Connect with us

DAKSHINA KANNADA

ಬಾಡಿಗೆ ಮನೆ ಬದಲಿಸುವವರು ಗೃಹಜ್ಯೋತಿ ಲಾಭ ಮತ್ತೆ ಪಡೆಯುವುದು ಹೇಗೆ? ಏನಿದು ಡಿ-ಲಿಂಕ್ ಸೌಲಭ್ಯ! ಇಲ್ಲಿದೆ ಮಾಹಿತಿ..

Published

on

ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್ ಮಾಡುವುದು ಹೇಗೆ?

ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯ ಬಹುದಾಗಿದೆ. ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು.

ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌ .ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ರಾಜ್ಯದಲ್ಲಿ 2024ರ ಜೂನ್‌ವರೆಗೆ ಒಟ್ಟು 1.67 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ.

2023 ಆಗಸ್ಟ್ ನಿಂದ 2024 ಜೂನ್‌ವರೆಗೆ ಸರಕಾರ 8239 ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಿದೆ. ಈ ಯೋಜನೆಯಿಂದ ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

DAKSHINA KANNADA

ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

Published

on

ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

Continue Reading

DAKSHINA KANNADA

ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

Published

on

ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

Continue Reading

bangalore

ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

Published

on

ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

Continue Reading

LATEST NEWS

Trending

Exit mobile version