Connect with us

    DAKSHINA KANNADA

    ಕೊನೆಗೂ ವೇತನ ಪಾವತಿಸಿದ GVK; 108 ಸಿಬಂದಿ ಮುಷ್ಕರ ವಾಪಸ್‌, ಆಂಬ್ಯುಲೆನ್ಸ್‌ ಸೇವೆ ಆಭಾದಿತ..!

    Published

    on

    108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ಬಳಿಕ ವೇತನ ಪಾವತಿಯಾಗಿದ್ದು,ಪ್ರತಿಭಟನೆಗೆ ಸಜ್ಜಾಗಿದ್ದ ಆಂಬ್ಯುಲೆನ್ಸ್‌ ಸಿಬ್ಬಂದಿಯು ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

    ಬೆಂಗಳೂರು: 108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ಬಳಿಕ ವೇತನ ಪಾವತಿಯಾಗಿದ್ದು,ಪ್ರತಿಭಟನೆಗೆ ಸಜ್ಜಾಗಿದ್ದ ಆಂಬ್ಯುಲೆನ್ಸ್‌ ಸಿಬ್ಬಂದಿಯು ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದು, ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

    108 ಸೇವೆಯೂ ಎಂದಿನಂತೆ ಮುಂದುವರಿಯಲಿದೆ. ಮೂರು ತಿಂಗಳಿನಿಂದ ವೇತನ ಮಾಡಿಲ್ಲ ಎಂಬ ಕಾರಣಕ್ಕೆ 108 ಆಂಬ್ಯುಲೆನ್ಸ್‌ ಸೇವೆಯನ್ನು ರದ್ದುಗೊಳಿಸಿ, ಗುರುವಾರದಿಂದ ಆಂಬ್ಯುಲೆನ್ಸ್ ಸಿಬಂದಿ ಪ್ರತಿಭಟನೆಗೆ ಸಜ್ಜಾಗಿದ್ದರು.

    ಜಿವಿಕೆ ಸಂಸ್ಥೆಯು ಮೂರು ದಿನಗಳ ಒಳಗೆ ವೇತನ ಪಾವತಿ ಮಾಡದಿದ್ದರೆ ಕಠಿಣ ಕ್ರಮ ಕೈಗೊಂಡು ಲೈಸನ್ಸ್‌ ರದ್ದುಗೊಳಿಸುವುದಲ್ಲದೆ, ಕಪ್ಪು ಪಟ್ಟಿಗೆ ಸೇರಿಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್‌‌ ಮಂಗಳವಾರ ಎಚ್ಚರಿಕೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಜಿವಿಕೆ ಸಂಸ್ಥೆಯು ತಕ್ಷಣಕ್ಕೇ ನೌಕರರಿಗೆ ವೇತನ ಪಾವತಿ ಮಾಡಿದೆ.

    ಈ ಬಗ್ಗೆ ಪ್ರತಿಕ್ರೀಯಿಸಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿಯ ರಾಜ್ಯ ಉಪಾಧ್ಯಕ್ಷ ಪರಮಶಿವ, ಜಿವಿಕೆ ಸಂಸ್ಥೆಯವರು ನಮ್ಮ ಸಂಬಳವನ್ನು ಪಾವತಿ ಮಾಡಿದ್ದಾರೆ.

    ಇದೀಗ ಯಾವುದೇ ಸಂಬಳ ಬಾಕಿ ಇಲ್ಲ. ಆರೋಗ್ಯ ಇಲಾಖೆಯ ಆಯುಕ್ತರು ಹಾಗೂ ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್‌ ಖಡಕ್ ಸೂಚನೆಯಿಂದ ನಮಗೆ ವೇತನ ಲಭ್ಯವಾಗಿದೆ.

    ಇದರಿಂದ ನಮ್ಮ ಬೇಡಿಕೆ ಈಡೇರಿದ್ದು, ಆಂಬ್ಯುಲೆನ್ಸ್ ಸೇವೆ ಎಂದಿನಂತೆ ಇರಲಿದೆ, ನಾವು ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸರ್ಕಾರಕ್ಕೆ ತುಳು ಚಿತ್ರ ನಿರ್ಮಾಪಕರ ಮನವಿ: ಸಿಎಂ ಸ್ಪಂದನೆ…!

    Published

    on

    ಮಂಗಳೂರು : ತುಳು ಚಿತ್ರ ನಿರ್ಮಾಪಕರು ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಪ್ರಾದೇಶಿಕ ಚಲನಚಿತ್ರಗಳಿಗೆ ಸಬ್ಸಿಡಿ ಹಾಗೂ ನಿರ್ಮಾಕರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮನವಿ ಸಲ್ಲಿಸಿದ್ದಾರೆ. ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್.ಧನರಾಜ್ ಅವರು ಸಂಘದ ಪರವಾಗಿ ಮನವಿ ಸಲ್ಲಿಸಿದ್ದಾರೆ.

    ಪ್ರಾದೇಶಿಕ ಚಲನಚಿತ್ರವಾಗಿ ತುಳು ಭಾಷೆಯಲ್ಲಿ ವಾರ್ಷಿಕ 15 ರಿಂದ 20 ಸಿನೆಮಾಗಳು ನಿರ್ಮಾಣವಾಗುತ್ತಿದೆ. ಭಾಷೆಯ ಮೇಲಿನ ಅಭಿಮಾನದಿಂದ ನಿರ್ಮಾಪಕರು ಚಿತ್ರ ನಿರ್ಮಾಣಕ್ಕೆ ಕೈ ಹಾಕುತ್ತಿದ್ದಾರೆ. ಯಾವುದೇ ಪರಭಾಷೆಗೆ ಕಡಿಮೆ ಇಲ್ಲದಂತೆ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರ ಮೂರು ನಾಲ್ಕು ಸಿನೆಮಾಗಳಿಗೆ ಮಾತ್ರ ಸಬ್ಸಿಡಿ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಕನಿಷ್ಟ ಹದಿನೈದು ಸಿನೆಮಾಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಸಲ್ಲಿಸಲಾಗಿದೆ.

    ಇನ್ಮುಂದೆ ಹಳದಿ ಹಕ್ಕಿಯ ಚಿಲಿಪಿಲಿ ಕೇಳಲ್ಲ – ಬಾಗಿಲು ಹಾಕಿತು ಕೂ ಆ್ಯಪ್

    ಇದೇ ವೇಳೆ ಮಂಗಳೂರಿನ ಕೊಡಿಯಾಲ್ ಬೈಲ್ ಎ ಗ್ರಾಮದ ಸರ್ವೆ ನಂಬ್ರ 1554 – 2 ಬಿ ಯಲ್ಲಿ ಸರ್ಕಾರದ ಖಾಲಿ ಜಮೀನಿನಲ್ಲಿ ಐದು ಸೆಂಟ್ಸ್ ಜಾಗವನ್ನು ತುಳು ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಮಂಜೂರು ಮಾಡುವಂತೆಯೂ ಮನವಿಯಲ್ಲಿ ಕೊರಲಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸೂಕ್ತ ಭರವಸೆಯನ್ನು ನೀಡಿದ್ದಾರೆ.

    Continue Reading

    DAKSHINA KANNADA

    ಪತಿಯ ಹ*ತ್ಯೆ ಪ್ರಕರಣ; ಪತ್ನಿ ಸಹಿತ ಐವರಿಗೆ ಜೀವಾವಧಿ ಸಜೆ

    Published

    on

    ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಕಾಸರಗೋಡು: ಪುರುಷ ಹಾಗೂ ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆ

    8 ವರ್ಷಗಳ ಹಿಂದೆ ಅಂದರೆ 2016ರಲ್ಲಿ ಈ ಘಟನೆ ನಡೆದಿತ್ತು. ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್‌ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್‌ ಅಹಮ್ಮದ್‌ (38), ಉಳ್ಳಾಲದ ಅಬ್ದುಲ್‌ ಮುನಾಫ್ ಯಾನೆ ಮುನ್ನ (41), ಉಳ್ಳಾಲದ ಅಬ್ದುಲ್‌ ರೆಹಮಾನ್‌ (36) ಮತ್ತು ಬೋಳಿಯಾರ್‌ನ ಶಬೀರ್‌ (31) ಶಿಕ್ಷೆಗೊಳಗಾದವರು. ಇಸ್ಮಾಯಿಲ್‌ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್‌ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್‌ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು ಎಂದು ಆರೋಪಿಸಲಾಗಿತ್ತು. ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಕಾಂತಜಾರು ಎಸ್‌.ವಿ. ಅವರು ಆರೋಪಿಗಳ ಅಪರಾಧ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಜೀವಾವಧಿ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಕೊಲೆಯಾದ ಇಸ್ಮಾಯಿಲ್‌ ಅವರ ಮಕ್ಕಳಿಗೆ ಪರಿಹಾರ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಮಾಡಿದ್ದಾರೆ.

     

     

    Continue Reading

    DAKSHINA KANNADA

    ಕಾಸರಗೋಡು: ಪುರುಷ ಹಾಗೂ ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆ

    Published

    on

    ಕಾಸರಗೋಡು: ಪುರುಷ ಮತ್ತು ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯನ್ನು ಕೊ*ಲೆಗೈದು ಈತ ಆತ್ಮಹ*ತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ.

    ನೆಲ್ಲಿಕಟ್ಟೆಯ ಫಾತಿಮಾ (42) ಹಾಗೂ ಚೆಂಗಳ ರಹಮತ್ ನಗರದ ಕೆ. ಹುಸೈನಾರ್ (33) ಮೃ*ತಪಟ್ಟವರು. ಕಾಸರಗೋಡು ನಗರದ ವಸತಿಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮೃ*ತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ.

    ಕಾಸರಗೋಡು ಹಾಗೂ ಹೊಸದುರ್ಗ ಠಾಣಾ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಮರ*ಣೋತ್ತರ ಪರೀಕ್ಷೆಗಾಗಿ ಮೃ*ತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶ*ವಗರದಲ್ಲಿರಿಸಲಾಗಿದೆ.

    ಫಾತಿಮಾಳು ಪತಿ ಮತ್ತು ಮಕ್ಕಳನ್ನು ತೊರೆದು ಕಳೆದ ನಾಲ್ಕು ವರ್ಷಗಳಿಂದ ಹುಸೈನಾರ್ ಜತೆ ವಾಸವಾಗಿದ್ದಳು ಎಂದು ಪೊಲೀಸರಿಗೆ ಮಾಹಿತಿ ಲಭಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending