LATEST NEWS
ರಾಜ್ಯದಲ್ಲಿ ಕೊರೋನಾ ರಾಜಕೀಯ ಬೇಡ-ಸತ್ಯಾಂಶ ತಿಳ್ಕೊಂಡು ಜನರಿಗೆ ಮಾಹಿತಿ ನೀಡಿ-ಸರ್ಕಾರಕ್ಕೆ ಖಾದರ್ ಟಾಂಗ್
ಬೆಳಗಾವಿ: ರಾಜ್ಯದಲ್ಲಿ ಕೊರೋನಾ ರಾಜಕೀಯ ಪ್ರಾರಂಭವಾಗಿದೆ. ಚೀನಾದ ಕೊರೋನಾ ಪ್ರಕರಣಗಳ ಅಂಕಿ ಅಂಶಗಳ ಆಧಾರದಲ್ಲಿ ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸುತ್ತಿರುವುದು ತಪ್ಪು. ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕೇ ಹೊರತು ಗೊಂದಲ ಸೃಷ್ಟಿ ಮಾಡಬಾರದು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಮಂಗಳವಾರ ಮಾತನಾಡಿದ ಯು ಟಿ ಖಾದರ್, ಮೊದಲು ಚೀನಾದಲ್ಲಿ ಆಗಿರುವ ಕೋವಿಡ್ ಬಗ್ಗೆ ನಿಜಾಂಶ ತಿಳಿದುಕೊಳ್ಳಬೇಕು.
ಚೀನಾದಲ್ಲಿ ನಿತ್ಯವೂ ಲಕ್ಷಾಂತರ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆ ಆಗುತ್ತಿವೆ. ಒಂದೇ ವಾರದಲ್ಲಿ 3 ಕೋಟಿಗೂ ಅಧಿಕ ಜನರಿಗೆ ಸೋಂಕು ತಗುಲಿತ್ತು ಅನ್ನೋದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ, ವಿಶ್ವ ಮಟ್ಟದಲ್ಲಿ ಆತಂಕ ಸೃಷ್ಟಿಸಿತ್ತು.
ಈ ಅಂಕಿ ಸಂಖ್ಯೆಯ ಬಗ್ಗೆ ಅನುಮಾನವಿದೆ. ಸರ್ಕಾರ ಇದನ್ನೇ ಮುಂದಿಟ್ಟುಕೊಂಡು ಗೈಡ್ಲೈನ್ಸ್ ಹೊರಡಿಸುತ್ತಿದೆ. ರಾಜಕೀಯಕ್ಕೋಸರ ಇದನ್ನೇ ಬಳಸಿಕೊಳ್ತಿದ್ದಾರೆ ಎಂದು ಖಾದರ್ ಆರೋಪ ಮಾಡಿದ್ದಾರೆ.
ಮೊದಲು ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಬಗ್ಗೆ ತಳಿಯಿಂದ ಹೇಗೆ ಜಾಗೃತರಾಗಬೇಕು ಎಂದು ಸರ್ಕಾರ ತಿಳಿಸಲಿ. ಇಂತಹ ವಿಚಾರದಲ್ಲಿ ಜನರಿಗೆ ಜಾಗೃತಿಯಾಗಲು ಸರ್ಕಾರ ಸೂಚಿಸಬೇಕು. ಜನಸಾಮಾನ್ಯರಲ್ಲಿ ಭಯ ಹುಟ್ಟಿಸುವ ಬದಲು ಜಾಗೃತರಾರುವಂತೆ ಸೂಚಿಸಿದರೆ ಒಳಿತು. ಯಾವುದೇ ದೇಶದಲ್ಲಿ ದೊಡ್ಡ ಮಟ್ಟದ ಅನಾಹುತದ ಬಗ್ಗೆ ಮಾಹಿತಿ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿ ಬಗ್ಗೆ ಸರ್ಕಾರ ಸ್ಪಷ್ಟತೆ ಕೊಡಲಿ ಎಂದು ಒತ್ತಾಯಿಸಿದರು.
ಜನರಿಗೆ ಮಾಸ್ಕ್ ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮದ ಬಗ್ಗೆ ಕೆಲಸ ಮಾಡಲಿ. ಆಕ್ಸಿಜನ್ ಪ್ಲಾಂಟ್ ಕ್ವಾಲಿಟಿ ಚೆಕ್ ಮಾಡಿಕೊಳ್ಳಬೇಕು. ಯಾವುದನ್ನೇ ಆಗಲಿ ಅನುಷ್ಠಾನ ಮಾಡುವಾಗ ದೂರ ದೃಷ್ಟಿಯಿಂದ ಆಲೋಚನೆ ಮಾಡಬೇಕು ಎಂದರು.
ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು. ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ನೋಡಿ ಯಾವುದೇ ಕೆಲಸಕ್ಕೆ ಕೈ ಹಾಕಿ ಎಂದು ಸರ್ಕಾರಕ್ಕೆ ಖಾದರ್ ಸಲಹೆ ನೀಡಿದರು.
.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!