Connect with us

DAKSHINA KANNADA

ವರ್ಷಾಂತ್ಯಕ್ಕೆ ಭರ್ಜರಿ ಭೇಟೆ; ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 64ಲಕ್ಷದ ಚಿನ್ನ ವಶಕ್ಕೆ-ಇಬ್ಬರ ಬಂಧನ..!  

Published

on

ವರ್ಷಾಂತ್ಯಕ್ಕೆ ಭರ್ಜರಿ ಭೇಟೆ; ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 64ಲಕ್ಷದ ಚಿನ್ನ ವಶಕ್ಕೆ-ಇಬ್ಬರ ಬಂಧನ..!  

ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಷಾಂತ್ಯದ ಕೊನೇ ದಿನದಂದು ಕಸ್ಟಮ್ಸ್ ಅಧಿಕಾರಿಗಳು ಭಾರೀ  ಚಿನ್ನದ ಭೇಟೆಯಾಡಿದ್ದಾರೆ.ದುಬೈಯಿಂದ ಆಗಮಿಸಿದ್ದ ಪಡೀಲಿನ ನಿವಾಸಿಯೊಬ್ಬನು 24 ಕ್ಯಾರೆಟ್ ನ  25,69,05ರೂ ಬೆಲೆ ಬಾಳುವ 504.72ಗ್ರಾಂ ಶುದ್ಧ  ಚಿನ್ನದ ಹುಡಿಯನ್ನು ಗುಳಿಗೆ ರೂಪದಲ್ಲಿ ದೇಹದಲ್ಲಿ ಅಡಗಿಸಿ ತಂದು ಕಸ್ಟಮ್ಸ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಏತನ್ಮಧ್ಯೆ ಇನ್ನೊಬ್ಬ  ಆರೋಪಿ ದುಬೈಯಿಂದ ಆಗಮಿಸಿದ ತಲಪಾಡಿ ನಿವಾಸಿ 24ಕ್ಯಾರೆಟ್ನ  38,48,040 ರೂ ಬೆಲೆ ಬಾಳುವ  756 ಗ್ರಾಂ ಚಿನ್ನದ ಹುಡಿಯನ್ನು ಗುಳಿಗೆ (ಮಾತ್ರೆ)ರೂಪದಲ್ಲಿ ದೇಹದಲ್ಲಿ ಹುದುಗಿಸಿ ತಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಒಟ್ನಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರ್ಷಾಂತ್ಯದ ಕೊನೆ ದಿನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಟ್ಟು 1ಕೆಜಿ 260 ಗ್ರಾಂ ಚಿನ್ನದ ಭರ್ಜರಿ  ಬೇಟೆಯಾಡಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ : ಐಕಳ ಹರೀಶ್ ಶೆಟ್ಟಿ

Published

on

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ.  ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕವಾಗಿ ಮಾತನಾಡಿ, 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಯಿತು ಎಂದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟಕ್ಕೆ ಯಾರೇ ಅರ್ಜಿ ಸಲ್ಲಿಸಿದರೂ ಅರ್ಜಿಯನ್ನು ತಿರಸ್ಕರಿಸದೆ ಪರಿಶೀಲಿಸಿ ನೆರವನ್ನು ನೀಡಿದೆ ಎಂದರು.

ಇದನ್ನೂ ಓದಿ : ಆಕಾಶದಿಂದ ಬಿತ್ತು 500 ಕೆಜಿ ತೂಕದ ಹೊಳೆಯುವ ರಿಂಗ್..! ಏನಿದು ವಿಚಿತ್ರ..?

ಮುಖ್ಯ ಅತಿಥಿಯಾಗಿ ಆಗಮಿಸಿದ ಆಸ್ಟ್ರೇಲಿಯಾದ  ಉದ್ಯಮಿ ದಯಾನಂದ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ,  ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು,  ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ, ಸುಧಾಕರ  ಪೂಂಜ ಸುರತ್ಕಲ್,  ಹರ್ಷಕುಮಾರ್ ರೈ, ಗೀತಾ ರೈ, ಕೊಲ್ಲಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು.

ಉದಯ ಕುಮಾರ್ ಪ್ರಾರ್ಥನೆಗೈದರು. ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ ವಂದಿಸಿದರು.

Continue Reading

DAKSHINA KANNADA

ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ 30 ಲಕ್ಷ ರೂಪಾಯಿ ದರೋಡೆ

Published

on

 ಬಂಟ್ವಾಳ  : ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ದಾಳಿ ನಡೆಸಿ 30 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಈ ಘಟನೆ ನಡೆದಿದೆ.

ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿದ ಖದೀಮರು ಬರೋಬ್ಬರಿ 30 ಲಕ್ಷ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡು ಗಂಟೆಗಳವರೆಗೆ ತನಿಖೆ ನಡೆಸಿ, ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ : ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ

ಸ್ಥಳಕ್ಕೆ ದ.ಕ ಜಿಲ್ಲಾ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ  ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading

DAKSHINA KANNADA

ಮಂಗಳೂರು : ಖಾಸಗಿ ಬಸ್‌ ದರ ಹೆಚ್ಚಳ ರದ್ದು

Published

on

ಮಂಗಳೂರು: “ಮಂಗಳೂರಿನಲ್ಲಿ ಓಡಾಡುವ  ಖಾಸಗಿ ಬಸ್‌ಗಳ ಟಿಕೆಟ್‌ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ” ಎಂದು ಕೆನರಾ ಬಸ್‌ ಮಾಲಕರ ಸಂಘ ನಿರ್ಧರಿಸಿದೆ.

ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಸರಕಾರಿ ಬಸ್‌ ಟಿಕೆಟ್‌ ದರ ಏರಿಸಲು ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, “ರಾಜ್ಯ ಸರಕಾರದ ಶಕ್ತಿ ಯೋಜನೆ ಆರಂಭದ ಬಳಿಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ವಾಹನದ ಬಿಡಿ ಭಾಗಗಳು, ಡೀಸೆಲ್‌ ಬೆಲೆ ಏರಿಕೆಯಾಗುತ್ತಿದೆ. ಕೋವಿಡ್‌ ಬಳಿಕ ಬಸ್‌ ಮಾಲಕರೂ ಸಂಕಷ್ಟದಲ್ಲಿದ್ದು, ಬಸ್‌ ಟಿಕೆಟ್‌ ದರ ಏರಿಕೆ ಅನಿವಾರ್ಯ. ಆದರೆ ಸದ್ಯಕ್ಕೆ ಆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು” ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ಅಜೀಜ್‌ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ “ಮಂಗಳೂರಿನಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿ ಟಿಕೆಟ್‌ ದರ ಏರಿಕೆಯ ಬಗ್ಗೆ ಚಿಂತನೆ ನಡೆಸಿಲ್ಲ. ಸದ್ಯದ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು” ಎಂದು ಹೇಳಿದ್ದಾರೆ.

Continue Reading

LATEST NEWS

Trending

Exit mobile version