Connect with us

LATEST NEWS

ಹತ್ರಾಸ್ ಕಾಲ್ತುಳಿತ: ‘ಭೋಲೆ ಬಾಬಾ’ಗಾಗಿ ಪೊಲೀಸರ ಹುಡುಕಾಟ

Published

on

ಹತ್ರಾಸ್: 123 ಜನರ ಸಾವಿಗೆ ಕಾರಣವಾದ ಹತ್ರಾಸ್ನಲ್ಲಿ ಸತ್ಸಂಗ ನಡೆಸಿದ ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ ಗಾಗಿ ಉತ್ತರ ಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಗುರುವಾರ ಮೈನ್ ಪುರಿಯಲ್ಲಿರುವ ರಾಮ್ ಕುಟೀರ್ ಚಾರಿಟೇಬಲ್ ಟ್ರಸ್ಟ್ ನಲ್ಲಿ ಶೋಧ ನಡೆಸಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ‘ಭೋಲೆ ಬಾಬಾ’ ಹೆಸರನ್ನು ಎಫ್ ಐಆರ್ ನಲ್ಲಿ ಇನ್ನೂ ಉಲ್ಲೇಖಿಸಿಲ್ಲ. ಮೈನ್ ಪುರಿಯ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ಸುನೀಲ್ ಕುಮಾರ್ ಅವರು “ಆಶ್ರಮದೊಳಗೆ ಬಾಬಾ ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.

“ಆಶ್ರಮದೊಳಗೆ 40-50 ಸೇವಕರಿದ್ದಾರೆ, ಅವರು(‘ಭೋಲೆ ಬಾಬಾ’) ಆಶ್ರಮದ ಒಳಗೆ ಇಲ್ಲ. ಅವರು ನಿನ್ನೆಯೂ ಬಂದಿಲ್ಲ ಮತ್ತು ಇಂದು ಕೂಡ ಬಂದಿಲ್ಲ…” ಎಂದು ಮೈನಪುರಿ ಡಿಎಸ್ಪಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

LATEST NEWS

ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

Published

on

ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

Continue Reading

DAKSHINA KANNADA

ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

Published

on

ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

Continue Reading

LATEST NEWS

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

Published

on

ಮಂಗಳೂರು: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ“ ಎಂದು ಶುಭ ಹಾರೈಸಿದರು.

ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ 9 ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ“ ಎಂದರು.

ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ, ”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ“ ಎಂದರು.

ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ“ ಎಂದರು.

ದೇವಸ್ಥಾನದ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಉಮೇಶ್ ಶೆಟ್ಟಿ, ನಟ ಶೋಧನ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಡಾ ಪ್ರತೀಕ್ಷಾ, ಡಾ ನಿಖಿಲ್ ಶೆಟ್ಟಿ, ಸಂಜಯ್ ಶೆಟ್ಟಿ ಗೋಣಿಬೀಡು, ಡಾ ವೈಎನ್ ಶೆಟ್ಟಿ, ಮಿಥುನ್, ನವೀನ್ ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಕುಳಾಯಿ, ವಿಠಲ್ ಶೆಟ್ಟಿ ಕನಕಪಾಡಿ, ಶಾಂತಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉದ್ಯಮಿ ಪಲ್ಲವಿ ಸಂತೋಷ್ ಶೆಟ್ಟಿ ಕೆಮರಾ ಚಾಲನೆ ಮಾಡಿದರು. ಶಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.

ಸಿನಿಮಾ ಕುರಿತು:

ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು ಸಂದೀಪ್ ಉಡುಪಿ ಕೆಮರಾ ಕಣ್ಣಲ್ಲಿ ಸಿನಿಮಾ ಮೂಡಿಬರಲಿದೆ. ರವಿರಾಜ್ ಗಾಣಿಗ ಎಡಿಟರ್, ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ ಸಿನಿಮಾಕ್ಕಿರಲಿದೆ.

ಕಲಾವಿದರಾಗಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ. ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

Continue Reading

LATEST NEWS

Trending

Exit mobile version