Wednesday, December 1, 2021

ಲವ್ ಜಿಹಾದ್ ತಡೆ ಕಾಯ್ದೆ – ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ಸರ್ಕಾರ ಬದ್ದ : ಗೃಹ ಸಚಿವ ಬೊಮ್ಮಾಯಿ..!

ಲವ್ ಜಿಹಾದ್ ತಡೆ ಕಾಯ್ದೆ – ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ಸರ್ಕಾರ ಬದ್ದ : ಗೃಹ ಸಚಿವ ಬೊಮ್ಮಾಯಿ..!

ಬೆಳಗಾವಿ : ಪ್ರೇಮದ ಹೆಸರಿನಲ್ಲಿ ಹೆಣ್ಣು ಮಕ್ಕಳ ಶೋಷಣೆ ತಡೆಗಟ್ಟಲು ಲವ್ ಜಿಹಾದ್ ತಡೆ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಇದೇ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಾಗುವುದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಚಳಿಗಾಲದ ಸಂದರ್ಭದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹೇರುವ ಕುರಿತು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಆದರೆ, ರಾತ್ರಿ ಕರ್ಫ್ಯೂ ವಿಧಿಸುವ ಸಂಬಂಧ ಚಿಂತನೆ ನಡೆದಿದೆ ಎಂದರು.

2021ರ ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹೇರುವ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಈ ಕುರಿತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಹೇಳಿದರು. ಮರಾಠಾ ಅಭಿವೃದ್ಧಿ ನಿಗಮ ರಚನೆ ಮಾಡಿರುವ ಸರಕಾರದ ತೀರ್ಮಾನವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‍ಗೆ ಜನತೆ ಸಹಕರಿಸಿಲ್ಲ.

ಎಲ್ಲ ವಾಹನ, ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿವೆ. ಒತ್ತಾಯಪೂರ್ವಕವಾಗಿ ಬಂದ್ ನಡೆಸಲು ಮುಂದಾದವರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...