Connect with us

    LATEST NEWS

    WATCH VIDEO : ಮಣಿಪಾಲ : ಅಮಾಯಕ ಯುವಕನನ್ನು ಅಟ್ಟಾಡಿಸಿ ಹಲ್ಲೆ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

    Published

    on

    ಮಣಿಪಾಲ : ಅಮಾಯಕ ಯುವಕನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಹಲ್ಲೆಗೊಳಗಾದ ಯುವಕನನ್ನು ಮುಂಬೈ ಮೂಲದ ಆರುಷ್ ಕುಮಾರ್ (21 )ಎಂದು ಗುರುತಿಸಲಾಗಿದ್ದು, ಈತ ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಮಾತಿನ ಚಕಮಕಿ ನಡೆದಿದೆ.

    ಇಲ್ಲಿನ ಡಿ ಆಂಡ್ ಟಿ ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಪುಂಡರು ಆತನನ್ನು ಅಪಾರ್ಟ್ ಮೆಂಟ್ ವರೆಗೆ ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. ಅರುಷ್ ಮಂಜುನಾಥ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದಾನೆನ್ನಲಾಗಿದ್ದು, ರೂಂವರೆಗೆ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ಮಾಡಿದ್ದಾರೆ.

    ಅಷ್ಟೇ ಅಲ್ಲದೇ, ಆತನನ್ನು ರಕ್ಷಿಸಲು ಮುಂದಾದ ಆರುಷ್ ಸ್ನೇಹಿತರ ಮೇಲೂ ಹಲ್ಲೆ ಮಾಡಲಾಗಿದೆ. ಬಳಿಕ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಹಲ್ಲೆ ವೀಡಿಯೋ ಮೇಲೆ ಅರುಷ್ ನನ್ನ ಕರೆಸಿ ದೂರು ದಾಖಲಿಸಿಕೊಂಡ ಪೊಲೀಸರು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ನಿಗಾ ಇರಿಸಿರುವ ಮಣಿಪಾಲ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending