Connect with us

BANTWAL

ಹರೀಶ್ ಪೂಂಜಾ ಕೊಲೆ ಯತ್ನ ಪ್ರಕರಣ-CIDಗೆ ಒಪ್ಪಿಸಿದ ಸರ್ಕಾರ

Published

on

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ‌ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ಆತನ ಸ್ಕೋರ್ಪಿಯೋ ಕಾರನ್ನು ವಶ ಪಡಿಸಿಕೊಂಡಿದ್ದಾರೆ.

ಅಕ್ಟೋಬರ್‌ 13 ರಂದು ರಾತ್ರಿ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಬಂದು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಅವರ ಕಾರನ್ನು ಬೆನ್ನಟ್ಟಿದ ಅರೋಪಿ ಫರಂಗಿಪೇಟೆಯಲ್ಲಿ ಶಾಸೆರಿಗೆ ಬೈದು ತಲವಾರು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದನು ಎಂದು ಅರೋಪಿಸಲಾಗಿತ್ತು.

ಶಾಸಕ ಹರೀಶ್ ಪೂಂಜಾ ಅವರ ಕಾರು ಚಾಲಕ ನವೀನ್ ಅವರು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸಿದ್ದರು.

ತನಿಖೆಯ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾ ಎಸ್ಪಿ ಋಷಿಕೇಶ್‌ ಭಗವಾನ್‌ ಸೋನಾವಣೆ ಅವರು, ಇದೊಂದು ಓವರ್‌ ಟೇಕ್‌ ವಿಚಾರದಲ್ಲಿ ನಡೆದ ಘಟನೆಯಾಗಿದ್ದು, ಆರೋಪಿ ರಿಯಾಜ್‌ನ ವಾಹನದಲ್ಲಿ ತಲವಾರು ಅಥವಾ ಯಾವುದೇ ಆಯುಧ ಪತ್ತೆಯಾಗಿಲ್ಲ.

ಅರೋಪಿ ರಿಯಾಜ್‌ ಎಲ್‌ ಆಕಾರದ ಸ್ಪ್ಯಾನರ್‌ ಮಾತ್ರ ಝಳಪಿಸಿದ್ದನು ಎಂದು ತಿಳಿಸಿದ್ದರು. ಆದರೆ ಎಸ್ಪಿ ಅವರ ಈ ಹೇಳಿಕೆ ಬಗ್ಗೆ ಶಾಸಕ ಪೂಂಜಾ ಅಸಮಾಧಾನ ವ್ಯಕ್ತಪಡಿಸಿ ಸರಕಾರ ತನಗೆ ನೀಡಿದ ಗನ್‌ ಮ್ಯಾನ್‌ ಸೌಲಭ್ಯವನ್ನು ವಾಪಸ್‌ ಕಳುಹಿಸಿದ್ದರು.

ಸರಕಾರ ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ಒಪ್ಪಿಸಿದೆ.

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

BANTWAL

ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಸಾ*ವು

Published

on

ಬಂಟ್ವಾಳ: ಮೊಬೈಲ್ ನೋಡುತ್ತ ನಡೆದ ಬಾಲಕನೊಬ್ಬ ಮಹಡಿಯ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟ ಘಟನೆ ಬಂಟ್ವಾಳದ ಜಕ್ರಿ ಬೆಟ್ಟಿನಲ್ಲಿ ನಡೆದಿದೆ. ಬಂಟ್ವಾಳ ಜಕ್ರಿ ಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತ ಬಾಲಕ.

died

ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃ*ತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

Trending