BANTWAL
ಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ: ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಸಮುದಾಯ
Published
3 years agoon
By
Adminಮಂಗಳೂರು: ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್‌ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು.
ಬಂಟ್ವಾಳ ಹಾಗೂ ಮೊಗರ್ನಾಡ್ ವಲಯದ ವತಿಯಿಂದ ಬಂಟ್ವಾಳದ ಬಿ.ಸಿರೋಡ್‌ನ ಬೈಪಾಸ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಂಗಳೂರು ಕಥೋಲಿಕ್ ಸಭಾದ ಕೇಂದ್ರೀಯ ಸಮಿತಿ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಮಾತನಾಡಿ, ಪಂಜಿಮೊಗರು ಪ್ರಾರ್ಥನಾ ಮಂದಿರಕ್ಕೆ ಡಿಸಿ ಹಾಗೂ ಕೋರ್ಟ್‌ನಿಂದ ಸ್ಟೇ ಆರ್ಡರ್ ಇದ್ದರೂ ಹಗಲಿನಲ್ಲೇ ಕೆಡವಿದ್ದಾರೆ. ಈ ಬಗ್ಗೆ ದೂರು ನೀಡಿದಾಗ ಪೊಲೀಸರು ದೂರು ಸ್ವೀಕರಿಸಿಲ್ಲ.
ನಂತರ ಪೊಲೀಸ್ ಕಮೀಷನರ್‌ಗೆ ಪೋನ್ ಮುಖಾಂತರ ಹೇಳಿದಾಗ ಪೊಲೀಸರು ಸ್ಥಳಕ್ಕೆ ಬಂದರು.
ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾದರರೂ ಬೇರೆಯದ್ದೇ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು. ಅದನ್ನು ಅಂಗನವಾಡಿ ಕಟ್ಟಡ ಎಂದು ಹೇಳುತ್ತಿದ್ದಾರೆ.
ಅಲ್ಲಿ 42 ವರ್ಷದಿಂದ ಅಲ್ಲಿ ಪ್ರಾರ್ಥನಾ ಮಂದಿರದ ಕಟ್ಟಡ ಇದೆ. ಅಲ್ಲಿ ಬೆರಳು ಕೊಟ್ಟಿದ್ದಕ್ಕೆ ಕೈಯನ್ನೇ ನುಂಗಿದ್ದಾರೆ ಎಂದ ಅವರು 2021ರ ಸರ್ಕಾರದ ಕಾನೂನಿನಲ್ಲಿ ಪ್ರಾರ್ಥನಾ ಮಂದಿರದಲ್ಲಿ ಕೆಡವಲು ಅವಕಾಶವಿಲ್ಲ.
ಹಾಗಾದರೆ ಅದನ್ನು ಕೆಡವಿದರೆ ಯಾರು? ನಾವು ಈ ಬಗ್ಗೆ ಪ್ರತಿಭಟನೆ ನಡೆಸಿದೆವು. ಪ್ರತಿಭಟನೆಯ ನಂತರ ಇಬ್ಬರನ್ನು ಬಂಧಿಸಿದರು.
ಅವರು ಮಾವನ ಮನೆಗೆ ಬಂದು ಹೋದ ಹಾಗೆ ಎರಡೇ ದಿನದಲ್ಲಿ ಬಂದು ಹೋಗಿದ್ದಾರೆ. ನಾವು ಕೊಟ್ಟ ದೂರಿಗೆ ಎಫ್‌ಐಆರ್ ದಾಖಲಿಸಿಲ್ಲ.
ತದನಂತರ ಎಫ್‌ಐಆರ್ ಮಾಡಿದ್ದಾರೆ. ಮುಂದಿನ ದಿವಸಗಳಲ್ಲಿ ಈ ಬಗ್ಗೆ ಉಗ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದರು. ಪ್ರತಿಭಟನೆಯಲ್ಲಿ ರಾಯ್ ಕ್ಯಾಸ್ತಲಿನೋ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರತಿಭಟನೆಯ ನಂತರ ಕ್ರೈಸ್ತ ಮುಖಂಡರು ಬಂಟ್ವಾಳ ತಹಶೀಲ್ದಾರ್ ರಶ್ಮಿ ಅವರ ಕಚೇರಿಗೆ ಭೇಟಿ ನೀಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅದೇ ರೀತಿ ಮಂಗಳೂರು ಧರ್ಮಪ್ರಾಂತ್ಯದ ದಕ್ಷಿಣ ವಲಯದ ವತಿಯಿಂದ ಮಾನವ ಸರಪಳಿ ಹಾಗೂ ಕ್ಯಾಂಡಲ್ ಪ್ರತಿಭಟನೆ ನಡೆಯಿತು.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ