ಹೈದರಾಬಾದ್ : ಸೆಲ್ಫಿ ತೆಗೆಯುವ ವೇಳೆ ಯುವಕನೊಬ್ಬ ನಟಿ ಕಾಜಲ್ ಅಗರ್ವಾಲ್ ಅವರ ಸೊಂಟಕ್ಕೆ ಕೈ ಹಾಕಿದ್ದಾನೆ. ಈ ಘಟನೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ತಂದೆಯ ಜೊತೆಗೆ ಹೈದರಾಬಾದ್ನಲ್ಲಿ ಮಳಿಗೆಯೊಂದಕ್ಕೆ ಬಂದಿದ್ದ ನಟಿ ಕಾಜಲ್ ಅಗರ್ವಾಲ್ ಅವರಿಗೆ ಮುಜುಗರ ಆಗುವಂತಹ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ನಡೆದಿರುವ ಆ ಘಟನೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದಿದ್ದ ಮಳಿಗೆಯೊಂದರ ಲಾಂಚಿಂಗ್ ಕಾರ್ಯಕ್ರಮಕ್ಕೆ ಕಾಜಲ್ ಗೆಸ್ಟ್ ಆಗಿ ಹೋಗಿದ್ದಾರೆ. ಈ ವೇಳೆ ಅಲ್ಲಿ ಕಾಜಲ್ ಅವರ ಜೊತೆ ಸಾಕಷ್ಟು ಜನ ಸೆಲ್ಫೀ ಕೂಡಾ ತೆಗೆದುಕೊಂಡಿದ್ದಾರೆ. ಕಾಜಲ್ ಸುತ್ತಮುತ್ತ ಹಲವಾರು ಜನರಿದ್ರೂ ಸೆಲ್ಫಿ ತೆಗೆಯಲು ಬಂದಿದ್ದ ಯುವಕನೊಬ್ಬ ನಟಿಯ ಸೊಂಟಕ್ಕೆ ಕೈ ಹಾಕಿದ್ದಾನೆ. ತಕ್ಷಣ ರಿಯಾಕ್ಟ್ ಮಾಡಿದ ಕಾಜಲ್ ಆತನನ್ನು ದೂರ ಇರುವಂತೆ ಸನ್ನೆ ಮಾಡಿ ಏನು ಅಂತ ಪ್ರಶ್ನೆ ಮಾಡಿದ್ದಾಳೆ. ಈ ದೃಶ್ಯ ಈಗ ಸಾಕಷ್ಟು ವೈರಲ್ ಆಗಿದ್ದು, ನಟಿಯರ ಜೊತೆ ಇಂತಹ ಚಾನ್ಸ್ ತೆಗೆದುಕೊಳ್ಳುವ ಕ್ರಿಮಿಗಳ ಬಗ್ಗೆ ಟೀಕೆ ವ್ಯಕ್ತವಾಗಿದೆ. ಹಾಗಂತ ನಟಿ ಕಾಜಲ್ ಮಾತ್ರವಲ್ಲದೆ ಸಾಕಷ್ಟು ನಟಿಯರೂ ಕೂಡಾ ಇಂತಹ ಕೆಟ್ಟ ಕ್ಷಣವನ್ನು ಅನುಭವಿಸಿದ ಇತಿಹಾಸ ಇದೆ. ಕಾಜಲ್ ಸತ್ಯಭಾಮ ಎಂಬ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದು, ತಮಿಳಿನ ಇಂಡಿಯನ್ 2 ಸಿನೆಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ಸತ್ಯಭಾಮ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಕಾಜಲ್, ಇಂಡಿಯನ್ 2 ನಲ್ಲಿ ಕಮಲ್ ಹಾಸನ್ ಹಾಗೂ ಸಿದ್ದಾರ್ಥ್ ಮತ್ತು ರಾಕುಲ್ ಪ್ರೀತ್ ಸಿಂಗ್ ಜೊತೆ ಪ್ರಮುಖ ಪಾತ್ರದಲ್ಲಿ ಕಾಣಿಸಲಿದ್ದಾರೆ.
ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ.
ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ರಾಣಾ ಎಂಗೇಜ್ಮೆಂಟ್ ಆಗಿರುವ ಹುಡುಗಿ ಯಾರು? ಎಲ್ಲಿಯವರು? ಎಂಬ ಮಾಹಿತಿ ಬಹಿರಂಗವಾಗಿಲ್ಲ. ನಿಶ್ಚಿತಾರ್ಥದ ಫೋಟೋ ನೋಡಿದ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಪ್ರೇಮ್ ಮಿಸ್ ಯಾಕೆ?
ರಾಣಾ ಎಂಗೇಜ್ಮೆಂಟ್ ಸಮಾರಂಭದಲ್ಲಿ ನಟಿ ರಕ್ಷಿತಾ ಪ್ರೇಮ್ ಕುಟುಂಬ ಇದೆ. ಆದ್ರೆ ನಿರ್ದೇಶಕ ಪ್ರೇಮ್ ಇಲ್ಲ. ಅವರು ಏನು ಭಾಗಿಯಾಗಿಲ್ಲ ಎಂಬ ಅನುಮಾನ ಹುಟ್ಟಿರೋದು ಸಹಜ. ಪ್ರೇಮ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋದರಿಂದ ನಿಶ್ಚಿತಾರ್ಥದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಕೆಡಿ ಸಿನಿಮಾದ ಶೂಟಿಂಗ್ ಗಾಗಿ ಅವರು ಚಿಕ್ಕಮಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
ಏಕ್ ಲವ್ ಯಾ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಾಣಾ, ಪ್ರೇಮ್ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ್ ಈಶ್ವರ್ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಾನ್ವಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಆದಿತ್ಯ ನಂತರ ಬಾಲಿವುಡ್ನ ಸ್ಟಾರ್ ಆಗಿರೋ ಕಥೆಯೇ ರೋಚಕ.
ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.
‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.
ಕನ್ನಡ ಚಿತ್ರರಂಗ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿ ತಮ್ಮ ಚೊಚ್ಚಲ ಮಗುವನ್ನು ಸ್ವಾಗತಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ನವೆಂಬರ್ 12) ಅವಿವಾ ಬಿದ್ದಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸದ್ಯ ಅವಿವಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸಿಹಿ ಸುದ್ದಿ ಹೊರಬಿದಿತ್ತು. ಅದರ ಬೆನ್ನಲ್ಲೇ ಸೆಪ್ಟೆಂಬರ್ 18, 2024ರಂದು ಅವಿವಾ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಸೀಮಂತದಲ್ಲಿ ಅನೇಕ ಸಿನಿಮಾ ತಾರೆಯರು ಭಾಗಿಯಾಗಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಸೀಮಂತ ಕಾರ್ಯಕ್ರಮದ ಅವಿವಾ ಫೋಟೋ ನೋಡಿದ ಅಭಿಮಾನಿಗಳು ಗಂಡು ಮಗುವೇ ಜನಿಸುವುದು ಎಂದು ಗೆಸ್ ಮಾಡಿದ್ದರು. ಅವಿವಾ ಬಿದ್ದಪ್ಪ ಸಾಮಾಜಿಕ ಜಾಲತಾಣದಲ್ಲಿಗಳಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದಾಗಲೂ ಕೂಡ ಅನೇಕರು ಗಂಡು ಮಗು, ಅಂಬರೀಷ್ ಮತ್ತೆ ಹುಟ್ಟಿ ಬರುತ್ತಿದ್ದಾರೆ ಎನ್ನುವ ಕಮೆಂಟ್ಗಳನ್ನು ಮಾಡುತ್ತಿದ್ದರು.
ಇದೀಗ ಎಲ್ಲರ ನಿರೀಕ್ಷೆಗಳು ಸರಿಯಾಗಿದ್ದು ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಗಂಡು ಮಗುವಾಗಿದೆ. ಹೀಗಾಗಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಾಗಿ ಅಂಬರೀಷ್ ಅವರೇ ಮತ್ತೆ ಹುಟ್ಟಿ ಬಂದಿದ್ದಾರೆ ಎನ್ನುವ ಮಾತುಗಳು ಎಲ್ಲರ ಬಾಯಲ್ಲಿ ಇದೆ. ಜೊತೆಗೆ ಇನ್ನೊಂದು ವಿಶೇಷವಾದ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ ಏನು ಹೆಸರಿಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದ್ದರೆ. ಮುದ್ದಾದ ಮೊಗ್ಗಗನಿಗೆ ತಾತನ ಹೆಸರೇ ಇಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಅಂದರೆ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಮಗನಿಗೆ ಅಂಬರೀಷ್ ಅವರ ಹೆಸರೇ ಇಡಲಾಗುತ್ತದೆ. ಹಳೆಯ ಸಂಪ್ರದಾಯದಂತೆ ತಾತನ ಹೆಸರನ್ನೇ ಮೊಮ್ಮಗನಿಗೆ ಇಡುವ ಪದ್ಧತಿಯನ್ನು ಸುಮಲತಾ ಹಾಗೂ ಅಭಿಷೇಕ್ ಮುಂದುವರಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ ಕೆಲವರು ಹೊಸ ಹೆಸರಿಟ್ಟು ಸರ್ ನೇಮ್ ಅಂಬರೀಷ್ ಎಂದು ಇಡುವ ಸಾಧ್ಯತೆ ಎಂದು ಸಹ ಹೇಳುತ್ತಿದ್ದಾರೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಜೂನ್ 5, 2023ರಂದು ಪೋಷಕರ ಒಪ್ಪಿಗೆ ಪಡೆದು ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.