Friday, July 1, 2022

ಬೆಳ್ತಂಗಡಿ: ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ-9 ಮಂದಿ ವಿರುದ್ಧ FIR

ಬೆಳ್ತಂಗಡಿ: ಬುಡಕಟ್ಟು ಮಹಿಳೆಯೊಬ್ಬರ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಹಲವು ಮಂದಿ ಗ್ರಾಮಸ್ಥರ ಸಮ್ಮುಖದಲ್ಲೇ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಎ. 19ರಂದು ನಡೆದಿದೆ ಎನ್ನಲಾಗಿದೆ.


ಆರೋಪಿಗಳನ್ನು ಸಂದೀಪ್ (30), ಸಂತೋಷ್ (29), ಗುಲಾಬಿ (55), ಸುಗುಣ (30), ಕುಸುಮಾ (38), ಲೋಕಯ್ಯ (55), ಅನಿಲ್ (35), ಲಲಿತಾ (40) ಮತ್ತು ಚನ್ನಕೇಶವ (40) ಎಂದು ಗುರುತಿಸಲಾಗಿದೆ.

ಎಲ್ಲ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 35 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಗುಂಪೊಂದು ತನ್ನ ಬಟ್ಟೆ ಹರಿದು ಅರೆಬೆತ್ತಲು ಮಾಡಿ ವೀಡಿಯೊವನ್ನೂ ಚಿತ್ರೀಕರಿಸಿದೆ ಎಂದು ಮಹಿಳೆ ದೂರು ನೀಡಿದ್ದರು. ಅಕ್ಕ ಹಾಗೂ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಲಾಗಿತ್ತು.

ಆರೋಪಿಗಳೆಲ್ಲರೂ ಅದೇ ಗ್ರಾಮದವರು. ದೂರು ನೀಡಿದ ಮಹಿಳೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಅವರ ಅಕ್ಕ ವಾಸ್ತವ್ಯ ಇದ್ದ ಸರ್ಕಾರಿ ಭೂಮಿಯನ್ನು ಅಳತೆ ಮಾಡಲು ಕಂದಾಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಧಿಕಾರಿಗಳ ಕಾರ್ಯಕ್ಕೆ ಆರೋಪಿಗಳು ಆಕ್ಷೇಪಿಸಿದರು ಎನ್ನಲಾಗಿದ್ದು, ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ಸ್ಥಳದಿಂದ ವಾಪಾಸು ಕಳುಹಿಸಿದ್ದರು.

ಬಿಜೆಪಿ ಮುಖಂಡನ ನೇತೃತ್ವದ ತಂಡದಿಂದ ಕೃತ್ಯ ನಡೆದಿರುವುದಾಗಿ ದಲಿತ ಪರ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

“ಭರತ್‌ ಶೆಟ್ರೇ ನಿಮ್ಮ ಜನರಿಗೆ ನ್ಯಾಯ ಕೊಡಲಾಗದಿದ್ದರೆ ಮನೆಗೆ ಹೋಗಿ ಅಥವಾ ವೈದ್ಯ ವೃತ್ತಿ ಮುಂದುವರೆಸಿ”

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕರೇ ನಿಮಗೆ ಮತ ನೀಡಿದ ಜನರಿಗೆ ನ್ಯಾಯ ಕೊಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಅಥವಾ ವೈದ್ಯ ವೃತ್ತಿ ಮುಂದುವರೆಸಿ ಎಂದು ಮಾಜಿ ಶಾಸಕ ಮೊಯ್ದೀನ್‌...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...