Connect with us

    LATEST NEWS

    ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​; ಪ್ರಯಾಣಿಕರಿಗೆ ಗಂಭೀರ ಗಾಯ

    Published

    on

    ಮಂಡ್ಯ: ಸರ್ಕಾರಿ ಬಸ್​ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

    ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್​ ಅಪಘಾತ ಕಂಡು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನ ರಕ್ಷಣೆ ಮಾಡಿದ್ದಾರೆ. ಮಾತ್ರವಲ್ಲದೆ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ.

    ಬಸ್​ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಕೆಲವು ಪ್ರಯಾಣಿಕರಿಗೆ ಗಂಭಿರ ಗಾಯವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    LATEST NEWS

    ರಾಜ್ಯದಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲು; ಎಲ್ಲಿ ಗೊತ್ತಾ!?

    Published

    on

    ಮಂಗಳೂರು/ ಹಾಸನ : ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದಿನಿಂದ(ಜು.1) ದೇಶಾದ್ಯಂತ ನೂತನ ಅಪರಾಧ ಕಾಯಿದೆ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಇಂದು ಕರ್ನಾಟಕದಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ. ಹಾಸನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ.

    ನೂರಕ್ಕೂ ಹೆಚ್ಚು ವರ್ಷಗಳಿಂದ ಜಾರಿಯಲ್ಲಿದ್ದ ಹಳೆಯ ಕ್ರಿಮಿನಲ್ ಕಾನೂನುಗಳಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಐಪಿಸಿ, ಸಿಆರ್​ಪಿಸಿ, ಎವಿಡೆನ್ಸ್ ಆ್ಯಕ್ಟ್ ಬದಲು ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ. ಸಾಕ್ಷ್ಯ ಅಧಿನಿಯಮ ಇಂದಿನಿಂದ(ಜುಲೈ 1) ಜಾರಿಗೆ ಬಂದಿದೆ.

    ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಪೊಲೀಸರು, ಇದನ್ನು ಭಾರತೀಯ ನ್ಯಾಯ ಸಂಹಿತೆ (ಬಿಎನ್​ಎಸ್​) ಸೆಕ್ಷನ್ 281, 106 ಅಡಿ ದೂರು ದಾಖಲಿಸಿದ್ದಾರೆ.

    ಏನಿದು ಪ್ರಕರಣ?

    ಕಾಶಿ ಯಾತ್ರೆ ಮುಗಿಸಿ ವಾಪಾಸ್ ಆಗಿದ್ದ ದೂರುದಾರ ಶಂಕರೇಗೌಡ ಅವರ ಅತ್ತೆ ಇಂದುಮತಿ(67) ಮತ್ತು ಮಾವ ಯೋಗೇಶ್ ಅವರನ್ನು 01/07/2024 ರಂದು ಕಾರು ಚಾಲಕ ಸಾಗರ್ ಎಂಬಾತ ಬೆಂಗಳೂರು ಕೆಐಎಎಲ್ ಏರ್ಪೋರ್ಟ್ ನಿಂದ ಪಿಕಪ್ ಮಾಡಿದ್ದ. ಆದ್ರೆ, ಕಾರು ಹಾಸನದ ಹಳೆಬೀಡು ರಸ್ತೆ ಸೀಗೆಗೇಟ್ ಸಮೀಪದ ಸೇತುವೆಯಿಂದ ಪಲ್ಟಿಯಾಗಿತ್ತು. ಈ ಘಟನೆಯಲ್ಲಿ ಇಂದುಮತಿ ಇಹಲೋಕ ತ್ಯಜಿಸಿದ್ದರು. ಇನ್ನು ಇಂದುಮತಿ ಪತಿ ಯೋಗೇಶ್​ ಪಾರಾಗಿದ್ದರು.

    ಇದನ್ನೂ ಓದಿ : WATCH VIDEO : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪತ್ತೆ!

    ಈ ಹಿನ್ನೆಲೆಯಲ್ಲಿ ಇದೀಗ ಇಂದು (ಜುಲೈ 1) ಮೃ*ತ ಇಂದುಮತಿ ಅವರ ಅಳಿಯ ಶಂಕರೇಗೌಡ ಅವರು ಕಾರು ಚಾಲಕ ಸಾಗರ್​ ವಿರುದ್ಧ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಈ ದೂರಿ ಮೇರೆಗೆ ಹಾಸನ ಗ್ರಾಮೀಣ ಪೊಲೀಸರು, BNS 281,106 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಬಿಎನ್ಎಸ್ ಅಡಿ ಮೊದಲ ಪ್ರಕರಣ ಹಾಸನದಲ್ಲಿ ದಾಖಲಾದಂತಾಗಿದೆ.

    Continue Reading

    DAKSHINA KANNADA

    ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಿಂದ ಮನೆಗಳಿಗೆ ನುಗ್ಗುತ್ತಿದೆ ನೀರು…!

    Published

    on

    ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ

    ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಹೋಗಲು ಏರ್ಪೋರ್ಟ್ ಆಡಳಿತ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಕೆಂಜಾರು ಹಾಗೂ ಏರ್ಪೋರ್ಟ್ ಸುತ್ತಮುತ್ತಲಿನ ಹಲವು ಮನೆಗಳಿಗೆ ನೆರೆ ಭೀತಿ ಸೃಷ್ಟಿಯಾಗಿದೆ. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮಳೆ ನೀರನ್ನು ಅವೈಜ್ಞಾನಿಕವಾಗಿ ಹೊರ ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಟೇಬಲ್ ಟಾಪ್ ಏರ್ಪೋರ್ಟ್ ಆಗಿರುವ ಕಾರಣ ಕೆಲ ಭಾಗದ ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಈ ಮಧ್ಯೆ, ರಸ್ತೆ ತಡೆ ನಡೆಸಿದ ಕಾರಣ ಬಜ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

    ಸದ್ಯ ಗ್ರಾಮಸ್ಥರನ್ನು ಮನವೊಲಿಸಿ ರಸ್ತೆ ತೆರವು ಮಾಡಲಾಗಿದೆ. ಪ್ರತಿಭಟನಾನಿರತರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಒಂದು ಗಂಟೆಯ ಗಡುವು ನೀಡಿದ್ದಾರೆ. ಸ್ಥಳಕ್ಕೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್ ನಾಯಕ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ಆಡಳಿತ ಅಧಿಕಾರಿಗಳು, ಸ್ಥಳೀಯರ ಜೊತೆ ಶಾಸಕ ಭರತ್ ಶೆಟ್ಟಿ ಚರ್ಚೆ ನಡೆಸಿದ್ದಾರೆ.

    Continue Reading

    LATEST NEWS

    WATCH VIDEO : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪತ್ತೆ!

    Published

    on

    ಮಂಗಳೂರು/ಬೀದರ್ : ಅಂ*ತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಜೋಕಾಲಿಯಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್‌ನಲ್ಲಿ ನಡೆದಿದೆ.

    ಅ*ನಾರೋಗ್ಯದಿಂದ ಮೃ*ತಪಟ್ಟಿದ್ದ ಮಗುವನ್ನ ಅಂ*ತ್ಯಸಂಸ್ಕಾರ ಮಾಡಲಾಗಿತ್ತು. ಆದರೆ ಮರುದಿನ ಅಂ*ತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃ*ತದೇಹ ಮರದ ಮೇಲೆ ಪತ್ತೆಯಾಗಿದೆ.

    ಏನಿದು ಘಟನೆ?

    ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬವರ ಒಂದೂವರೆ ವರ್ಷದ ಮಗು ಮೃ*ತಪಟ್ಟಿತ್ತು. ಹೀಗಾಗಿ ಮಗುವನ್ನು ಹೂಳಲಾಗಿತ್ತು. ಮಗುವನ್ನ ಹೊರ ತೆಗೆದು ಕಪ್ಪು ಬಟ್ಟೆಯಲ್ಲಿ ಮರಕ್ಕೆ ಕಟ್ಟಿ ಜೋಳಿಗೆಯಲ್ಲಿ ನೇತು ಹಾಕಲಾಗಿತ್ತು. ಮಾಟ ಮಂತ್ರ ಮಾಡುವವರು ಹೀಗೆ ಮಾಡಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ : WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?

    ದಫನ ಮಾಡಿದ ಮಗುವನ್ನು ಮತ್ತೆ ತೆಗೆದು ಮಾಟ, ಮಂತ್ರ ಪ್ರಯೋಗಗಳಿಗೆ ಬಳಸುವ ಸಲುವಾಗಿ ಈ ರೀತಿ ಮಾಡಲಾಗಿದೆ ಎಂದು ಜನರು ಊಹಿಸಿದ್ದಾರೆ. ಸದ್ಯ ಮರಕ್ಕೆ ಕಟ್ಟಿದ್ದ ಮಗುವಿನ ಮೃ*ತದೇಹವನ್ನು ಮತ್ತೆ ಅದೇ ಸ್ಥಳದಲ್ಲಿ ಗ್ರಾಮಸ್ಥರು ಅಂ*ತ್ಯಸಂಸ್ಕಾರ ಮಾಡಿದ್ದಾರೆ.

    Continue Reading

    LATEST NEWS

    Trending