BANTWAL
ಬಂಟ್ವಾಳ: ಕಸ ವಿಲೇವಾರಿ ವಾಹನ ತಾನೇ ಚಲಾಯಿಸಿದ ಗ್ರಾ. ಪಂ ಉಪಾಧ್ಯಕ್ಷೆ…!
Published
2 years agoon
By
Adminಬಂಟ್ವಾಳ: ಕಸ ವಿಲೇವಾರಿ ವಾಹನವನ್ನು ಸ್ವತ: ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆಯೇ ಚಲಾಯಿಸಿದ ಘಟನೆ ಬಂಟ್ವಾಳದ ಪೆರುವಾಯಿಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಫೀಝಾ ತಸ್ಲಿ ಈ ರೀತಿ ಚಾಲಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಹಿಳೆಯಾಗಿದ್ದು, ಈಕೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಮುಸ್ಲಿಂ ಸಮುದಾಯದಿಂದ ಬಂದ ಈ ಮಹಿಳೆ ಚಾಲಕಿಯಾಗಿ ದುಡಿಯುತ್ತಿರುವುದು ಸಮುದಾಯದ ಕೆಲವರ ಕೆಂಗಣ್ಣಿಗೆ ಪಾತ್ರವಾದರೂ, ಮನೆ ಮಂದಿಯ ಸಂಪೂರ್ಣ ಸಹಕಾರದಿಂದಾಗಿ ನಫೀಝಾ ತನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಪೆರುವಾಯಿ ಗ್ರಾಮ ಪಂಚಾಯತ್ ಗೆ ಕಸ ವಿಲೇವಾರಿಗಾಗಿ ಒಂದು ವಾಹನವನ್ನು ಖರೀದಿಸಲಾಗಿದೆ. ಎಲ್ಲಾ ಪಂಚಾಯತ್ ನಂತೆ ಈ ಗ್ರಾಮಪಂಚಾಯತ್ ಗೆ ಕೂಡಾ ಕಸ ವಿಲೇವಾರಿಗಾಗಿ ವಿಲೇವಾರಿ ಘಟಕ ಮತ್ತು ವಾಹನದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಆದರೆ ವಾಹನ ಬಂದು ಆರು ತಿಂಗಳು ಕಳೆದರೂ, ವಾಹನಕ್ಕೆ ಸರಿಯಾದ ಚಾಲಕರು ಸಿಗದ ಹಿನ್ನಲೆಯಲ್ಲಿ ಬಂದ ವಾಹನ ಘಟಕದಲ್ಲೇ ಪಾರ್ಕ್ ಮಾಡುವಂತಹ ಸ್ಥಿತಿ ಬಂದೊದಗಿತ್ತು.
ಆದ್ದರಿಂದ ಖಾಯಂ ವಾಹನ ಚಾಲಕಿ ಬರುವ ತನಕ ತಾನೇ ವಾಹನ ಚಾಲಕಿಯಾಗುವ ನಿರ್ಧಾರವನ್ನು ಕೈಗೊಂಡಿದ್ದಾರೆ. ನಫೀಝಾ ನಿರ್ಧಾರಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರೂ ಬೆಂಬಲ ಸೂಚಿಸಿದ ಹಿನ್ನಲೆಯಲ್ಲಿ ನಫೀಝಾ ಕಸ ವಿವೇವಾರಿ ವಾಹನದಲ್ಲಿ ಕಸ ಸಂಗ್ರಹಕ್ಕೆ ಶುರು ಮಾಡಿದ್ದಾರೆ.
ನಫೀಸಾರವರ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !
ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್..! 6 ಕೋಟಿ ಮೌಲ್ಯದ ಡ್ರ*ಗ್ಸ್ ಜಪ್ತಿ..!
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?