Friday, July 1, 2022

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.


ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ

ಮಾತುಕತೆ ನಡೆಸಿದ ಬಳಿಕ ಹಾರ್ದಿಕ್‌ ಪಟೇಲ್‌ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ಕಾಂಗ್ರೆಸ್‌ ಪಕ್ಷದ ನಾಯಕತ್ವದ ವಿರುದ್ಧ ಗುಡುಗಿದ್ದಾರೆ.

ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್‌ ಪಟೇಲ್‌ ಗೈರಾಗಿದ್ದರು.

ಈ ಘಟನೆಯ ಬೆನ್ನಲ್ಲೇ ಪಟೇಲ್‌ ಕಾಂಗ್ರೆಸ್‌ ತೊರೆದಿದ್ದಾರೆ.
ಪಟೇಲ್ ಅವರು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂಬ ಗುಸುಗುಸು ಗುಜರಾತ್‌ನಲ್ಲಿ ಹರಡಿವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...