Connect with us

DAKSHINA KANNADA

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ..!

Published

on

ನಿವೃತ್ತ ಶಿಕ್ಷಕ, ಕವಿ, ಹಿರಿಯ ಯಕ್ಷಗಾನ, ಪ್ರಸಿದ್ಧ ಅರ್ಥದಾರಿ ಮತ್ತು ಹರಿಕಥಾ ಪ್ರವೀಣ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾದ ಮುದ್ರಾಡಿ ಕೇಶವ ಶೆಟ್ಟಿಗಾರ್ ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಉಡುಪಿ: ನಿವೃತ್ತ ಶಿಕ್ಷಕ, ಕವಿ, ಹಿರಿಯ ಯಕ್ಷಗಾನ, ಪ್ರಸಿದ್ಧ ಅರ್ಥದಾರಿ ಮತ್ತು ಹರಿಕಥಾ ಪ್ರವೀಣ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾದ ಮುದ್ರಾಡಿ ಕೇಶವ ಶೆಟ್ಟಿಗಾರ್ ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರಿಗೆ 87 ವರ್ಷ ವಯಸ್ಸಾಗಿತ್ತು.  ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಅಂಬಾತನಯ ಮುದ್ರಾಡಿ ಅವರು 1935ರ ಜೂನ್ 4ರಂದು ಜನಿಸಿದರು.

ಅವರ ಶಾಲಾ ವಿದ್ಯಾಭ್ಯಾಸ ಎಂಟನೆಯ ತರಗತಿಯವರೆಗೆ ಆದರೂ ಅವರ ಲೋಕಜ್ಞಾನ ಅಪಾರವಾಗಿತ್ತು. ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದ ವ್ಯಕ್ತಿತ್ವ ಅಂಬಾತನಯರದು.

ಸಾಹಿತ್ಯ ಪ್ರೇರಣೆಯನ್ನು ಅಂಬಾತನಯರಲ್ಲಿ ಬಿತ್ತಿದ ಗುರುವೆಂದರೆ ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್ಟರು.  ಅಂಬಾತನಯ ಮುದ್ರಾಡಿ ಅವರು ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಶಿಕ್ಷಕರ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿ, ಹೀಗೆ ಸಾಹಿತ್ಯದ ವಿವಿಧ ಮಗ್ಗುಲುಗಳಲ್ಲಿ ಪರಿಶ್ರಮ ವಹಿಸಿದವರು. ಕೃಷಿಕರು ಸಹ ಆಗಿದ್ದವರು.

ಅಂಬಾತನಯ ಮುದ್ರಾಡಿ ಅವರು ಸತತ ಮೂವತ್ತಾರು ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ದುಡಿದಿದ್ದರು.

ಯಕ್ಷಗಾನ ಕಲಾವಿದರಾಗಿ ಅವರು ಅಮೃತೇಶ್ವರಿ ಇಡುಗುಂಜಿ ಮೇಳದಲ್ಲಿ ಕೆಲವರ್ಷ ಸೇವೆ ಸಲ್ಲಿಸಿದ್ದರು.

ಸಾಹಿತಿಯಾಗಿಯೂ. ಅವರು ಹಲವು ಕೃತಿಗಳನ್ನು ರಚಿಸಿದ್ದರು. ಅಂಬಾತನಯ ಮುದ್ರಾಡಿ ಅವರು ಕರ್ಣನ ಕುರಿತು ರಚಿಸಿದ  ಪರಿತ್ಯಕ್ತ ನಾಟಕ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಪಠ್ಯ ವಾಗಿತ್ತು.

ಅವರು ಯಕ್ಷಗಾನ ಪ್ರಸಂಗ ಸಹಿತ 200ಕ್ಕೂ ಮಿಕ್ಕ ಕೃತಿಗಳನ್ನು ಬರೆದಿದ್ದು, ಅವುಗಳಲ್ಲಿ ಅರ್ಧದಷ್ಟೇ ಪ್ರಕಟನೆಗೊಂಡಿವೆ.

ಅಂಬಾತನಯ ಮುದ್ರಾಡಿ ಅವರಿಗೆ ಯಾದವರಾವ್ ಪ್ರಶಸ್ತಿ, ಪೊಲ್ಯ ದೇಜಪ್ಪ ಶೆಟ್ಟಿ ಪ್ರಶಸ್ತಿ, ಸೀತಾನದಿ ಗಣಪಯ್ಯ ಶೆಟ್ಟಿ, ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ, ನಿಂಜೂರು ಪ್ರಶಸ್ತಿ, ಮಟ್ಟು ಗೋವರ್ಧನ ರಾವ್ ಪ್ರಶಸ್ತಿ, ಮುಂಬಯಿ ಪದವೀಧರ ಯಕ್ಷಗಾನ ಪ್ರಶಸ್ತಿ, ಪೊಳಲಿ ಶಾಸ್ತ್ರೀ ಪ್ರಶಸ್ತಿ, ಕುಕ್ಕಿಲ ಕೃಷ್ಣಭಟ್ ಪ್ರಶಸ್ತಿ,  ಪೇಜಾವರ ಶ್ರೀಗಳಿಂದ ರಾಮ ವಿಠಲ ಪ್ರಶಸ್ತಿ, ಪಲಿಮಾರು ಶ್ರೀಗಳಿಂದ ಸಾಹಿತ್ಯ ಸಿರಿ ಪ್ರಶಸ್ತಿ,  ಸಾಹಿತ್ಯ ಕಲಾ ವಾಚಸ್ಪತಿ ಪ್ರಶಸ್ತಿ, ಪತ್ರಿಕಾ ದಿನದ ಗೌರವ, ಅಖಿಲ ಭಾರತ 74ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಶ್ರೀ ಪ್ರಶಸ್ತಿ, 2019ನೇ ಸಾಲಿನ ಯಕ್ಷಗಾನ ಅಕಾಡಮಿಯ ಪ್ರತಿಷ್ಠಿತ ಪಾರ್ಥಿಸುಬ್ಬ ಪ್ರಶಸ್ತಿ, 7ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 2008ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗಳು ಸಂದಿವೆ.

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

DAKSHINA KANNADA

ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!

Published

on

ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.

16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್‌ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್‌ನಲ್ಲಿ ನೀಡಲಾಗುತ್ತದೆ.

ಮುಂದೆ ಓದಿ..; “ಮದುವೆ ಗೌನ್‌”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್‌ನಲ್ಲಿಅಭಿಮಾನಿಗಳು!

ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.

 

 

Continue Reading

BANTWAL

ULLALA : ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ

Published

on

ಉಳ್ಳಾಲ :   ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಸೋಮವಾರ ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು, ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹ*ತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.

ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!

ಉಳ್ಳಾಲ ಠಾಣಾ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.

ಯೋಗೀಶ್ ಪತ್ನಿಯೂ ಆತ್ಮಹತ್ಯೆಗೆ ಯತ್ನ:

ಯೋಗೀಶ್ ಸಾ*ವನ್ನಪ್ಪಿದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹ*ತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃ*ತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

Continue Reading

LATEST NEWS

Trending