Monday, January 24, 2022

ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್‌ ಸಂದೇಶ್ ಸಹಿತ ಹಲವು ಅಧಿಕಾರಿಗಳಿಗೆ ವರ್ಗಾವಣೆ..!

ಮಂಗಳೂರು :  ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಉತ್ತರ ಸಂಚಾರ ಪೊಲೀಸ್ ಠಾಣೆಯ ಮೋಹನ ಕೊಟ್ಟಾರಿ ಅವರನ್ನು ರೈಲ್ವೆ ಪೊಲೀಸ್ ಠಾಣೆಗೆ, ದ.ಕ. ಜಿಲ್ಲಾ ಡಿಎಸ್‌ಬಿಗೆ ವರ್ಗಾವಣೆ ಆದೇಶದಲ್ಲಿದ್ದ ಮಂಜಪ್ಪ ರಾಮಕೊಂಡಾಡಿ ಅವರನ್ನು ಕರಾವಳಿ ಕಾವಲು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಬೆಳ್ತಂಗಡಿ ಠಾಣೆಯ ಸಂದೇಶ್ ಪಿ.ಜಿ. ಅವರನ್ನು ಬಜ್ಪೆಪೊಲೀಸ್ ಠಾಣೆಗೆ, ಉರ್ವ ಠಾಣೆಯ ಮುಹಮ್ಮದ್ ಶರೀಫ್ ಅವರನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಗೆ, ಉಡುಪಿ ಸಿಇಎನ್ ಠಾಣೆಯ ರಾಮಚಂದ್ರ ನಾಯಕ್ ಅವರನ್ನು ದ.ಕ. ಜಿಲ್ಲಾ ಡಿಎಸ್‌ಬಿಗೆ, ಮಂಗಳೂರು ಉತ್ತರ ಠಾಣೆಯ ಗೋಂದರಾಜು ಬಿ. ಅವರನ್ನು ಐಎಸ್‌ಡಿಗೆ ಹಾಗೂ ಮಂಗಳೂರು ಉತ್ತರ ಠಾಣೆಗೆ ರಾಘವೇಂದ್ರ ಎಂ.ಬೈಂದೂರು ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.

2005ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಪ್ರಸ್ತುತ ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್‌ ಆಗಿರುವ ಸಂದೇಶ್ ಪಿ ಜಿ ಅವರು ಈ ಹಿಂದೆ ಹಿಂದೆ ಬಂಟ್ವಾಳ, ಕೊಪ್ಪ, ಕಾರ್ಕಳ, ಉಳ್ಳಾಲ, ಕದ್ರಿ, ಬೆಳ್ತಂಗಡಿ ಠಾಣೆಗಳಲ್ಲಿ ಎಸ್‌ ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಕೆಲವು ಸಮಯಗಳ ಹಿಂದೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದ ಅನುಭವ್ ಹೆಸರಿನ ಬಾಲಕನ ಕಿಡ್ನಾಪ್‌ ಪ್ರಕರಣದಲ್ಲಿ ಆರೋಪಿಗಳು 17 ಕೋಟಿ ರೂಪಾಯಿ ಬಿಟ್ ಕಾಯಿನ್‌ಗೆ ಬೇಡಿಕೆ ಇಟ್ಟ ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಇತ್ತೀಚೆಗೆ ಚಾಮರಾಜ ಠಾಣೆಯ ಪಿಎಸ್‌ಐ ವಿಶ್ವನಾಥ್ ಬಿರಾದಾರ್ ಪ್ರಕರಣದಲ್ಲಿ ತನಿಖೆಯನ್ನು ಸರಿಯಾಗಿ ನಡೆಸದೆ ಆರೋಪಿ ರಕ್ಷಣೆ ಮಾಡುವಲ್ಲಿ ಸಹಕರಿಸಿದ್ದರು ಎಂದು ಹೈಕೋರ್ಟ್‌ ಛೀಮಾರಿ ಹಾಕಿತ್ತು.

ಬೆಂಗಳೂರಿನ ಮಹಿಳೆಯೊಬ್ಬರಿಗೆ ವಂಚನೆ ನಡೆಸಿದ್ದ ಪಿಎಸ್‌ಐ ವಿಶ್ವನಾಥ್‌ ಬಿರಾದಾರ್ ಅತ್ಯಾಚಾರ ಪ್ರಕರಣದಲ್ಲಿ ಶಾಮೀಲಾಗಿದ್ದು, ಸಂತ್ರಸ್ತೆ ಯುವತಿ ಬೆಳ್ತಂಗಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಆದರೆ ಈ ಸಂದರ್ಭ ತನಿಖೆ ನಡೆಸದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿ ಠಾಣೆಯಲ್ಲಿ ಇದ್ದರೂ ಆತನನ್ನು ತನಿಖೆ ನಡೆಸದೇ ರಕ್ಷಣೆಗೆ ಮುಂದಾಗಿದ್ದರು ಎನ್ನುವ ಆರೋಪ ಕೂಡ ವ್ಯಕ್ತವಾಗಿತ್ತು.

Hot Topics

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...