Friday, July 1, 2022

ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ನೇಣಿಗೆ ಶರಣಾದ ಯುವಕ

ತೆಕ್ಕಟ್ಟೆ ಮಾರ್ಚ್ 7: ದೇವಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.


ಆತ್ಮಹತ್ಯೆಗೆ ಶರಣಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ. ಈತ ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದರು.

ಚಂದ್ರ ಪೂಜಾರಿ ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಈತ ಇಲ್ಲಿನ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು ಎಂದು ಹೇಳಲಾಗಿದ್ದು, ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಚಂದ್ರ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...