ತುಮಕೂರಿನಲ್ಲಿ ಕೊಲೆ ಆರೋಪಿ ಕಾಲಿಗೆ ಆರಕ್ಷಕರ ಗುಂಡೇಟು ಘಟನೆಯಲ್ಲಿ ಗಾಯಗೊಂಡ ಎಸ್ ಐ..!
ತುಮಕೂರು: ತುಮಕೂರಿನಲ್ಲಿ ಬೆಳ್ಳಂ ಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ತುಮಕೂರು ಬಳಿಯ ಅಜ್ಜಪ್ಪನ ಹಳ್ಳಿ ಬಳಿ ಈ ಘಟನೆ ನಡೆದಿದೆ.
ಕೆಲ ದಿನಗಳ ಹಿಂದೆ ತುಮಕೂರು ನಗರದಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ರೌಡಿ ಆರ್ಎಕ್ಸ್ ಮಂಜನ ಹತ್ಯೆಗೆ ಸಂಬಂಧಪಟ್ಟಂತೆ ಪ್ರಕರಣದ ಆರೋಪಿಯೊಬ್ಬ ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಈ ಸಂದರ್ಭ ಪ್ರಾಣ ರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ, ಪ್ರಕರಣ ಸಂಬಂಧ ಆರೋಪಿ ಇಂದು ಮುಂಜಾನೆ 5:30ರ ವೇಳೆ ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿನ ಅಜ್ಜಪ್ಪನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಮುದಾಯ ಭವನದಲ್ಲಿದ್ದ ಆರೋಪಿ ವಿಕಾಸ್ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.ಈ ವೇಳೆ ತಿಲಕ್ ಪಾರ್ಕ್ ಠಾಣೆಯ ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಆರೋಪಿಯನ್ನು ಹಿಡಿಯಲು ಯತ್ನಿಸಿದ ವೇಳೆ ಆರೋಪಿ ವಿಕಾಸ್ ಡ್ರಾಗರ್ನಿಂದ ಎಎಸ್ಐ ಪರಮೇಶ್ವರ್ ಹಾಗೂ ಇನ್ನೊಬ್ಬ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಕೂಡಲೇ ಆರೋಪಿ ವಿಕಾಸ್ ಗೆ ಪಿಎಸ್ಐ ನವೀನ್ ಶರಣಾಗುವಂತೆ ಸೂಚನೆ ನೀಡಿದ್ದರೂ ಕೂಡ, ವಿಕಾಸ್ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಕೂಡಲೇ ಆತ್ಮ ರಕ್ಷಣೆಗಾಗಿ ಪಿಎಸ್ಐ ನವೀನ್ ಅವರು ತಮ್ಮ ಪಿಸ್ತೂಲ್ಗೆ ಕೆಲಸ ಕೊಟ್ಟು ವಿಕಾಸ್ ಕಾಲಿಗೆ ಗುಂಡು ಹೊಡೆದಿದ್ದಾರೆ.
ಘಟನೆಯಾದ ಬಳಿಕ ಸಧ್ಯ ಆರೋಪಿ ವಿಕಾಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.