Connect with us

DAKSHINA KANNADA

ಕರಾವಳಿ ಉತ್ಸವ ಮೈದಾನದಲ್ಲಿ ಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ

Published

on

ಮಂಗಳೂರು: ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್‌ಸಿಎಫ್ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.

ಬಳಿಕ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.

ಈ ಅಂತರ್ಜಲ ಸುರಂಗವು ಹಲವು ಪ್ರಬೇದದ ಮೀನುಗಳೊಂದಿಗೆ ಸುಂದರ ಮತ್ಸ್ಯ ಲೋಕವನ್ನು ಸೃಷ್ಟಿಸಿ ಮಂಗಳೂರಿನ ಜನತೆಗೆ ರಸದೌತಣವನ್ನು ನೀಡಲು ಸಜ್ಜಾಗಿವೆ.

ಅಲ್ಲದೆ, ರೊಬೊಟಿಕ್ ಅನಿಮಲ್ ಶೋದಲ್ಲಿ ದೈತ್ಯಾಕಾರದ ವನಮೃಗಗಳು ಹಾಗೂ ಅವುಗಳ ಘರ್ಜನೆ ದಟ್ಟಾರಣ್ಯದಲ್ಲಿ ವಿಹರಿಸಿದ ಅನುಭವವನ್ನು ನೀಡಲಿದೆ.

ಈ ಮೊದಲು ಮಂಗಳೂರಿಗೆ ಸೋವಲ್ಡ್, ಅಕ್ವಾ ಶೋ, ಬರ್ಡ್ ಶೋ, ತಾಜ್‌ಮಹಲ್‌ನಂತಹ ವಿನೂತನ ರೀತಿಯ ಮೆಗಾ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ.

ಈ ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಪಿಂಗ್ ಮತ್ತು ಮನರಂಜನಾ ಮೇಳವಾಗಿರುತ್ತದೆ.

ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ, ವಿಶೇಷ ಮತ್ತು ಅತ್ಯಧಿಕ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸಲಿದೆ.

ಗೃಹ ಬಳಕೆ ಉತ್ಪನ್ನಗಳು, ಅಡುಗೆ ಮನೆ ಉತ್ಪನ್ನಗಳು, ಕೈಮಗ್ಗದ ಉತ್ಪನ್ನಗಳು, ಕರುಶಲ, ಉತ್ಪನ್ನಗಳು, ಡ್ರೆಸ್ ಮೆಟೀರಿಯಲ್ ಫ್ಯಾರನ್ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಲಿದೆ.

ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್ ಕಾರ್, ಜಾಯಿಂಟ್ ಸ್ಟೀಲ್, ಡ್ರಾಗನ್ ಟೇನ್, ಮೆದ್ರಿ ಕೊಲಂಬಸ್, 30 ಶೋಸ್, ಸೇರಿ ಹೌಸ್, ಏ‌ ಶಾಟ್, ಸ್ಟೇಸ್ ಜೆಟ್, ಇತ್ಯಾದಿಗಳು ಇವೆ.

ಮನೋರಂಜನೆಗೆ ಸಂಜೆ 4ರಿಂದ 9ರವರೆಗೆ ಮನೋರಂಜನೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಅವಕಾಶವಿರುತ್ತದೆ.

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮತ್ತು ಎನ್‌ಸಿಎಫ್ ವತಿಯಿಂದ ಚೈತನ್ಯ ಹಾಗೂ ವಿಜಯ ಕುಮಾರ್ ಮತ್ತು ನಿಸರ್ಗ ಪಬ್ಲಿಸಿಟಿಯ ಮಂಜುನಾಥ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending