Connect with us

LATEST NEWS

ಹ್ಯಾಮಿಟಲ್ ಸರ್ಕಲ್ – ಪಂಪ್ವೆಲ್ ಸರ್ಕಲ್ ವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

Published

on

ಮಂಗಳೂರು – ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹ್ಯಾಮಿಟಲ್ ಸರ್ಕಲ್ ನಿಂದ ಪಂಪ್ವೆಲ್ ಸರ್ಕಲ್ ವರೆಗೆ ರಸ್ತೆ ಅಗಲೀಕರಣ, ಮಳೆನೀರು ಚರಂಡಿ ಹಾಗೂ ಪಾದಾಚಾರಿ ದಾರಿ ನಿರ್ಮಾಣಕ್ಕಾಗಿ 4.5 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ‌ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಈ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರವು ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ಎಲ್ಲ ವಿಧಗಳಲ್ಲೂ ಮಂಗಳೂರು ಅತ್ಯಂತ ಜನಪ್ರಿಯವಾಗಿದೆ. ಹಾಗಾಗಿ ನಗರವು ಮುಂಬರುವ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಅಥವ ಇನ್ನುಳಿದ ಮೂಲಭೂತ‌ ಸೌಕರ್ಯಗಳ ಕೊರತೆಯಾಗಬಾರದು. ನಗರದ ಪ್ರಮುಖ ರಸ್ತೆಗಳ ಅಗಲೀಕರಣ, ಒಳಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳು ಈ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ‌ ಸ್ಥಾಯಿ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೇಳೂರು, ಕಿರಣ್ ಕುಮಾರ್, ಶರತ್, ಪಾಲಿಕೆ ಸದಸ್ಯರಾದ ನವೀನ್ ಡಿ.ಸೋಜ, ಕಾವ್ಯಾ ನಟರಾಜ್ ಆಳ್ವ, ಬಿಜೆಪಿ ಮುಖಂಡರಾದ ರಂಗನಾಥ್ ಕಿಣಿ, ಯೋಗಿಶ್ ಶೆಣೈ,ದಯಾನಂದ ಸನ್ಯಾಸಿಗುಡ್ಡೆ, ಜೆಸ್ಸಿಲ್, ನವೀನ್ ಶೆಣೈ,ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ರಾಮ್ ರಾಯ್ ಕಾಮತ್, ಲಕ್ಷ್ಮಣ್ ಭಟ್, ರಾಧಾಕೃಷ್ಣ ಕುದ್ಕೇರಿಗುಡ್ಡೆ, ಸಚಿನ್‌ ಸಾಲ್ಯಾನ್,ಅರ್ಚನಾ ಆಳ್ವ, ಪ್ರವೀಣ್ ಶೇಟ್, ರಾಯನ್ ಮುಂತಾದವರು ಉಪಸ್ಥಿತರಿದ್ದರು.

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending