Connect with us

DAKSHINA KANNADA

ಕರ್ನಾಟಕ ರಾಜ್ಯದಲ್ಲೇ ಮಾದರಿಯಾಗಿ ನಿರ್ಮಾಣಗೊಂಡ ಹರೇಕಳ ಗ್ರಾ.ಪಂ ಕಟ್ಟಡ-ಧ್ವಜಾರೋಹಣ ನೆರವೇರಿಸಿದ ಶಾಸಕ ಖಾದರ್

Published

on

ಉಳ್ಳಾಲ: ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಈ ಪ್ರಯುಕ್ತ ಇಂದು ಬೆಳಗ್ಗೆ ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ, ಊರ ಹಿರಿಯ ನಾಗರಿಕರು, ಶ್ರೀ ರಾಮಕೃಷ್ಣ ಶಾಲೆ ಹರೇಕಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವರ್ಗದವರ ಸಮ್ಮುಖದಲ್ಲಿ ಶಾಸಕ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸಿದರು.


ರಾಜ್ಯ ಮಟ್ಟದ ಅನೇಕ ಸಾಮಾಜಿಕ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಪಂಚಾಯತ್ ಕಟ್ಟಡದಲ್ಲಿ ಸುಸಜ್ಜಿತವಾದ ಆಡಳಿತ ಕಛೇರಿ, ಸಭಾಂಗಣ, ಕಂದಾಯ ಕಛೇರಿ, ಅಂಚೆ ಕಛೇರಿ, ಗ್ರಂಥಾಲಯ, ಶೌಚಾಲಯಗಳನ್ನು ಒಳಗೊಂಡಿದ್ದು ಹೊರಾಂಗಣದಲ್ಲಿ ಸುಂದರವಾದ ಉದ್ಯಾನವನ ಹಾಗೂ ವಾಹನ ನಿಲುಗಡೆಗೆ ಅವಕಾಶಗಳನ್ನು ಕೂಡಾ ಒಳಗೊಂಡಿದೆ.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಇಂದು ಕರ್ನಾಟಕ ಬಂದ್‌: ಕರಾವಳಿಗರಿಂದ ನೈತಿಕ ಬೆಂಬಲ-ಬಸ್‌, ಹೊಟೇಲ್‌, ಶಾಲೆಗಳು ಎಂದಿನಂತೆ

Published

on

ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.

ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

Continue Reading

DAKSHINA KANNADA

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ‘ಸ್ಕಿಲ್ ಅಪ್’ ಕಾರ್ಯಕ್ರಮ

Published

on

ಮಂಗಳೂರು: ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ವತಿಯಿಂದ ‘ಸ್ಕಿಲ್ ಅಪ್’ ಎಂಬ ಕಾರ್ಯಕ್ರಮ ಸೆ. 23 ರಂದು ನಡೆಯಿತು.

ಆರೋಗ್ಯ ಕ್ಷೇತ್ರದ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು ಒದಗಿಸುವುದು ಇದರ ಉದ್ದೇಶವಾಗಿತ್ತು.

ಮಂಗಳೂರಿನ ಸುಶಾಂತ್ ಕನ್ಸಲ್ಟೆನ್ಸಿಯ ಎಚ್. ಪ್ರಶಾಂತ್ ಮಿರಾಂಡ, ಎಂಡಿಪಿ ನಿರ್ದೇಶಕ ಪ್ರೊ.ವೆಂಕಟೇಶ್ ಅಮೀನ್ ಮತ್ತು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಡೀನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಕಾರ್ಯಕ್ರಮವನ್ನು ಎಚ್‌. ಪ್ರಶಾಂತ್ ಮಿರಾಂಡ, ಪ್ರೊ. ವೆಂಕಟೇಶ್ ಶೇಖರ್ ಅಮಿನ್, ಪ್ರೊ. ಡಾ. ಅಮುತಾ ಪಿ. ಮಾರ್ಲಾ, ಡಾ. ಶಾಶ್ವತ್ ಎಸ್., ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ವಹಣೆಗಾರ ಪ್ರೊ. ವಿಜಯ ಪಿ., ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮುಖ್ಯಾಧಿಕಾರಿ ಅವರು ಉದ್ಘಾಟಿಸಿದರು.

ಚೆನ್ನೈ ಅಪೋಲೊ ಪ್ರೋಟಾನ್ ಕ್ಯಾನ್ಸರ್ ಸೆಂಟರ್, ಆಥರ್ವ ಆರ್ಥೋ ಕೇರ್ ಮಂಗಳೂರು, ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು(ಸಿಎಂಸಿ) ವೆಲ್ಲೂರು, ಡಾಕ್ಟರ್ ಟಿಎಂಎ ಪೈ ಆಸ್ಪತ್ರೆ, ಉಡುಪಿ, ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ ದೇರೆಳಕಟ್ಟೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ, ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಅತ್ತಾವರ, ಮಣಿಪಾಲ್ ಹೆಲ್ತ್ ಎಂಟರ್ಪ್ರೈಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ರಾಜಗಿರಿ ಆಸ್ಪತ್ರೆ ಬೆಂಗಳೂರು, ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬೆಂಗಳೂರು, ರಾಮಯ್ಯ ಯೂನಿವರ್ಸಿಟಿ ಆಫ್ ಆಪ್ಲೈಡ್ ಸೈನ್ಸೆಸ್ ಬೆಂಗಳೂರು, ಶ್ರೀ ರೇಂಗ ಆಸ್ಪತ್ರೆ ತಮಿಳುನಾಡು, ಶ್ರೀನಿವಾಸ್ ಆಸ್ಪತ್ರೆ ಮುಕ್ಕ, ಸೈಂಟ್‌ ಜಾನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು, ಯೂನಿಟಿ ಆಸ್ಪತ್ರೆ ಮಂಗಳೂರು, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು ಮತ್ತಿತರ ಸಂಸ್ಥೆಗಳಿಂದ ಆಧಿಕಅರಿ ಮತ್ತು ಸಿಬಂದಿ ಭಾಗವಹಿಸಿದ್ದರು. ಎ. ಜೆ. ಹ್ಯೂಮನ್ ರಿಸೋರ್ಸಸ್ ನ ಮ್ಯಾನೇಜರ್ ಶಶಧರ ಆಚಾರ್ಯ ಪ್ರಸ್ತಾವನೆಗೈದರು.

ಎ..ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ನ ಸಹಾಯಕ ಪ್ರಾಧ್ಯಾಪಕಿ ಪ್ರೀಮ್ ರೋಸ್ ವಿಷ್ಣು ಸ್ವಾಗತಿಸಿದರು.

Continue Reading

LATEST NEWS

Trending