BANTWAL
ಬಂಟ್ವಾಳದಲ್ಲಿ ಪಾಳುಬಿದ್ದ ಸರ್ಕಾರಿ ಶಾಲೆ-ಸ್ಥಳೀಯರ ಆಕ್ರೋಶ
Published
2 years agoon
By
Adminಬಂಟ್ವಾಳ: ಬಂಟ್ವಾಳ ನಗರ ವ್ಯಾಪ್ತಿಯಲ್ಲೇ ಇರುವ 6 ದಶಕಗಳ ಇತಿಹಾಸದ ಜಕ್ರಿಬೆಟ್ಟು ಗಿರಿಗುಡ್ಡೆ ಸರಕಾರಿ ಕಿ.ಪ್ರಾ.ಶಾಲೆಯು ಕಳೆದ 5 ವರ್ಷಗಳ ಹಿಂದೆ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟಿದ್ದು, ಇದೀಗ ಶಾಲಾ ಕಟ್ಟಡಗಳು ಪಾಳು ಬಿದ್ದಿವೆ.
ಈ ಕಟ್ಟಡಗಳನ್ನು ಬೇರೆ ಯಾವುದಾದರೂ ಸರಕಾರಿ ಉದ್ದೇಶಗಳಿಗೆ ಬಳಕೆ ಮಾಡಬಹುದೇ ಎಂದು ಪ್ರಶ್ನಿಸಿದರೆ ಶಾಲೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ವಿದ್ಯಾರ್ಥಿಗಳು ಬಂದರೆ ಮತ್ತೆ ತೆರೆಯಲಾಗುತ್ತದೆ ಎಂಬ ಉತ್ತರವನ್ನು ಶಿಕ್ಷಣ ಇಲಾಖೆ ನೀಡುತ್ತದೆ.
ಜಕ್ರಿಬೆಟ್ಟು ಶಾಲೆಯು ಮುಚ್ಚಲ್ಪಟ್ಟಿದ್ದರೂ ಚುನಾವಣಾ ಸಂದರ್ಭದಲ್ಲಿ ಮತಗಟ್ಟೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆ ಸಂದರ್ಭದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ದುರಸ್ತಿ ಪಡಿಸಲಾಗುತ್ತದೆ.
ಚುನಾವಣೆಯ ದಿನ ಬೀಗ ಹಾಕಿ ತೆರಳಿದರೆ ಮತ್ತೆ ಅಲ್ಲಿಗೆ ಬರುವುದು ಇನ್ನೊಂದು ಚುನಾವಣೆಯ ಸಂದರ್ಭದಲ್ಲೇ. ಆಗ ಮತ್ತೆ ಸಾವಿರಾರು ರೂಪಾಯಿಗಳ ದುರಸ್ತಿ ಕಾರ್ಯ ನಡೆಯುತ್ತದೆ.
ಶಾಲೆಯ ನಿವೇಶನವು ಶಾಲೆಯ ಹೆಸರಲ್ಲೇ ಇದ್ದು, ಕಟ್ಟಡವನ್ನು ಯಾವುದಾದರೂ ಸರಕಾರಿ ಉದ್ದೇಶಕ್ಕೆ ಬಳಕೆ ಮಾಡಿದರೆ ಕಟ್ಟಡ ಉಳಿಯುವ ಜತೆಗೆ ಪರಿಸರವೂ ಸ್ವಚ್ಛವಾಗಿರುತ್ತದೆ.
ಹೀಗಾಗಿ ಕನಿಷ್ಠ ಪಕ್ಷ ಜಕ್ರಿಬೆಟ್ಟು ಹೆದ್ದಾರಿ ಬದಿಯಲ್ಲೇ ಇರುವ ಅಂಗನವಾಡಿಯನ್ನಾದರೂ ಇಲ್ಲಿಗೆ ಸ್ಥಳಾಂತರ ಮಾಡುವುದಕ್ಕೆ ಅವಕಾಶವಿದೆಯೇ ಎಂಬುದರ ಕುರಿತು ಗಮನ ಹರಿಸಲಿ ಎಂದು ಸ್ಥಳೀಯರು ಸಲಹೆ ನೀಡುತ್ತಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಸಮೀಪದ ಗಿರಿಗುಡ್ಡೆಯಲ್ಲಿರುವ ಈ ಶಾಲೆಯು 1960ರಲ್ಲಿ ಸ್ಥಾಪನೆಯಾಗಿದ್ದು, 1ರಿಂದ 5ರ ತರಗತಿಗಳನ್ನು ಹೊಂದಿದೆ. ಒಟ್ಟು 36 ಸೆಂಟ್ಸ್ ನಿವೇಶನವನ್ನೂ ಹೊಂದಿದ್ದು, ಸುಸಜ್ಜಿತ ಕಟ್ಟಡ, ಅಕ್ಷರ ದಾಸೋಹ ಕೊಠಡಿ, ಶೌಚಾಲಯಗಳನ್ನೂ ಒಳಗೊಂಡಿದೆ.
ಆದರೆ ಪ್ರಸ್ತುತ ಶಾಲಾ ಕಟ್ಟಡದ ಬಾಗಿಲುಗಳು ತೆರೆದುಕೊಂಡಿದ್ದು, ಅಲ್ಲಿದ್ದ ಬೆಂಚುಗಳ ಜತೆಗೆ ಇತರ ಪರಿಕರಗಳು ಕದ್ದು ಹೋಗಿರುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಹೇಳುತ್ತಾರೆ.
ಒಂದು ಕಾಲದಲ್ಲಿ 400ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಶಾಲೆಯು ಕೊನೆಯ ವರ್ಷಗಳಲ್ಲಿ 13 ಮತ್ತು 6 ವಿದ್ಯಾರ್ಥಿಗಳಿಗೆ ಇಳಿದು, ಮುಚ್ಚುವ ಕೊನೆಯ ವರ್ಷ ಬರೀ 2 ವಿದ್ಯಾರ್ಥಿಗಳನ್ನು ಮಾತ್ರ ಹೊಂದಿತ್ತು.
ನಗರಕ್ಕೆ ಹತ್ತಿರದಲ್ಲೇ ಇದ್ದು ಎಲ್ಲಾ ಸೌಕರ್ಯಗಳನ್ನು ಹೊಂದಿದ್ದ ಶಾಲೆಯಲ್ಲಿ ಉತ್ತಮ ಶಿಕ್ಷಕರು ಕೂಡ ಇದ್ದರು. ಆದರೆ ಶಾಲೆಯನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿಬರುತ್ತಿದೆ.
ವಿದ್ಯಾರ್ಥಿಗಳಿಲ್ಲದೆ ಸರಕಾರಿ ಶಾಲೆಯನ್ನು ಮುಚ್ಚುವುದೆಂದರೆ ತಾತ್ಕಾಲಿಕವಾಗಿ ಮುಚ್ಚಿ ಮತ್ತೆ ವಿದ್ಯಾರ್ಥಿಗಳು ಬಂದರೆ ಅದನ್ನು ಪುನರಾರಂಭಗೊಳಿಸಲಾಗುತ್ತದೆ. ಬೇರೆ ಕಡೆಯಿಂದ ನಿಯೋಜನೆಯ ಆಧಾರದಲ್ಲಿ ಶಿಕ್ಷಕರನ್ನು ನೇಮಿಸಿ ಮುಂದಿನ ವರ್ಷ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ಶಾಲೆಯ ಕಟ್ಟಡದ ಪರಿಸ್ಥಿತಿ ಹೇಗಿರುತ್ತದೆ ಎಂದು ಕೇಳಿದರೆ ಇಲಾಖೆಯ ಬಳಿ ಉತ್ತರವಿಲ್ಲದಂತಾಗಿದೆ.
ಕಟ್ಟಡ ಬಳಕೆಯಾಗಲಿ
ನಾವೆಲ್ಲರೂ ಕಲಿತ ಶಾಲೆಯಾಗಿದ್ದು, ಅದನ್ನು ಉಳಿಸುವುದಕ್ಕೆ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಈಗ ಕಟ್ಟಡ ಪಾಳು ಬಿದ್ದಿದ್ದು, ಅದನ್ನು ನೋಡುವುದಕ್ಕೆ ತುಂಬಾ ಬೇಸರವಾಗುತ್ತಿದೆ.
ಹೀಗಾಗಿ ಅದನ್ನು ಯಾವುದಾದರೂ ಉದ್ದೇಶಕ್ಕೆ ಬಳಕೆ ಮಾಡಬೇಕು. ಇಲ್ಲದೇ ಇದ್ದರೆ ಅದು ಶಿಥಿಲಾವಸ್ಥೆಗೆ ತಲುಪಿ ಬಿದ್ದು ಹೋಗುತ್ತದೆ. ಹೀಗಾಗಿ ಈ ಕುರಿತು ಸಂಬಂಧಪಟ್ಟವರು ಗಮನಹರಿಸಲಿ ಎಂಬುದು ನಮ್ಮ ಆಗ್ರಹವಾಗಿದೆ’ ಎನ್ನುತ್ತಾರೆ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಪೂಜಾರಿ ಗಿರಿಗುಡ್ಡೆ.
ಇನ್ನು ಈ ಬಗ್ಗೆ ಮಾತನಾಡಿರುವ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜಾನೇಶ್ ಎಂ.ಪಿ. ‘ವಿದ್ಯಾರ್ಥಿಗಳು ಇಲ್ಲದೇ ಇರುವ ಸಂದರ್ಭದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುವುದಾದರೆ ಅದನ್ನು ತಾತ್ಕಾಲಿಕ ನೆಲೆಯಲ್ಲಿ ಮುಚ್ಚಿ ಮತ್ತೆ ವಿದ್ಯಾರ್ಥಿಗಳು ಬಂದಾಗ ಅದನ್ನು ತೆರೆಯಲಾಗುತ್ತದೆ.
ಶಾಶ್ವತವಾಗಿ ಮುಚ್ಚಲಾಗಿದೆ ಎಂಬುದಿಲ್ಲ. ಆದರೆ ಮುಚ್ಚಿರುವ ಶಾಲಾ ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ’ ಎಂದು ಹೇಳಿದರು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION1 day ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ