LATEST NEWS
ಬಿಯರ್ ಸೇವಿಸಿ, ನೃತ್ಯ ಮಾಡುವಂತೆ ವಿದ್ಯಾರ್ಥಿನಿಯರಿಗೆ ಕಿರುಕುಳ
Published
1 month agoon
ಮಂಗಳೂರು/ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ವಿರುದ್ಧ ದಾಖಲಾಗಿದೆ. ಅಕ್ಟೋಬರ್ 09 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್ ಮಾಡುವಂತೆ ಬಲವಂತ ಮಾಡಿದ್ದಾರೆ.
ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.
ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
Baindooru
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
Published
5 minutes agoon
22/11/2024By
NEWS DESK2ಫ್ರಿಜ್ಜಿನ್ನಲ್ಲಿರಿಸಿದ ಅಹಾರಗಳು ತಾಜಾತನವನ್ನು ಉಳಿಸಿಕೊಳ್ಳಲು ಕಾರಣವೆಂದರೆ ಶೀತಲೀಕರಣ. ಆದರೆ, ಈ ಪರಿ ಎಲ್ಲಾ ಬಗೆಯ ಅಹಾರಗಳಿಗೆ ಅನ್ವಯಿಸಲಾರದು. ಕೆಲವು ಫಲಗಳಂತೂ ಫ್ರಿಜ್ಜಿನಲ್ಲಿಟ್ಟರೇ ಸಾಕು, ಚೆನ್ನಾಗಿರುವ ಬದಲು ಹಾಳಾಗಲು ತೊಡಗುತ್ತವೆ. ಇಂದಿನ ಲೇಖನದಲ್ಲಿ ಈ ಗುಣವಿರುವ ಕೆಲವು ಫಲಗಳ ಬಗ್ಗೆ ವಿವರಿಸಲಾಗಿದೆ. ಇವನ್ನು ಫ್ರಿಜ್ಜಿನಲ್ಲಿಡುವ ಬದಲು ತಣ್ಣನೆಯ ಸ್ಥಳದಲ್ಲಿ ಗಾಳಿಯಾಡದಂತೆ ಶೇಖರಿಸಬೇಕು. ಈ ಫಲಗಳು ಯಾವುವು ಎಂಬುದನ್ನು ನೋಡೋಣ.
ಬಾಳೆಹಣ್ಣು
ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಸಂಗ್ರಹಿಸಬಾರದು. ಏಕೆಂದರೆ ಬಾಳೆಹಣ್ಣಿನ ತಾಪಮಾನ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾದರೆ, ಇದರ ಸಿಪ್ಪೆ ಶೀಘ್ರವೇ ಕಪ್ಪಾಗುತ್ತದೆ ಹಾಗೂ ಸಿಪ್ಪೆಯ ಅಡಿಯಲ್ಲಿನ ತಿರುಳು ಕೂಡಾ ಕೊಳೆಯಲು ತೊಡಗುತ್ತದೆ.
ಕಲ್ಲಂಗಡಿ
ಬೇಸಿಗೆಯಲ್ಲಿ ಜನರು ಅತಿ ಹೆಚ್ಚಾಗಿ ಇಷ್ಟಪಡುವ ಫಲವಾದ ಕಲ್ಲಂಗಡಿಯನ್ನೂ ಫ್ರಿಜ್ಜಿನಲ್ಲಿ ಇರಿಸಬಾರದು. ಆದರೆ, ಸಾಮಾನ್ಯವಾಗಿ ಕಲ್ಲಗಂಡಿ ದೊಡ್ಡ ಗಾತ್ರದಲ್ಲಿದ್ದು ಇದನ್ನು ಕತ್ತರಿಸಿದಾಗ ದೊರಕುವ ಆಗಾಧ ಪ್ರಮಾಣವನ್ನು ಫ್ರಿಜ್ಜಿನಲ್ಲಿ ಸಂಗ್ರಹಿಸದೇ ಬೇರೆ ಮಾರ್ಗವಿಲ್ಲ. ಆದರೆ, ನಿಸರ್ಗಕ್ಕೆ ನಿಮ್ಮ ಈ ಅಗತ್ಯತೆಯ ಅರಿವಿಲ್ಲ. ಸೇಬನ್ನು ಕತ್ತರಿಸಿ ಕೊಂಚ ಹೊತ್ತು ಇರಿಸಿದಾಗ ಗಾಳಿಗೆ ತೆರೆದ ಭಾಗ ಕಪ್ಪಗಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿಯೂ ಹೀಗೇ, ಗಾಳಿಗೆ ಒಡ್ಡಿದ ಭಾಗದ ಆಂಟಿ ಆಕ್ಸಿಡೆಂಟುಗಳು ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶೀಘ್ರವೇ ಹುಳಿಯಾಗುತ್ತದೆ.
ಸೇಬು
ಸೇಬು ಹಣ್ಣುಗಳು 90% ತೇವಾಂಶವನ್ನು ಹೊಂದಿರುವ ಪರಿಸರದಲ್ಲಿ ಹೆಚ್ಚು ಹೊತ್ತು ಕೆಡದೇ ತಾಜಾತನವನ್ನುಉಳಿಸಿಕೊಳ್ಳುತ್ತವೆ. ಆದರೆ ನಮ್ಮ ರೆಫ್ರಿಜರೇಟರ್ ನೈಸರ್ಗಿಕ ಡಿಹೈಡ್ರೇಟರ್ ಅಥವಾ ತೇವಾಂಶ ಇರದ ಸ್ಥಳವಾಗಿದೆ. ಹಾಗಾಗಿ, ಫ್ರಿಜ್ಜಿನಲ್ಲಿಟ್ಟ ಸೇಬು ತೇವಾಂಶದ ಕೊರತೆಗೆ ಒಡ್ಡಿಕೊಳ್ಳುತ್ತವೆ. ಈ ಸ್ಥಿತಿಯಲ್ಲಿ ಸೇಬಿನಲ್ಲಿರುವ ಇಥೈಲೀನ್ ಹಾಗೂ ಇತರ ಕಿಣ್ವಗಳು ತಿರುಳನ್ನು ಅತಿ ಶೀಘ್ರವಾಗಿ ಹಣ್ಣಾಗಿಸುತ್ತವೆ ಹಾಗೂ ಕೊಳೆಯಲು ಪ್ರಾರಂಭಿಸುತ್ತದೆ.
ಮಾವಿನ ಹಣ್ಣು
ಮಾವಿನ ಹಣ್ಣನ್ನು ಫ್ರಿಜ್ಜಿನಲ್ಲಿ ಇರಿಸಿದರೆ ಇದರಲ್ಲಿರುವ ಆಂಟಿ ಆಕ್ಸಿಡೆಂಟುಗಳ ಪ್ರಮಾಣ ತಗ್ಗತೊಡಗುತ್ತದೆ. ಹಾಗಾಗಿ ಮಾವಿನ ಹಣ್ಣಿನ ಪೌಷ್ಟಿಕ ಮೌಲ್ಯಗಳು ಕಡಿಮೆಯಾಗುತ್ತವೆ. ಈ ಹಣ್ಣುಗಳನ್ನು ಫ್ರಿಜ್ಜಿನಲ್ಲಿರಿಸಿದರೆ ಮಾವಿನ ಹಣ್ಣು ವಿಷಕಾರಿ ಯಾಗ ಬಹುದು. ಬದಲಿಗೆ ಇನ್ನೂ ಕಾಯಿಯಾಗಿರುವ ಮಾವು ಗಳನ್ನು ತಂದು ಬೆಚ್ಚಗಿರುವ ಮತ್ತು ನೆರಳಿನ ಸ್ಥಳದಲ್ಲಿ ಇರಿಸಿ ಒಂದೆರಡು ದಿನಗಳ ಬಳಿಕ ಸ್ವಾಭಾವಿಕವಾಗಿ ಹಣ್ಣಾಗುವಂತೆ ಮಾಡಿ ಸೇವಿಸಿ.
ಲಿಚ್ಚಿ
ಬೇಸಿಗೆಯಲ್ಲಿ ಸೇವಿಸಲು ರುಚಿಕರವಾದ ಚಿಕ್ಕ ಗೋಲಿಗ ಳಂತಿರುವ ಲಿಚ್ಚಿ ಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಇರಿಸ ಬಾರದು. ಏಕೆಂದರೆ, ತಂಪಾದ ತಾಪಮಾನದಲ್ಲಿ ಇದರ ತಿರುಳು ಕೊಳೆಯಲು ಆರಂಭಿಸುತ್ತದೆ. ಆದರೆ, ಸಿಪ್ಪೆ ಮಾತ್ರ ಹಾಳಾಗದೇ ಹಾಗೇ ಉಳಿದಿರುತ್ತದೆ. ಫ್ರಿಜ್ಜಿ ನಿಂದ ತೆಗೆದು ನೋಡಿದ ಲಿಚ್ಚಿಯ ಸಿಪ್ಪೆ ಚೆನ್ನಾಗಿರು ವಂತೆಯೇ ಕಂಡುಬಂದರೂ ಒಳಗಿನ ತಿರುಳು ಕೊಳೆತಿರುತ್ತದೆ.
Baindooru
ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Published
45 minutes agoon
22/11/2024By
NEWS DESK2ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.
ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.
ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
Baindooru
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
Published
57 minutes agoon
22/11/2024By
NEWS DESK4ಮಂಗಳೂರು/ ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹ*ತ್ಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರೀಯ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ ಇದೆ ಎಂಬ ವರದಿಯ ಬಗ್ಗೆ ತೀವ್ರ ಆಕ್ಷೇಪ ಬಂದ ಬೆನ್ನಲ್ಲೇ ಕೆನಡಾ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಈ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ.
ನಿಜ್ಜರ್ ಹ*ತ್ಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರೀಯ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೆನಡಾದೊಳಗೆ ಯಾವುದೇ ಕ್ರಿ*ಮಿನಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ ಎಂಬುದಕ್ಕೆ ಕೆನಡಾ ಸರ್ಕಾರದ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಕೆನಡಾ ಸರ್ಕಾರ ಈ ಹೇಳಿಕೆ ನೀಡಿಲ್ಲ :
ಕೆನಡಾ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿಜ್ಜರ್ ಹ*ತ್ಯೆಗೆ ಭಾರತದ ನಾಯಕರೇ ಸಂಚು ರೂಪಿಸಿದ್ದರು ಎಂಬುದಾಗಿ ವರದಿಯಲ್ಲಿ ಆರೋಪ ಮಾಡಲಾಗಿತ್ತು. ಇದೀಗ ಎಚ್ಚೆತ್ತ ಕೆನಡಾ ಸರ್ಕಾರ ಪ್ರತಿಕ್ರಿಯೆ ನೀಡಿದೆ. ಮಾಧ್ಯಮಗಳ ಈ ವರದಿ ಊಹಾಪೋಹವಾಗಿದ್ದು, ತಪ್ಪಾದ ಆಧಾರದ ಮೇಲೆ ಬರೆಯಲಾಗಿದೆ. ಕೆನಡಾ ಸರ್ಕಾರ ಈ ಹೇಳಿಕೆ ನೀಡಿಲ್ಲ ಎಂದು ಹೇಳಿದೆ.
ಈ ವರದಿ ಕುರಿತು ಪ್ರಿವಿ ಕೌನ್ಸಿಲ್‌ನ ಡೆಪ್ಯುಟಿ ಕ್ಲರ್ಕ್ ಮತ್ತು ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ. ಡ್ರೂಯಿನ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಸಜ್ಜಾಗುತ್ತಿದೆ OPEN AI; ಹಾಗಾದ್ರೆ ಬ್ರೌಸರ್, ಗೂಗಲ್ ಕ್ರೋಮ್ ಕಥೆ ಏನಾಗ್ಬೋದು ?
ಕಳೆದ ವರ್ಷ ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ನಡೆದಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಪ್ರಧಾನಿ ಮೋದಿ ಮತ್ತು ಎನ್‌ಎಸ್‌ಎ ದೋವಲ್ ಲಿಂಕ್ ಮಾಡುವ ಲೇಖನವನ್ನು ಕೆನಡಾದ ಪ್ರತಿಷ್ಠಿತ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್ ಪ್ರಕಟಿಸಿತ್ತು. ಪ್ರಧಾನಿ ಮೋದಿಯವರಿಗೆ ನಿಜ್ಜರ್ ಹತ್ಯೆಯ ಬಗ್ಗೆ ಗೊತ್ತಿತ್ತು ಎಂದು ಕೆನಡಾದ ಭದ್ರತಾ ಏಜೆನ್ಸಿಗಳು ನಂಬುತ್ತವೆ ಎಂಬುದಾಗಿ ಹೆಸರಿಸದ ಭದ್ರತಾ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು. ಆದರೆ ಭಾರತ ಸರ್ಕಾರ ಈ ಆರೋಪವನ್ನು ನಿರಾಕರಿಸಿತ್ತು.
LATEST NEWS
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ