Monday, July 4, 2022

ಹರ್ಷ ಕೊಲೆ ಪ್ರಕರಣ: 6 ಮಂದಿ ಬಂಧನ- ಶವಯಾತ್ರೆ ಮಾಡಿದವರ ಮೇಲೂ FIR

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 6 ಮಂದಿ ಆರೋಪಿಗಳ ಬಂಧನವಾಗಿದೆ ಎಂದು ಶಿವಮೊಗ್ಗ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ಮಾಹಿತಿ ನೀಡಿದ್ದಾರೆ.


ಬಂಧಿತರನ್ನು ಮೊಹಮ್ಮದ್‌ ಕಾಸೀಪ್‌, ನದೀಮ್‌ ಸಯ್ಯದ್‌, ಆಸೀಫ್‌ವುಲ್ಲಾ ಖಾನ್‌, ರಿಹಾನ್‌ ಶರೀಫ್‌, ನಿಹಾನ್‌, ಅಬ್ದುಲ್‌ ಅಪ್ನಾನ್‌,  ಎಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗದವರೇ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಇವರಲ್ಲಿ ಎ2 ಹಾಗೂ ಎ6 ಆರೋಪಿಗಳನ್ನು ಬಿಟ್ಟು ಉಳಿದ ನಾಲ್ವರು ಕೊಲೆಯಲ್ಲಿ ನೇರ ಭಾಗಿಯಾಗಿದ್ದಾರೆ. ಪ್ರಕರಣ ಸಂಬಂಧ 12 ಶಂಕಿತರನ್ನು ವಶಕ್ಕೆ ಪಡೆದಿದ್ದೆವು.

ಅದರಲ್ಲಿ ಘಟನೆ ಸಂಬಂಧವಿಲ್ಲದ 6 ಜನರನ್ನು ಬಿಟ್ಟು ಕಳುಹಿಸಿದ್ದೇವೆ. ಆರೋಪಿಗಳಿಗೆ ಕ್ರಿಮಿನಲ್‌ ಹಿನ್ನೆಲೆ ಇತ್ತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.

ಇನ್ನೂ ಎರಡು ದಿನ ಸೆಕ್ಷನ್‌ 144 ಜಾರಿಯಲ್ಲಿರಲಿದೆ. ಶವಯಾತ್ರೆ ವೇಳೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ 13 ಎಫ್‌ಐಆರ್‌, ಶವಯಾತ್ರೆ ಮಾಡಿದವರ ಮೇಲೆಯೂ ಎಫ್‌ಐಆರ್‌, ಗಲಭೆಯಲ್ಲಿ 18 ವಾಹನ ಜಖಂ ಆಗಿದೆ ಎಂದು ಡಿಸಿ ಸೆಲ್ವಮಣಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...

ಮಂಗಳೂರಿನ ‘ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್’ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

ಮಂಗಳೂರು: ಮಂಗಳೂರಿನಲ್ಲಿ‌ ನೂತನವಾಗಿ "ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ "ಅನಘಾಸ್ ಸ್ಕೇಟಿಂಗ್ ಅಕಾಡೆಮಿ"ಯಲ್ಲಿ ಇತ್ತೀಚೆಗೆ...