ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪ್ರಪಾತಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಇಂದು ನಡೆದಿದೆ.
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪ್ರಪಾತಕ್ಕೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಇಂದು ನಡೆದಿದೆ.
ದಾವಣಗೆರೆ ಮೂಲದ ಗೂಡ್ಸ್ ವಾಹನ ಚಾರ್ಮಾಡಿ ಘಾಟ್ ಕಡೆಯಿಂದ ಬೆಳ್ತಂಗಡಿಗೆ ಕಡೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಘಟನೆಯಲ್ಲಿ ವಾಹನದ ಚಾಲಕ ಸೇರಿ ಇಬ್ಬರಿಗೂ ಸಣ್ಣ – ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ಇಬ್ಬರನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.