Friday, August 19, 2022

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ – ಐವರು ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ – ಐವರು ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ: ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಕಲ್ಲಡ್ಕದ ಪಳನೀರು ಬಳಿ ಈ ಘಟನೆ ನಡೆದಿದ್ದು, ಬಾಳ್ತಿಲ ಗ್ರಾಮ ನಿವಾಸಿ ಉದಯ್​ ಎಂಬುವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಸಚ್ಚು, ಪಚ್ಚು, ಶ್ರೀನಿವಾಸ್, ಚಂದ್ರ, ಹರೀಶ್ ಎಂಬವರ ಮೇಲೆ ದೂರು ದಾಖಲಿಸಿದ್ದಾರೆ.


ನಿನ್ನೆ ಬೆಳಿಗ್ಗೆ 11.00 ಗಂಟೆಗೆ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಉದಯ ಎನ್ನುವವರು ಕಲ್ಲಡ್ಕ ಪಳನೀರ ಎಂಬಲ್ಲಿ ನಡೆದುಕೊಂಡು ಬರುತ್ತಿರುವ ಸಂದರ್ಭ ಆತನ ಪರಿಚಯದ ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇನ್ನೂ ಕೆಲವರು ಒಂದು ಆಕ್ಟೀವಾ ಮತ್ತು ರಿಕ್ಷಾದಲ್ಲಿ ಬಂದು ಉದಯ ಎಂಬವರನ್ನು ತಡೆದು ನಿಲ್ಲಿಸಿ, ಅವ್ಯಾಚ ಶಬ್ದಗಳಿಂದ ಬೈದು, ಕೈಯಿಂದ ಮತ್ತು ಮರದ ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಉದಯ ಜೋರಾಗಿ ಬೊಬ್ಬೆ ಹೊಡೆದಾಗ ಆರೋಪಿಗಳು ಮರದ ಕೋಲನ್ನು ಅಲ್ಲಿಯೇ ಬಿಸಾಡಿ, ಜೀವ ಬೆದರಿಕೆ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.


ಮೊಬೈಲ್‌ ತೆಗೆದಿರುವ ಬಗ್ಗೆ ಸಂಶಯಗೊಂಡು ಆರೋಪಿಗಳು ಹಲ್ಲೆ ನಡೆಸಿರುವುದಾಗಿ ಉದಯ ದೂರು ನೀಡಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಸಚ್ಚು, ಪಚ್ಚು, ಶ್ರೀನಿವಾಸ್, ಚಂದ್ರ, ಹರೀಶ್ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ಇಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಭರದ ಸಿದ್ದತೆ-ನಾಳೆ ವಿಟ್ಲ ಪಿಂಡಿ

ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ...