Monday, July 4, 2022

ಹಿಂದೂಗಳಿಗೆ ಘಾಸಿಯಾಗುವ ಅಂಶಗಳ ಪಠ್ಯ ತೆಗೆಯಲು ಸರ್ಕಾರ ನಿರ್ಧಾರ..!

ಹಿಂದೂಗಳಿಗೆ ಘಾಸಿಯಾಗುವ ಅಂಶಗಳ ಪಠ್ಯ ತೆಗೆಯಲು ಸರ್ಕಾರ ನಿರ್ಧಾರ..!

ಉಡುಪಿ : ಆರನೇ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ಅಂಶಗಳಿವೆ ಎಂಬ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಪಾಠವನ್ನು ಕೈ ಬಿಡಲು ಶಿಕ್ಷಣ ಸಚಿವರು ಆದೇಶಿಸಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಅಂಶಗಳನ್ನು ಮಕ್ಕಳಿಗೆ ಪಠ್ಯ ಬೋಧಿಸುವುದು ಎಷ್ಟು ಸರಿ ಅನ್ನೊ ವಿಚಾರ ಇತ್ತೀಚೆಗೆ ಚರ್ಚೆಗೀಡಾಗಿತ್ತು.

ಈ ಕುರಿತು ಉಡುಪಿಯ ಅದಮಾರು ಮಠದ ಈಶಪ್ರೀಯ ತೀರ್ಥರು ಆಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು. ವಿವಾದಕ್ಕೆ ಕಾರಣವಾದ ಪಠ್ಯದ ಸಾರಾಂಶ ಈ ರೀತಿ ಇದೆ.

ಉತ್ತರ ವೇದ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ-ಯಜ್ಞಗಳ ಹೆಸರಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು.

ಇದರಿಂದ ಆಹಾರದ ಉತ್ಪಾದನೆ ಕುಂಠಿತವಾಯ್ತು. ಯಾಗಗಳಿಗೆ ಆಹಾರ ಧಾನ್ಯ-ಹಾಲು-ತುಪ್ಪಗಳನ್ನು ಹಾಕಿದ ಪರಿಣಾಮ ಆಹಾರದ ಅಭಾವವೂ ಉಂಟಾಯ್ತು.

ಯಾಗ ಯಜ್ಞಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಸಂಸ್ಕೃತ ವೆಂಬ ಪರೋಹಿತ ಭಾಷೆಯಲ್ಲಿ ಈ ಆಚರಣೆಗಳು ನಡೆಯುತ್ತಿದ್ದು ಜನ ಸಾಮಾನ್ಯರಿಗೆ ಇದು ಅರ್ಥವಾಗುತ್ತಿರಲಿಲ್ಲ.

ಸರಳ ಮಾರ್ಗಗಳ ಮೂಲಕ ಮುಕ್ತಿ ಹೊಂದಲು ಹೊಸ ಧರ್ಮವನ್ನು ಜನ ಅಪೇಕ್ಷಿಸುತ್ತಿದ್ದರು ಎಂದು ಈ ಪಠ್ಯದಲ್ಲಿ ಹೇಳಲಾಗಿತ್ತು. ಈಶಪ್ರಿಯ ತೀರ್ಥರು ಈ ವಿಚಾರಗಳನ್ನು ಆಕ್ಷೇಪಿಸಿ, ಯಾಗಳಿಗೆ ಮಹತ್ವ ಇತ್ತಾದರೂ, ಅದಕ್ಕೂ ಒಂದು ನಿಯಮ ಇತಿಮಿತಿಗಳಿತ್ತು ,

ಈ ಕುರಿತು ಭಾಗವತದಲ್ಲಿ ಉಲ್ಲೇಖವಿದೆ. ಎಲ್ಲಾ ಸಾಧಕರಿಗೂ ಯಾಗದಿಂದಲೇ ಮುಕ್ತಿ ಎಂಬ ಅಭಿಪ್ರಾಯ ಇರಲಿಲ್ಲ ಎಂದು 5 ಸಾವಿರ ವರ್ಷಗಳ ಹಿಂದೆ ಬಂದ ಭಾಗವತದಲ್ಲಿಯೇ ಹೇಳಿದೆ.

ಹಾಗಾಗಿ ಪಠ್ಯದಲ್ಲಿರುವ ಮಾತು ಸರಿಯಲ್ಲ ಎಂದು ಆಡಿಯೋದಲ್ಲಿ ತಿಳಿಸಿದ್ದರು. ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆ ಪಠ್ಯವನ್ನೇ ಕೈ ಬಿಡೋದಾಗಿ ಹೇಳಿದ್ದಾರೆ. ಸಚಿವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಈ ಪಾಠ ಪುಸ್ತಕ ಈ ವರ್ಷ ಪ್ರಕಟವಾಗಿದ್ದಲ್ಲ,

ಆದರೂ ಈ ವರ್ಷ ಈ ಪಾಠವನ್ನು ಮಾಡದಿರುವಂತೆ ಆದೇಶ ಮಾಡ್ತೇನೆ, ಜೊತೆಗೆ ಮುಂದಿನ ವರ್ಷ ಪಠ್ಯ ಪುಸ್ತಕ ಪ್ರಕಟವಾಗುವಾಗ ಈ ಪಾಠ ತೆಗೆಸುತ್ತೇನೆ.

ಈಗಾಗಲೇ ಪಠ್ಯ ಮುದ್ರಣವಾಗಿ ಮಕ್ಕಳಿಗೆ ತಲುಪಿದೆ. ಹಾಗಾಗಿ ಪಠ್ಯದಿಂದ ಹೊರತೆಗೆಯಲು ಆಗಲ್ಲ. ಈ ಬಗ್ಗೆ ವಿಷಾದವಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಡಿಸಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಗ್ರಾಮೀಣ...

ಉಡುಪಿ: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಕಂಟೈನರ್ ಲಾರಿ

ಉಡುಪಿ: ಗೋವಾ ಕಡೆಗೆ ರದ್ದಿ ಪೇಪರ್‌ ತುಂಬಿಕೊಂಡು ಹೊರಟ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶನಿವಾರ ರಾತ್ರಿ ಉಡುಪಿ ಮಣಿಪಾಲದ ಕೆಳಪರ್ಕಳದಲ್ಲಿ ನಡೆದಿದೆ.ಪರ್ಕಳದಿಂದ ಗೋವಾದ ಕಡೆಗೆ ಹೋಗುತ್ತಿದ್ದ...