Sunday, July 3, 2022

ರಾಷ್ಟ್ರಪತಿ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದ ಗಾಂಧೀಜಿ ಮೊಮ್ಮಗ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಇಂದು ತಿರಸ್ಕರಿಸಿದ್ದಾರೆ.


77 ವರ್ಷ ವಯಸ್ಸಿನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನಂತರ ಪ್ರಸ್ತಾವನೆಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡ ಮೂರನೇ ರಾಜಕೀಯ ವ್ಯಕ್ತಿ ಗೋಪಾಲಕೃಷ್ಣ ಗಾಂಧಿ ಅವರಾಗಿದ್ದಾರೆ.

ಪ್ರತಿಪಕ್ಷದ ಹಲವಾರು ಗೌರವಾನ್ವಿತ ನಾಯಕರು ಮುಂಬರುವ ಚುನಾವಣೆಯಲ್ಲಿ ರಾಷ್ಟ್ರಪತಿಯ ಅತ್ಯುನ್ನತ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಲು ನನ್ನನ್ನು ಯೋಚಿಸಲು ಚಿಂತಿಸುವ ಮೂಲಕ ನನಗೆ ಗೌರವ ನೀಡಿದ್ದಾರೆ.

ನಾನು ಅವರಿಗೆ ಅತ್ಯಂತ ಕೃತಜ್ಞನಾಗಿದ್ದೇನೆ. ಆದರೆ ವಿಷಯವನ್ನು ಆಳವಾಗಿ ಪರಿಗಣಿಸಿದ ನಂತರ ವಿರೋಧ ಪಕ್ಷದ ಅಭ್ಯರ್ಥಿಯಾಗುವವರು ರಾಷ್ಟ್ರೀಯ ಒಮ್ಮತ ಮತ್ತು ರಾಷ್ಟ್ರೀಯ ವಾತಾವರಣವನ್ನು ಪ್ರತಿಪಕ್ಷಗಳ ಏಕತೆಯ ಜೊತೆಗೆ ಸೃಷ್ಟಿಸುವವರಾಗಿರಬೇಕು.

ನನಗಿಂತ ಉತ್ತಮವಾಗಿ ಇದನ್ನು ಮಾಡುವವರು ಇದ್ದಾರೆಂದು ನಾನು ಭಾವಿಸುತ್ತೇನೆ ಎಂದು ಗೋಪಾಲಕೃಷ್ಣ ಗಾಂಧಿ ಹೇಳಿದರು.

ರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿ ತಮ್ಮ ಹೇಳಿಕೆ ನೀಡಿದ್ದಾರೆ.

ಇತ್ತೀಚಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...