Thursday, August 11, 2022

ಆಪ್‌ನಿಂದ ಹರ್ಭಜನ್‌ ಸಿಂಗ್‌, ಅಶೋಕ್‌ ಮಿತ್ತಲ್‌ ಸೇರಿ 5 ಜನ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ನವದೆಹಲಿ: ಆಮ್ ಆದ್ಮಿ ಪಕ್ಷವು ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಸೇರಿದಂತೆ ಐದು ಜನರನ್ನು ರಾಜ್ಯಸಭೆಗೆ ಅಭ್ಯರ್ಥಿಗಳಾಗಿ ಆಯ್ಕೆ ಮಾಡಿದೆ.


ಕ್ರಿಕೆಟಿಗ ಹರ್ಭಜನ್‌ ಸಿಂಗ್‌, ದೆಹಲಿ ಶಾಸಕ ರಾಘವ್‌ ಛಡ್ಡಾ, ಐಐಟಿ ದೆಹಲಿ ಪ್ರೊಫೆಸರ್‌ ಡಾ.ಸಂದೀಪ್‌ ಪಾಠಕ್‌, ಲವ್ಲಿ ಪ್ರೊಫೆಷನಲ್‌ ಯೂನಿವರ್ಸಿಟಿ ಕುಲಪತಿ ಅಶೋಕ್‌ ಮಿತ್ತಲ್‌ ಹಾಗೂ ಪಂಜಾಬ್‌ನ ಉದ್ಯಮಿ ಸಂಜೀವ್‌ ಅರೋರಾ ಅವರನ್ನು ಎಎಪಿ ರಾಜ್ಯಸಭೆಗೆ ಆಯ್ಕೆ ಮಾಡಲು ನಿರ್ಧರಿಸಿದೆ. ಇಂದು ಐವರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್‌ 31ರಂದು ರಾಜ್ಯಸಭೆಗೆ ಚುನಾವಣೆ ನಿಗದಿಯಾಗಿದೆ.

ರಾಜ್ಯಸಭೆಯ ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಪಂಜಾಬ್‌ನ ಶಾಸಕರು ಐವರು ಸಂಸದರ ಆಯ್ಕೆಗೆ ಮತದಾನ ಮಾಡಲಿದ್ದಾರೆ.

ಕೇರಳದಿಂದ ಮೂವರು, ಅಸ್ಸಾಂನಿಂದ ಇಬ್ಬರು, ಹಿಮಾಚಲ ಪ್ರದೇಶ, ನಾಗಾಲೆಂಡ್‌ ಹಾಗೂ ತ್ರಿಪುರಾದಿಂದ ತಲಾ ಒಬ್ಬ ಸಂಸದರ ಆಯ್ಕೆಗೆ ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here

Hot Topics

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...