ಬೆಂ*ಕಿ ಕಾಣಿಸಿಕೊಂಡಿದ್ದು ಟ್ರಕ್ ಸಂಪೂರ್ಣ ಬೆಂ*ಕಿಗೆ ಆ*ಹುತಿಯಾಗಿದೆ. ಮದ್ಯ ರಾತ್ರಿ ಘಟನೆ ಸಂಭವಿಸಿದ ಕಾರಣ ತುರ್ತು ಪರಿಹಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬೆಂ*ಕಿ ಹೊ*ತ್ತಿ ಉರಿದಿದೆ. ಉಡುಪಿ ಅ*ಗ್ನಿಶಾಮಕ ಸಿಬ್ಬಂದಿಗಳಿಂದ ಬೆಂ*ಕಿ ನಂದಿಸುವ ಕಾರ್ಯ ನಡೆದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.