Connect with us

LATEST NEWS

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾ*ತ. ದಾರಿ ಮಧ್ಯೆ ಮೃ*ತ್ಯು

Published

on

ಉತ್ತರ ಪ್ರದೇಶ: ಸಾ*ವು ಹೇಗೆ ಬರುತ್ತೆ ಎಂಬುದನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಈಗಿದ್ದ ವ್ಯಕ್ತಿ ಇನ್ನೊಂದು ಕ್ಷಣದಲ್ಲಿ ಇರುತ್ತಾನೆ ಎಂದು ಹೇಳಲು ಸಾಧ್ಯವಿಲ್ಲ ಅದರಂತೆ ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಯ ಸಂಭ್ರಮದಲ್ಲಿ ತನ್ನ ಸಂಬಂಧಿಕರ ಜೊತೆ ನೃತ್ಯ ಮಾಡುತ್ತಲೇ ಹೃದಯಾಘಾ*ತಗೊಂಡು ಮೃ*ತಪಟ್ಟ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದು ಇದೀಗ ಕುಟುಂಬ ಸದಸ್ಯರು ಶಾಕ್ ಗೆ ಒಳಗಾಗಿದ್ದಾರೆ.

ಮೃ*ತ ದುರ್ದೈವಿಯನ್ನು ಭೋಜ್‌ಪುರ ಗ್ರಾಮದ ನಿವಾಸಿ ಶಿವಂ (22) ಎನ್ನಲಾಗಿದೆ.

ಶಿವಂ ಇಲ್ಲಿನ ಶಾಲೆಯೊಂದರಲ್ಲಿ ಕಂಪ್ಯೂಟರ್ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದ್ದು ಈತನಿಗೆ ಆಗ್ರಾದ ಮೋಹಿನಿ ಅವರೊಂದಿಗೆ ವಿವಾಹವಾಗಬೇಕಿತ್ತು ಅದರಂತೆ ಶಿವಂ ಮನೆಯಲ್ಲಿ ಸಂಭ್ರಮ ಮನೆಮಾಡಿತ್ತು ಅಲ್ಲದೆ ಮದುವೆ ಕಾರ್ಯಕ್ಕೆ ಕುಟುಂಬ ಸದಸ್ಯರು ಎಲ್ಲರು ಮನೆಗೆ ಬಂದಿದ್ದರು. ಸೋಮವಾರ(ನ.18) ರಂದು ಮದುವೆ ನಡೆಯಬೇಕಿತ್ತು ಅದರಂತೆ ಭಾನುವಾರ ಕುಟುಂಬ ಸದಸ್ಯರ ಜೊತೆಗೆ ಶಿವಂ ನೃತ್ಯ ಮಾಡುತ್ತಿದ್ದ ಈ ವೇಳೆ ಏಕಾಏಕಿ ಹೃದಯಾಘಾ*ತವಾಗಿದೆ ಕೂಡಲೇ ಕುಟುಂಬ ಸದಸ್ಯರು ಆತನನ್ನು ಆಸ್ಪತ್ರೆಗೆ ಕರೊದೊಯ್ದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಆತನ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಇತ್ತ ಶಿವಂ ಮೃ*ತಪಟ್ಟ ವಿಚಾರ ಗೊತ್ತಾಗುತ್ತಿದ್ದಂತೆ ಮನೆಯಲ್ಲಿ ಶೋಕ ಮಡುಗಟ್ಟಿದೆ. ಶಿವಂ ತನ್ನ ಕುಟುಂಬ ಸದಸ್ಯರ ಜೊತೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Watch Video:

International news

ರೋಹಿತ್ ಬಿಟ್ಟು, ಕೊಹ್ಲಿ ಆಟೋಗ್ರಾಫ್ ಪಡೆದಿದ್ದೇಕೆ ಆಸ್ಟ್ರೇಲಿಯಾ ಪ್ರಧಾನಿ ?

Published

on

ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.


ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.

ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು ! 

ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.

ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.

Continue Reading

LATEST NEWS

ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಜೇನು ದಾಳಿ : 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Published

on

ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಅವಾಂತರ ; ಕಾಲುವೆಗೆ ಬಿ*ದ್ದ ಕಾರು !!

Published

on

ಮಂಗಳೂರು/ಬರೇಲಿ: ಜಿಪಿಎಸ್ ಮ್ಯಾಪ್ ಮೂಲಕ ಸಾಗಿದ ಕಾರು ಕಾಲುವೆಗೆ ಬಿ*ದ್ದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಆದರೆ ಟಾಟಾ ಕಾರು ಈ ಪ್ರಯಾಣಿಕರ ಜೀವ ಉಳಿಸಿದ ಘಟನೆ ಬರೇಲಿಯ ಪಿಲಿಭಿತ್ ಹೆದ್ದಾರಿಯಲ್ಲಿ ನಡೆದಿದೆ.

ಎಲ್ಲೇ ಹೋಗಬೇಕಿದ್ದರೂ ದಾರಿಯಲ್ಲಿ ಸಿಕ್ಕವರನ್ನು ಕೇಳುವ ಪ್ರಶ್ನೆ ಇಲ್ಲ. ಗೂಗಲ್ ಮ್ಯಾಪ್ ಹಾಕಿದರೆ ಸಾಕು. ಹತ್ತಿರದ ಮಾರ್ಗ, ಕ್ರಮಿಸಬೇಕಾದ ದೂರ, ಸಮಯ ಎಲ್ಲವನ್ನು ಹೇಳುತ್ತೆ. ಆದರೆ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದ್ದಂತೆ ಜೀವನ ಸುಲಭವಾಗಬೇಕಿತ್ತು. ಆದರ ಬದಲಾಗಿ ಅ*ಪಾಯವೇ ಹೆಚ್ಚಾಗುತ್ತಿದೆ. ಕಾರಣ ಇದೇ ಜಿಪಿಎಸ್ ಮಾರ್ಗ ನಂಬಿ ತೆರಳುತ್ತಿರುವ ಪ್ರಯಾಣಿಕರು ಅಪಘಾತಕ್ಕೀಡಾಗುತ್ತಿರುವ ಘಟನೆಯೂ ಹೆಚ್ಚಾಗುತ್ತಿದೆ. 10 ದಿನಗಳ ಹಿಂದೆ ಮದುವೆ ಹೊರಟ ಕಾರು ಸೇತುವೆ ಮೇಲಿಂದ ಬಿದ್ದ ಮೂವರು ಪ್ರಾ*ಣಕ್ಕೆ ಕುತ್ತು ತಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಟಾಟಾ ಟಿಗೋರ್ ಕಾರಿನಲ್ಲಿ ಮೂವರು ಪ್ರಯಾಣ ಆರಂಭಿಸಿದ್ದಾರೆ. ದಾರಿ ಗೊತ್ತಿಲ್ಲದ ಕಾರಣ ಜಿಪಿಎಸ್ ಮ್ಯಾಪ್ ಆನ್ ಮಾಡಿ ವಿಳಾಸ ಹಾಕಿದ್ದಾರೆ. ಬಳಿಕ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಸಾಗಿದ್ದಾರೆ. ಆದರೆ ಬರ್ಕಾಪುರ ಗ್ರಾಮದ ಬಳಿ ಬರುತ್ತಿದ್ದಂತೆ ರಸ್ತೆ ಕಾಮಗಾರಿಗಳು ಎದುರಾಗಿದೆ. ಹೀಗಾಗಿ ರಸ್ತೆ ಸಂಚಾರ ಬದಲಿಸಲಾಗಿತ್ತು. ಆದರೆ ಗೂಗಲ್ ಮ್ಯಾಪ್ ಮಾತ್ರ ನೇರವಾಗಿ ಸಾಗಲು ಸೂಚಿಸಿದ ಕಾರಣ ಅದೇ ದಾರಿಯಲ್ಲಿ ಸಾಗಿದ ಕೆಲವೇ ಕ್ಷಣದಲ್ಲಿ ಕಾಲಾಪುರ ಕಾಲುವೆಗೆ ಕಾರು ಉರುಳಿ ಬಿದ್ದಿದೆ. ವೇಗವಾಗಿ ಸಾಗುತ್ತಿದ್ದ ಕಾರಣ ಅ*ಪಘಾತದ ಪ್ರಮಾಣ ಹೆಚ್ಚಾಗಿದೆ. ಟಾಟಾ ಮೋಟಾರ್ಸ‌ನ ಗರಿಷ್ಠ ಸುರಕ್ಷತೆಯ ಟಾಟಾ ಟಿಗೋರ್ ಸೆಡಾನ್ ಕಾರಾಗಿದ್ದ ಕಾರಣ ಪ್ರಯಾಣಿಕರ ಬದುಕುಳಿದಿದ್ದಾರೆ. ಸಣ್ಣ ಪುಟ್ಟ ಗಾ*ಯಗಳಾಗಿದ್ದರೂ ಮೂವರು ಪ್ರಯಾಣಿಕರ ಜೀ*ವಕ್ಕೆ ಯಾವುದೇ ಅಪಾಯವಾಗಿಲ್ಲ.

 

ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

 

ಅ*ಪಘಾತ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಮೂವರುು ಪ್ರಯಾಣಿಕರನ್ನು ಕಾರಿನಿಂದ ಹೊರತೆಗೆದಿದ್ದಾರೆ. ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಗಂ*ಭೀರ ಗಾ*ಯಗಳಿಲ್ಲದ ಕಾರಣ ಮೂವರು ಪ್ರಯಾಣಿಕರು ತಪಾಸಣೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಕಾರನ್ನು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ. ಗೂಗಲ್ ಮ್ಯಾಪ್ ನೀಡಿದ ತಪ್ಪು ಸೂಚನೆಯಿಂದ ಕಾರು ಕಾಲುವೆಗೆ ಮ*ಗುಚಿ ಬಿ*ದ್ದಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.

Continue Reading

LATEST NEWS

Trending

Exit mobile version