ಉಳ್ಳಾಲ ಪರಿಸರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು : ತುರ್ತುಸಭೆ ನಡೆಸಿದ ಶಾಸಕ ಖಾದರ್..!
ಮಂಗಳೂರು : ಉಳ್ಳಾಲ ಪ್ರದೇಶದ ಆಝಾದ್ ನಗರ, ಕೋಡಿ, ಪೋಲೀಸ್ ಠಾಣೆ, ಬಂಗೇರ ಲೇನ್, ಸಹಾರ ಆಸ್ಪತ್ರೆ ಪ್ರದೇಶದಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು ಮತ್ತು ಒಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆ ಪ್ರದೇಶದ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಮತ್ತು ಪ್ರಮುಖರೊಂದಿಗೆ ತುರ್ತು ಸಭೆಯನ್ನು ಶಾಸಕ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆ ಸಭಾಂಗಣದಲ್ಲಿ ನಡೆಸಿದರು.
ಬಳಿಕ ಮಾತನಾಡಿದ ಅವರು ಉಳ್ಳಾಲ ಪ್ರದೇಶದ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಮತ್ತು ಪ್ರಮುಖರೊಂದಿಗೆ ತುರ್ತು ಸಭೆಯನ್ನು ನಡೆಸಿ ದೀರ್ಘ ಚರ್ಚೆಯನ್ನು ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಯವರು, ಕೊರೋನಾದ ಬಗ್ಗೆ ಜನಪ್ರತಿನಿಧಿಗಳು, ಮನೆಮನೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿದ್ದಾರೆ.
ಈ ಪ್ರದೇಶದ ಮೀನುಗಾರರ, ರಿಕ್ಷಾಚಾಲಕರ, ರಸ್ತೆ ಬದಿ ವ್ಯಾಪಾರಸ್ಥರನ್ನು ಖಡ್ಡಾಯವಾಗಿ ಪರೀಕ್ಷೆ ಮಾಡಬೇಕು ಮತ್ತು ಸೋಂಕಿತ ಪ್ರದೇಶದಲ್ಲಿ ರಾಂಡಮ್ ಪರೀಕ್ಷೆ ಮಾಡಬೇಕೆಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು,
ಮುಂದಿನ ದಿನಗಳಲ್ಲಿ ಜನಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಿದ್ದೇವೆ, ಉಳ್ಳಾಲ ನಗರ ಸಭೆ ಆರೋಗ್ಯವಂತ ನಗರ ಸಭೆಯಾಗಬೇಕೆಂಬ ಉದ್ದೇಶದಿಂದ ಸೋಮವಾರದಂದು ಉಳ್ಳಾಲ ದರ್ಗಾ ಸಮಿತಿ, ಸಬೆಸ್ಟಿಯನ್ ಚರ್ಚಿನ ಧರ್ಮ ಗುರುಗಳು ಮತ್ತು ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ, ಮೊಗವೀರ ಪಟ್ನದ ಮುಖಂಡರು ಮತ್ತು ಉಳಿಯ ಕ್ಷೇತ್ರ, ಬಂಡಿಕೊಟ್ಯ ಕ್ಷೇತ್ರದ ಮತ್ತು ಮಸೀದಿ, ಚರ್ಚಿನ ಹಾಗೂ ಸಂಘ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದೇವೆ ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು.
ಉಳ್ಳಾಲ ನಗರಸಭೆಯ ಆಯುಕ್ತರಾದ ರಾಯಪ್ಪ, ಉಳ್ಳಾಲ ದರ್ಗಾದ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಶಾಂತ್, ಉಳ್ಳಾಲ ನಗರ ಸಭೆಯ ಆರೋಗ್ಯ ಅಧಿಕಾರಿ ಜಯಶಂಕರ್, ಜಿಲ್ಲಾ ಆರೋಗ್ಯ ಕೇಂದ್ರದ ರತ್ನಾಕರ್ ಉಪಸ್ಥಿತರಿದ್ದರು.
ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಕೊರೋನಾ ಹರಡಿರುವುದರಿಂದ ದಿನಾಂಕ 27-06-2020ರಂದು ಉಳ್ಳಾಲ ನಗರ ಸಭಾ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಸ್ಯಾನಿಟೈಸ್ ಮಾಡಬೇಕಾಗಿರುವುದರಿಂದ ಎಲ್ಲಾ ಅಂಗಡಿ ಮಾಲಕರು ಮಧ್ಯಾಹ್ನ 1.00ಗಂಟೆಯ ತನಕ ಅಂಗಡಿಯನ್ನು ಬಂದ್ ಮಾಡಿ ಸ್ಯಾನಿಟೈಸ್ ಮಾಡಲು ಸಹಕರಿಸಬೇಕಾಗಿ ಕೋರಲಾಗಿದೆ.
ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಇಂದು (ಶನಿವಾರ) ನಡೆದಿದೆ.
ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಶನಿವಾರ(ಜ.18)ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೋಮವಾರ(ಜ.20) ಪ್ರಕಟಿಸಲಿದ್ದಾರೆ.
2024ರ ಆಗಸ್ಟ್ 9 ರಂದು ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ ನಡೆಸಿ, ಹ*ತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶ ಕೇಳಿ ಬಂದಿತ್ತು. ದೇಶದ ಬಹುತೇಕ ಭಾಗಗಳಲ್ಲಿ ವೈದ್ಯರು ಮುಷ್ಕರ ನಡೆಸಿದ್ದರು. ಆಗಸ್ಟ್ 10 ರಂದು ಸಂಜಯ್ ರಾಯ್‌ನನ್ನು ಬಂಧಿಸಲಾಯಿತು.
ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಆರೋಪಿಗೆ ಗ*ಲ್ಲು ಶಿಕ್ಷೆ ಆಗಬೇಕು ಎಂದು ಸಿಬಿಐ ವಾದಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 12 ರಂದು ಆರಂಭವಾಗಿತ್ತು. ಒಟ್ಟು 50 ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲಾಗಿದೆ. ಆರೋಪಿಯ ವಿಚಾರಣೆ ಜ.9ರಂದು ಕೊನೆಗೊಂಡಿತ್ತು.
ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ಚಾಂಪಿಯನ್ಸ್ ಟ್ರೋಫಿ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ, 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್‌ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್‌ನೆಸ್ ಸಮಸ್ಯಗೆ ಒಳಗಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.