Friday, August 12, 2022

‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಛ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗ’ ಅಭಿಯಾನದಡಿ ಇಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯತ್ ಒಕ್ಕೂಟ, ರಾಯಿ ಗ್ರಾಮ‌ ಪಂಚಾಯತ್ ಸದಸ್ಯರು ತಯಾರಿಸಿದ ರಾಷ್ಟ್ರ ಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದರು.


ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್,

ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ,

ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಹಾಗೂ ಇತರೆ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. ಚಾಲಕರು, ನಿರ್ವಾಹಕರು, ಸಿಬ್ಬಂದಿ, ಪ್ರಯಾಣಿಕರಿದ್ದರು.

LEAVE A REPLY

Please enter your comment!
Please enter your name here

Hot Topics

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....