Connect with us

LATEST NEWS

“ಅಗ್ನಿಪಥ್‌ ಯೋಜನೆಗೆ ಕಾಂಗ್ರೆಸ್‌ನ ಮಕ್ಕಳನ್ನು ನಾವು ಕೇಳಿಲ್ಲ”

Published

on

ಮಂಗಳೂರು: ಅಗ್ನಿಪಥ್‌ ಯೋಜನೆಗೆ ಕಾಂಗ್ರೆಸ್‌ನ ಮಕ್ಕಳನ್ನು ನಾವು ಕೇಳಿಲ್ಲ. ಉದ್ಯೋಗಾವಕಾಶ ಬಯಸಿ ಬರುವವರಿಗೆ ಇಲ್ಲಿ ಅವಕಾಶ ಸಿಗುತ್ತದೆ.

ಎನ್‌ಡಿಎ ಸರ್ಕಾರ ಬಂದ ನಂತರ ಕಾಂಗ್ರೆಸ್‌ ಎಲ್ಲದಕ್ಕೆ ವಿರೋಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.


ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ದೇಶದಲ್ಲಿ 2014ರ ಬಳಿಕ ಎನ್‌ಡಿಎ ಸರಕಾರ ಬಂದ ಬಳಿಕ ಪರಿವರ್ತನೆ ಹಾದಿ ಆರಂಭಗೊಂಡಿದೆ. ರಾಷ್ಟ್ರಕ್ಕೆ ಒಳಿತಾಗುವ ಹತ್ತಾರು ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ.

ಆದರೆ ಎಲ್ಲಾ ಯೋಜನೆಗಳಿಗೆ ವಿರೋಧ ಮಾಡಿದ್ದು ಕಾಂಗ್ರೆಸ್‌. ಆದರಂತೆ ಅಗ್ನಿಪಥ್‌ ಯೋಜನೆಗೂ ಇದೀಗ ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಇಂದು ಎಲ್ಲರಿಗೂ ಮಿಲಿಟಲಿ ಸಂಸ್ಕಾರ ಸಿಗಬೇಕು, ಯುವಸೈನ್ಯ ಶಕ್ತಿ ದೇಶಕ್ಕೆ ಸಿಗಬೇಕು,

ರಾಷ್ಟ್ರಭಕ್ತಿ ಜಾಗೃತಿ ಆಗಬೇಕು ಎನ್ನುವ ಚಿಂತನೆ ಮೂಲಕ ಯೋಜನೆ ತರಲಾಗಿದೆ. ಇದಕ್ಕೆ ಕಾಂಗ್ರೆಸ್‌ನ ಮಕ್ಕಳನ್ನು ನಾವು ಕೇಳಿಲ್ಲ. ಉದ್ಯೋಗಾವಕಾಶ ಬಯಸಿ ಬರುವವರಿಗೆ ಇಲ್ಲಿ ಅವಕಾಶ ಸಿಗುತ್ತದೆ ಎಂದರು.
ಅಗ್ನಿ ಪಥ್ ಎನ್ನುವುದು ಮುಂದಿನ ಯುವಜನತೆಯ ಭವಿಷ್ಯತ್ತಿಗೆ ಮಾಡಿದ ಯೋಜನೆ. ಮುಂದಿನ ದಿನಗಳಲ್ಲೂ ಅವರಿಗೆ ಉದ್ಯೋಗದ ಅವಕಾಶ ಇದರಲ್ಲಿ ಇದೆ. ಕಾಂಗ್ರೆಸ್ ಎಲ್ಲದಕ್ಕೂ ವಿರೋಧ ಮಾಡುತ್ತಿದೆ ಎಂದರು.
ರೋಹಿತ್ ಚಕ್ರತೀರ್ಥ ವಿರುದ್ಧ ಇದೀಗ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಇದೆಲ್ಲಾ ಕಾಂಗ್ರೆಸ್ಸಿನ ದ್ವೇಷದ ಭಾವನೆ. ಕಾಂಗ್ರೆಸ್ ಕೆಲವು ವರ್ಷಗಳಿಂದ ನಿರಂತರವಾಗಿ ಗಲಭೆಗೆ ಪ್ರಚೋದನೆ ಕೋಡ್ತಾ ಇದೆ. ಕಾನೂನು ವಿಘ್ನ ಮಾಡುವುದು,

ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹುಟ್ಟುಹಾಕಿದ್ದು ಕೂಡಾ ಕಾಂಗ್ರೆಸ್. ಚಕ್ರ ತೀರ್ಥ ಏನು ಕೊಟ್ಟಿದ್ದಾರೆ, ಪಠ್ಯಪುಸ್ತಕದಲ್ಲಿ ಏನಿದೆ ಎನ್ನುವುದನ್ನು ಓದದೇ ಕಾಂಗ್ರೆಸ್ ಮೂರ್ಖತನದ ಪರಮಾವಧಿ ತೋರುತ್ತಿದೆ ಎಂದರು.

ಕಾಂಗ್ರೆಸ್ ಸರಕಾರ ಪುಸ್ತಕವನ್ನು ತೆಗೆದು ಓದಲಿ. ಸಾಹಿತಿಗಳೂ ಕೂಡಾ ಒಮ್ಮೆ ಯೋಚನೆ ಮಾಡಲಿ. ಯಾವ ಕಾಲಘಟ್ಟದಲ್ಲಿ ಯಾವ ವಿಚಾರ ಚರ್ಚೆಯಾಗಿದೆ. ಪುಸ್ತಕದ ಒಳಗೆ ಏನು ವಿಷಯ ಇದೆ ಎನ್ನುವುದನ್ನು ಯೋಚನೆ ಮಾಡಲಿ.

ಇಂತಹ ಹೋರಾಟ, ಪ್ರತಿಭಟನೆಗೆ ಹೆದರಿ ಸರಕಾರ ನಡೆಸಲು ನಾವು ಹೆದರುವುದಿಲ್ಲ. ನಮಗೆ ಸರಕಾರ ನಡೆಸುವುದು ಹೇಗೆಂದು ಗೊತ್ತಿದೆ. ಕ್ಷಮೆ ಕೇಳುವುದಿಲ್ಲ ಎಂದರು.

LATEST NEWS

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending