ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ.10ರಿಂದ ಮೇ.25ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಬೆಳಿಗ್ಗೆ ಸುಮಾರು 2 ಗಂಟೆ ಕಾಲ ನಮ್ಮ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳ ಜೊತೆಗೆ, ಕೋವಿಡ್ ನಿಯಂತ್ರಣ ಬಾರದ ಈ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ ಕೈಗೊಳ್ಳಬೇಕು ಎನ್ನುವ ಬಗ್ಗೆ ಚರ್ಚಿಸಲಾಯಿತು. ಈಗ ಅಧಿಕಾರಿಗಳ ಜೊತೆಗೆ ತೀರ್ಮಾನಿಸಿಲಾಗಿದೆ ಎಂದರು.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ ಎಂದರು.