Friday, July 1, 2022

ಗ್ಯಾನ್‌ವಾಪಿ ಮಸೀದಿ ವಿಡಿಯೋಗ್ರಫಿ ಸಮೀಕ್ಷೆ ಪೂರ್ಣ: ಕೋರ್ಟ್‌ಗೆ ವರದಿ ಸಲ್ಲಿಕೆ

ವಾರಾಣಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಗ್ಯಾನ್‌ವಾಪಿ ಮಸೀದಿ ಆವರಣದ ಒಳಗೆ ನಡೆಸಿದ ವಿಡಿಯೋಗ್ರಫಿ ಸಮೀಕ್ಷೆಯ 10-12 ಪುಟಗಳ ವರದಿಯನ್ನು ಸಮೀಕ್ಷೆ ತಂಡ ವಾರಾಣಸಿ ಕೋರ್ಟ್‌ಗೆ ಇಂದು ಸಲ್ಲಿಕೆ ಮಾಡಿದೆ.


ಮಸೀದಿ ಸಂಕೀರ್ಣದ ಒಳಗೆ ಇರುವ ದೇವರ ವಿಗ್ರಹಗಳನ್ನು ಪೂಜಿಸಲು ಅವಕಾಶ ನೀಡುವಂತೆ ಕೋರಿ ಐವರು ಹಿಂದೂ ಮಹಿಳೆಯರು ಮನವಿ ಮಾಡಿದ್ದರು.

ಅದರಂತೆ ವಾರಾಣಸಿ ಕೋರ್ಟ್, ವಕೀಲರನ್ನು ಆಯುಕ್ತರನ್ನಾಗಿ ನೇಮಿಸಿ ವಿಡಿಯೋ ಸಮೀಕ್ಷೆಗೆ ಆದೇಶ ನೀಡಿತ್ತು.

ಮಸೀದಿ ಆವರಣದಲ್ಲಿ ತಂಡವು ನಡೆಸಿದ ವಿಡಿಯೋ ಚಿತ್ರೀಕರಣದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ನ್ಯಾಯಾಲಯದಿಂದ ನೇಮಕವಾದ ಕಮಿಷನರ್ ವಿಶಾಲ್ ಸಿಂಗ್ ಅವರ ನೇತೃತ್ವದ ತಂಡವು ವಿಡಿಯೋ ಮತ್ತು ಚಿತ್ರಗಳನ್ನು ಕೂಡ ನ್ಯಾಯಾಲಯಕ್ಕೆ ಹಸ್ತಾಂತರಿಸಿದೆ. ವರದಿ ಸಲ್ಲಿಕೆ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವಕೀಲರಲ್ಲಿ ಒಬ್ಬರು, ಮಸೀದಿ ಒಳಗಿರುವ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ತಿಳಿಸಿದ್ದರು.

ಮಸೀದಿಯಲ್ಲಿ ನಮಾಜ್ ಮಾಡುವುದಕ್ಕೂ ಮುನ್ನ ಶುದ್ಧೀಕರಣ ಆಚರಣೆಗೆ ಈ ನೀರನ್ನು ಬಳಸಲಾಗುತ್ತಿದೆ. ಆದರೆ ಇದು ಶಿವಲಿಂಗವಲ್ಲ, ಕಾರಂಜಿ ಎಂದು ಕೆಲವು ಮುಸ್ಲಿಂ ನಾಯಕರು ವಾದಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...