Sunday, November 27, 2022

ಮಂಗಳೂರು ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬರೇ 22 ರೂ.ಗೆ ರಾಷ್ಟ್ರ ಧ್ವಜ ಲಭ್ಯ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” (ಮನೆ ಮನೆಗೂ ರಾಷ್ಟ್ರೀಯ ಧ್ವಜ) ಅಭಿಯಾನದಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳು ಹಾಗೂ ಅಪಾರ್ಟ್‍ಮೆಂಟ್‍ಗಳಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಆ.13ರಿಂದ 15ರವರೆಗೆ ಹಾರಿಸುವಂತೆ ನಗರದ ಸಾರ್ವಜನಿಕರಲ್ಲಿ ಕೋರಲಾಗಿದೆ.


ರಾಷ್ಟ್ರ ಧ್ವಜವೊಂದಕ್ಕೆ 22ರೂ. ಗಳನ್ನು ಪಾವತಿಸಿ ಪಾಲಿಕೆಯ 3 ವಲಯ ಕಚೇರಿಗಳಾದ ಸುರತ್ಕಲ್, ಮಲ್ಲಿಕಟ್ಟೆ ಹಾಗೂ ಕೇಂದ್ರ ಕಚೇರಿಗಳು ಮತ್ತು 10 ನಗರ ಪ್ರಾಥಮಿಕ ಕೇಂದ್ರಗಳಾದ ಸುರತ್ಕಲ್, ಕುಳಾಯಿ, ಕುಳೂರು, ಶಕ್ತಿನಗರ, ಕದ್ರಿ, ಪಡೀಲ್, ಎಕ್ಕೂರ್, ಜೆಪ್ಪು, ಬಂದರ್ ಹಾಗೂ ಬೆಂಗ್ರೆಯಲ್ಲಿ ಖರೀದಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಪಡೆದು ಕೊಳ್ಳಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...