Saturday, July 2, 2022

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಡಿಜಿಟಲ್‌ ದಾಖಲೆ ಪ್ರದರ್ಶನಕ್ಕೆ ಪೊಲೀಸ್ ಅಸ್ತು

ಬೆಂಗಳೂರು: ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ.


ಡಿಜಿ ಲಾಕರ್ ಅಥವಾ ಎಂಪರಿವಾಹನ್ ಅಪ್ಲಿಕೇಶನ್‍ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ನಿಯಮ ಜಾರಿ ಮಾಡುವ ಅಧಿಕಾರಿಗಳು ಮೊಬೈಲ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ಈ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಧಿಕೃತ ಎಂದು ಪರಿಗಣಿಸಬೇಕು ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.


ಈ ಎರಡು ಅಪ್ಲಿಕೇಷನ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ದಾಖಲೆಗಳು ಸ್ವೀಕಾರಾರ್ಹ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಗಳು ಸ್ಪಷ್ಟಪಡಿಸಿವೆ. ಅಧಿಕಾರಿಗಳು ಇ ಚಲನ್ ಆಯಪ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸಬಹುದು. ಇದರಿಂದಾಗಿ ನಕಲಿ ದಾಖಲೆ ಹಾವಳಿಯನ್ನು ತಡೆಗಟ್ಟಲು ಸಾಧ್ಯ ಇದೆ. ವಾಹನ ಸವಾರರು ಪ್ಲೇ ಸ್ಟೋರ್‍ನಲ್ಲಿ ಡಿಜಿ ಲಾಕರ್ ಮತ್ತು ಎಂಪರಿವಾಹನ್ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ದಾಖಲಿಸಿ ಕೆವೈಸಿ ದಾಖಲಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಯುಗಾದಿ ಹಬ್ಬದ ಪ್ರಯುಕ್ತ ‘ದುಬೈ ಹೆಮ್ಮೆಯ ಯುಎಇ ಕನ್ನಡಿಗ’ರಿಂದ ಪ್ರತಿಭಾ ಸ್ಪರ್ಧೆ& ಪುರಸ್ಕಾರ

ದುಬೈ: ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಸಂಯುಕ್ತ ಅರಬ್ ಸಂಸ್ಥಾನದ ಕನ್ನಡ ಮಕ್ಕಳಿಗಾಗಿ ವಿವಿಧ ರೀತಿಯ ಕಲಾ ಪ್ರತಿಭಾ ಸ್ಪರ್ಧೆಯ ಗ್ರಾಂಡ್ ಫೈನಲ್ ಕಾರ್ಯಕ್ರಮ ಜೊತೆಗೆ ಹೆಚ್ಚು...

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್‌ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ.ಚರಂಡಿಗೆ ಮಣ್ಣು ಬಿದ್ದಿದ್ದರಿಂದ...

ಇಂದು ಮಧ್ಯಾಹ್ನ ಸುಳ್ಯದಲ್ಲಿ ಮತ್ತೆ ಕಂಪಿಸಿದ ವಸುಂಧರೆ

ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ಮತ್ತು ಮಡಿಕೇರಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 1.21 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.ಜೂ. 25 ರಂದು ಕರಿಕೆ‌‌ ಸಮೀಪ, ಜೂ. 28 ರಂದು ಎರಡು ಬಾರಿ,...