Sunday, May 16, 2021

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು..!

ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ.

ವಾಹನವೊಂದರಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ದಾಳಿ ನಡೆಸಿ ಇರಿದು ಪರಾರಿಯಾಗಿದ್ದಾರೆ.

ತೀವ್ರಗಾಯಗೊಂಡ ಯುವಕನನ್ನು ಬ್ರಹ್ಮರಕೊಟ್ಲು ಸಮೀಪದ ನಿವಾಸಿ ಮನೋಜ್ ಎಂದು ಗುರುತ್ತಿಸಲಾಗಿದ್ದು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ,

ಮನೋಜ್ ವೃತ್ತಿಯಲ್ಲಿ ಇಂಜಿನೀಯರ್ ಆಗಿದ್ದು ವಿದೇಶದಲ್ಲಿ ನೌಕರಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ ಪಿ ವೆಲೈಂಟೆನ್ ಡಿ ಸೋಜಾ, ಇನ್ಸ್ ಪೆಕ್ಟರ್ ಚೆಲುವಾ ರಾಜ್ ಭೇಟಿ ನೀಡಿದ್ದು ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...