Connect with us

MANGALORE

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗೆ ವಾಹನ ವಿತರಣೆ

Published

on

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶೀಲತಾ ಸಹಾಯಧನ ಯೋಜನೆಯಲ್ಲಿ ಮಂಜೂರಾದ ವಾಹನವನ್ನು ಫಲಾನುಭವಿಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ವಿತರಿಸಿದರು.

ಈ ವೇಳೆ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್‌, ಎ.ಕೆ ಅಶ್ರಫ್‌, ಎಂ.ಜಿ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

LATEST NEWS

Trending