Connect with us

    LATEST NEWS

    ದೇಶದಲ್ಲಿ ಮೊಳಗುತ್ತಿದೆ ‘ಹೆಚ್ಚು ಮಕ್ಕಳು ಮಾಡಿಕೊಳ್ಳಿ’ ಕೂಗು ; ಯಾಕೆ ಗೊತ್ತಾ ??

    Published

    on

    ಜನಸಂಖ್ಯೆ ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಮುಂದಿದೆ. 2024 ರಲ್ಲಿ ಹೊತ್ತಿಗೆ ಭಾರತದ ಜನಸಂಖ್ಯೆ 144 ಕೋಟಿಗೆ (1.45 ಬಿಲಿಯನ್)‌ ತಲುಪಿರುವುದಾಗಿ ವಿಶ್ವ ಸಂಸ್ಥೆಯ ವರದಿಯೊಂದು ತಿಳಿಸಿತ್ತು. ಇದು 2054 ರ ವೇಳೆಗೆ 1.69 ಬಿಲಿಯನ್‌ಗೆ ಏರುವ ಸಾಧ್ಯತೆ ಇದೆ ಎಂಬುದನ್ನು ಕೂಡಾ ಅಂದಾಜಿಸಲಾಗಿದೆ. ದೇಶದಲ್ಲಿ ಇಷ್ಟೆಲ್ಲಾ ಜನಸಂಖ್ಯೆ ಇದ್ದರೂ ಹೆಚ್ಚು ಮಕ್ಕಳನ್ನು ಹೊಂದಿದಿ, ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ ಎಂಬ ಕೂಗು ಕೇಳಿ ಬರುತ್ತಿದೆ. ಭಾರತದಲ್ಲಿ ಜನಸಂಖ್ಯೆ ತೀರಾ ಹೆಚ್ಚಿದ್ದರೂ ‘ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ’ ಎಂಬ ಕೂಗು ಏಕೆ ಕೇಳಿ ಬರುತ್ತಿದೆ ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

    ಇತ್ತೀಚಿಗಷ್ಟೇ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹೆಚ್ಚು ಮಕ್ಕಳನ್ನು ಹೊಂದುವಂತೆ ಹಾಗೂ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸ್ಥಳೀಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ದೇಶದಲ್ಲಿ 144 ಕೋಟಿ ಜನಸಂಖ್ಯೆ ಇದ್ದರೂ ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದಲ್ಲಿ ವಯಸ್ಸಾಗುತ್ತಿರುವವರ ಜನಸಂಖ್ಯೆ ಹೆಚ್ಚುತ್ತಿದೆ. ಮಕ್ಕಳು ಹಾಗೂ ಯುವಕರ ಜನಸಂಖ್ಯೆ ಕುಸಿಯುತ್ತಿದೆ. ಯುವ ಜನತೆಯ ಸಂಖ್ಯೆ ಕುಸಿದರೆ ಭವಿಷ್ಯದಲ್ಲಿ ಖಂಡಿತವಾಗಿಯೂ ದೇಶಕ್ಕೆ ಇದು ಋಣಾತ್ಮಕ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ ಎಂಬ ದೃಷ್ಟಿಯಿಂದ ಚಂದ್ರಬಾಬು ನಾಯ್ಡು ದಕ್ಷಿಣ ಭಾರತೀಯ ರಾಜ್ಯಗಳ ಜನರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದರು.

    ಪ್ರಸ್ತುತ ಜನಸಂಖ್ಯೆ ಹೆಚ್ಚಿದೆ ನಿಜ. ಈ ಜನಸಂಖ್ಯೆಯ ಶೇಕಡಾ 68% ರಷ್ಟು ಭಾಗ 15 ರಿಂದ 64 ವರ್ಷದವರು. ಇನ್ನೂ 0-14 ವಯೋಮಾನದವರ ಸಂಖ್ಯೆ ಕೇವಲ 24% ಇದೆ. ಭಾರತದಲ್ಲಿ ಜನನ ದರ ಇಳಿಕೆಯಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಅಂತ ಹೇಳಬಹುದು. 1950 ರಲ್ಲಿ ಪ್ರತಿ ಮಹಿಳೆ 5 ರಿಂದ 7 ಮಕ್ಕಳಿಗೆ ಜನ್ಮ ನೀಡುತ್ತಿದ್ದಳು. ಆದರೆ ಈಗ ಅದು ಎರಡಕ್ಕೆ ಇಳಿದಿದೆ. ಜನನ ದರದ ತ್ವರಿತ ಕುಸಿತದಿಂದಾಗಿ, ನಮ್ಮ ದೇಶದಲ್ಲಿ ವಯಸ್ಸಾದವರ ಜನಸಂಖ್ಯೆಯೂ ನಿರೀಕ್ಷೆಗಿಂತ ವೇಗವಾಗಿ ಏರಿಕೆಯನ್ನು ಕಾಣುತ್ತಿದೆ. ದುಡಿಯುವ ಕೈಗಳು ಹೆಚ್ಚಿದ್ದರೂ, ಭವಿಷ್ಯದಲ್ಲಿ ಯುವ ಜನತೆಯ ಸಂಖ್ಯೆ ಕಡಿಮೆಯಾಗಿ, ವಯಸ್ಸಾದವರೇ ಹೆಚ್ಚಾಗಿದ್ದಾಗ ದೇಶದಲ್ಲಿ ಹಲವಾರು ಸವಾಲುಗಳು ಎದುರಾಗಬಹುದು, ದೇಶದ ಅಭಿವೃದ್ಧಿಗೂ ಇದು ಅಡ್ಡಿ ಉಂಟುಮಾಡಬಹುದು.

    ಅರ್ಥಶಾಸ್ತ್ರಜ್ಞ ಮತ್ತು ತಮಿಳುನಾಡು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಜೆ. ಜಯರಂಜನ್‌ “ಹೆಚ್ಚಿರುವ ವಯಸ್ಸಾದವರ ಜನಸಂಖ್ಯೆಯು ಭಾರತಕ್ಕೆ ಅನೇಕ ಸವಾಲುಗಳನ್ನು ತರಬಹುದು, ಇದು ದೇಶದ ಮೇಲೆ ಗಮನಾರ್ಹ ಆರ್ಥಿಕ ಒತ್ತಡವನ್ನು ಉಂಟು ಮಾಡಬಹುದು. ಅಷ್ಟೇ ಅಲ್ಲದೆ ಈ ವಯಸ್ಸಾದ ಜನಸಂಖ್ಯೆಯನ್ನು ನೋಡಿಕೊಳ್ಳುವುದು ಭವಿಷ್ಯದಲ್ಲಿ ಕುಟುಂಬಗಳಿಗೆ ಮಾತ್ರವಲ್ಲದೆ ಸರ್ಕಾರಗಳಿಗೂ ಸವಾಲಾಗಿ ಪರಿಣಾಮಿಸಬಹುದು” ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ದಕ್ಷಿಣದ ಈ ಎಲ್ಲಾ ಐದು ರಾಜ್ಯಗಳಲ್ಲೂ ಜನನ ಪ್ರಮಾಣ ಕುಸಿದಿದೆ. ಯುರೋಪಿಯನ್‌ ರಾಷ್ಟ್ರಗಳಿಗಿಂತೂ ಇಲ್ಲಿಯೇ ಹೆಚ್ಚು ಜನನ ಪ್ರಮಾಣ ಕುಸಿಯುತ್ತಿದೆ ಎಂದು ಅಂದಾಜಿಸಲಾಗಿದೆ.

    “ಪ್ರಸ್ತುತ ಇರುವಂತಹ ಜನಸಂಖ್ಯೆ ನಿಯಂತ್ರಣ ಉತ್ತಮ ವಿಷಯವಾಗಿ ಕಂಡರೂ ಮುಂದೊಂದು ದಿನ ಈ ಜನಸಂಖ್ಯಾ ನಿಯಂತ್ರಣ ನೀತಿ ಋಣಾತ್ಮಕವಾಗಿ ಪರಿಣಾಮಿಸುತ್ತದೆ. ಇದು ದೇಶದ ಆದಾಯ ಮೇಲೂ ಗಮನಾರ್ಹವಾಗಿ ಪರಿಣಾಮವನ್ನು ಬೀರುತ್ತದೆ” ಎಂದು ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಫಾರ್‌ ಪಾಪ್ಯುಲೇಷನ್‌ ಸೈನ್ಸ್‌ ವಿಶ್ವವಿದ್ಯಾನಿಲಯದ ಜನಸಂಖ್ಯಾಶಾಸ್ತ್ರದ ಪ್ರಾದ್ಯಾಪಕ ಶ್ರೀನಿವಾನ್‌ ಗೋಲಿ ಅವರು ತಿಳಿಸಿದ್ದಾರೆ. “ಜನಸಂಖ್ಯಾಶಾಸ್ತ್ರಜ್ಞರ ಪ್ರಕಾರ ಫಲವತ್ತತೆಯ ದರಗಳು ಕಡಿಮೆಯಾಗಿರುವುದರಿಂದ ಭಾರತದಲ್ಲಿ ವಯಸ್ಸಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಫ್ರಾನ್ಸ್‌ ಮತ್ತು ಸ್ವೀಡನ್‌ ದೇಶಗಳಲ್ಲಿ ವಯಸ್ಸಾದವರ ಜನಸಂಖ್ಯೆ ಏರಿಕೆಯಾಗಲು 120, 80 ವರ್ಷ ತೆಗೆದುಕೊಂಡರೆ, ಭಾರತದಲ್ಲಿ ಕೇವಲ ಇನ್ನು 28 ವರ್ಷಗಳಲ್ಲಿ ವಯಸ್ಸಾದವರ ಜನಸಂಖ್ಯೆ ಏರಿಕೆಯಾಗಲಿದೆʼ ಎಂದು ಶ್ರೀನಿವಾಸ್‌ ಗೋಲಿ ಹೇಳಿದ್ದಾರೆ. ಜೊತೆಗೆ ಪ್ರಸ್ತುತ ಭಾರತದಲ್ಲಿ ಅತೀ ಹೆಚ್ಚು ಜನಸಂಖ್ಯೆಯಿದ್ದು, ಈ ಜನಸಂಖ್ಯಾ ಲಾಭಾಂಶವನ್ನು ಕೂಡಲೇ ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವ ಅವಶ್ಯಕತೆಯಿದೆ. ಇದು ದೇಶದ ಆರ್ಥಿಕತೆಯನ್ನು ಹೆಚ್ಚಿಸಲು ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

    ಜೀವನ ಮಟ್ಟದ ಸುಧಾರಣೆ, ಶಿಕ್ಷಣ, ನಗರೀಕರಣ ಈ ಎಲ್ಲಾ ಅಂಶಗಳು ಸ್ವಾಭಾವಿಕವಾಗಿ ಜನನ ದರದ ಕುಸಿತಕ್ಕೆ ಕಾರಣವಾಗಿದೆ. ಮತ್ತು ವಯಸ್ಸಾದವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರಗಳು ಜನರ ಆರೋಗ್ಯದ ಕಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಮತ್ತು ಭಾರತವು ನಿವೃತ್ತಿಯ ವಯಸ್ಸನ್ನು ಹೆಚ್ಚುಗೊಳಿಸಬೇಕು ಆಗ ಉತ್ಪಾದಕತೆಯೂ ಹೆಚ್ಚುತ್ತದೆ ಜೊತೆಗೆ ಆರ್ಥಿಕತೆಯೂ ಹೆಚ್ಚುತ್ತದೆ ಎಂದು ಜನಸಂಖ್ಯಾಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು “ದಂಪತಿಗಳು ಕನಿಷ್ಠ ಮೂರು ಮಕ್ಕಳನ್ನಾದರೂ ಹೊಂದಬೇಕು. 2 ಅಥವಾ ಅದಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿದಾಗ ಭವಿಷ್ಯದಲ್ಲಿ ಸಮಾಜವು ತಾನಾಗಿಯೇ ನಾಶವಾಗುತ್ತದೆ” ಎಂದು ಎಚ್ಚರಿಕೆಯನ್ನು ನೀಡಿದ್ದರು. ಹೀಗೆ ಹೆಚ್ಚಿನ ಜನರು ದೇಶದ ಭವಿಷ್ಯದ ದೃಷ್ಟಿಯಿಂದ ಭಾರತೀಯರು ಮೂರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ ಎಂದು ಕರೆ ನೀಡುತ್ತಿದ್ದಾರೆ.

    LATEST NEWS

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಾವ ಜಿಲ್ಲೆಯಲ್ಲಿ ನಡೆಯುತ್ತೆ ಗೊತ್ತಾ ?

    Published

    on

    ಮಂಗಳೂರು/ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುತ್ತಿದ್ದು ಇಂದು ಕೊನೆ ದಿನವಾಗಿದೆ. ಇನ್ನು ಮುಂದಿನ ಅಂದರೆ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಗಣಿನಾಡು ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

    ಇನ್ನೂ ಮಂಡ್ಯದಲ್ಲಿ ನಡೆದ 87ನೇ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದ ಜನರು ಯಶಸ್ವಿಗೊಳಿಸಿದ್ದಾರೆ. ಸಮಾರಂಭದಲ್ಲಿ ಸಾಕಷ್ಟು ವಿಶೇಷ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಎಲ್ಲವೂ ಜನರ ಗಮನ ಸೆಳೆದಿವೆ. ಇದೇ ಮೊದಲ ಬಾರಿಗೆ ಆಯೋಜಿಸಿದ್ದ ವಿಶೇಷ ಚೇತನರ ಗೋಷ್ಠಿ ಯಶಸ್ವಿಯಾಗಿದೆ. ದಾಖಲೆ ಮಟ್ಟದಲ್ಲಿ ಜನ ಕನ್ನಡ ಹಬ್ಬಕ್ಕೆ ಬಂದು ಯಶಸ್ವಿಗೊಳಿಸಿದ್ದಾರೆ.

    ಇದನ್ನೂ ಓದಿ: ಮಂಡ್ಯದಲ್ಲಿ ಇಂದಿನಿಂದ ಕನ್ನಡದ ಹಬ್ಬ

    ಸಮಾರೋಪ ಸಮಾರಂಭ
    ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮಾರೋಪ ಸಮಾರಂಭದ ಕಡೆಯಲ್ಲಿ ಸಮ್ಮೇಳನದ ನಿರ್ಣಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್​​.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷ ನಾಡೋಜ ಡಾ.ಗೊ.ರು ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತಿ ಇರಲಿದ್ದಾರೆ.

    ಬಳ್ಳಾರಿಯಲ್ಲಿ 88ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ
    ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ನಿನ್ನೆ (ಡಿಸೆಂಬರ್ 21) ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ 88ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದೊಂದಿಗೆ ಬಳ್ಳಾರಿ ಜನ ಖುಷಿಯಾಗಿದ್ದು, ಬಿಸಿಲೂರಿನಿಂದ ಸರ್ವತ್ರ ಕನ್ನಡ ಕಂಪು ಹರಡಲು ಮುಂದಾಗಿದ್ದಾರೆ.

    66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ
    1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ 66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ ದಕ್ಕಿದೆ.

     

    Continue Reading

    International news

    WWE ಫ್ಯಾನ್ಸ್ ಗೆ ಆಘಾತ: ರೇಯ್ ಮಿಸ್ಟೀರಿಯೋ ನಿಧನ !

    Published

    on

    ಮಂಗಳೂರು/ಮೆಕ್ಸಿಕೊ: ತನ್ನದೇ ವಿಭಿನ್ನ ಶೈಲಿಯಲ್ಲಿ ಎಂಟ್ರಿ ಕೊಡುತ್ತಿದ್ದ ರೇಯ್ ಮಿಸ್ಟೀರಿಯೋ ಅಬ್ಬರ ನೋಡೋದೇ ಒಂದು ಆನಂದವಾಗಿತ್ತು. 66 ವರ್ಷದ ರೇ ಮಿಸ್ಟೀರಿಯೋ ಸೀನಿಯರ್‌ ಸಾವನ್ನಪ್ಪಿರುವ ಸುದ್ದಿ ವರದಿಯಾಗಿದೆ.

    WWE ಸ್ಟಾರ್ ಗಳ ಸಾವಿನ ಸುದ್ದಿ ಬಗ್ಗೆ ಆಗಾಗ ಸುಳ್ಳು ಸುದ್ದಿ ಕೇಳಿ ಬರುತ್ತಲೇ ಇರುತ್ತದೆ. ಆದರೆ ಈ ಬಾರಿ ರೇ ಮಿಸ್ಟೀರಿಯೋ ಅಭಿಮಾನಿಗಳು ಇದು ಕೂಡ ಸುಳ್ಳಾಗಲಿ ಎಂದು ಬಯಸಿದ್ದರು. ಆದರೆ ಈ ಬಾರಿ ಮಿಸ್ಟೀರಿಯೋ ಕುಟುಂಬಸ್ಥರು ಈ ಶಾಕಿಂಗ್ ಸುದ್ದಿಯನ್ನು ಖಚಿತಪಡಿಸಿದ್ದಾರೆ.

    ರೇಯ್ ಮಿಸ್ಟೀರಿಯೋ, 1990ರ ಮಕ್ಕಳ ಹಾಟ್ ಫೇವರೆಟ್ WWE ಸ್ಟಾರ್. ರೇಯ್ ಮಿಸ್ಟೀರಿಯೋ ಫೈಟಿಂಗ್ ಹಾಗೂ ಪಲ್ಟಿ ಹೊಡೆಯೋ ಸ್ಟೈಲ್‌ ಅಷ್ಟು ರೋಮಾಂಚನಕಾರಿ.

    ಇದನ್ನೂ ಓದಿ: ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !

    ಸಾಮಾನ್ಯವಾಗಿ WWEನಲ್ಲಿ ದಢೂತಿ ದೇಹ. 6 ಅಡಿಗಿಂತ ಎತ್ತರದ ಕುಸ್ತಿಪಟುಗಳು ಅಖಾಡಕ್ಕೆ ಇಳಿಯುತ್ತಾರೆ. ಆದರೆ ಮಿಸ್ಟೀರಿಯೋ ಸೀನಿಯರ್ WWE ಸೂಪರ್ ಸ್ಟಾರ್‌ಗಳ ಮಧ್ಯೆ ಕುಳ್ಳನಂತೆ ಕಾಣುತ್ತಿದ್ದರು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಅನ್ನೋ ಹಾಗೇ ಮಿಸ್ಟೀರಿಯೋ ಸೀನಿಯರ್‌ ಅನ್ನ ಸೋಲಿಸೋದು ಅಷ್ಟು ಸುಲಭವಲ್ಲ.

    ರೇಯ್ ಮಿಸ್ಟೀರಿಯೋ ಆಡಿದ ಒಂದೊಂದು ಮ್ಯಾಚ್‌ಗಳು ರೋಚಕ ಫಲಿತಾಂಶಗಳನ್ನೇ ಕೊಡುತ್ತಿದ್ದವು. ರೇಯ್ ಮಿಸ್ಟೀರಿಯೋ ಫೈಟಿಂಗ್ ಸ್ಟೈಲ್ ಹಾಗೂ ರೋಚಕ ಟ್ವಿಸ್ಟ್‌ಗಳು ನೋಡುಗರನ್ನ ತುದಿಗಾಲಲ್ಲಿ ನಿಲ್ಲುವಂತೆ ಮಾಡುತ್ತಿದ್ದವು.

    ಕುಸ್ತಿ ಪ್ರಪಂಚದ ಮೇಲೆ ರೇ ಮಿಸ್ಟೀರಿಯೋ ಸೀನಿಯರ್ ಅವರ ಪ್ರಭಾವವು ಮುಂದಿನ ಪೀಳಿಗೆಯೂ ಕೂಡ ನೆನಪಿಸುವಂತೆ ಮಾಡುತ್ತದೆ. ಅವರ ವಿಶಿಷ್ಟ ಶೈಲಿಯ ಫೈಟಿಂಗ್ ಗಳು, ರಿಂಗ್ ನಲ್ಲಿ ಆಡುವ ರೀತಿ, ಪಲ್ಟಿ ಹೊಡೆಯೋ ಸ್ಟೈಲ್ ಅಭಿಮಾನಿಗಳನ್ನು ರೋಮಾಂಚನಗೊಳಿಸುತ್ತಿತ್ತು. ಆದರೆ ಇವರ ನಿಧನ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅತೀವ ದುಃಖ ಉಂಟುಮಾಡಿದೆ.

    Continue Reading

    LATEST NEWS

    ತ್ರಾಸಿ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ಪ*ಲ್ಟಿ; ರೈಡರ್ ಕ*ಣ್ಮರೆ

    Published

    on

    ಉಡುಪಿ: ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮ*ಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾ*ಪತ್ತೆಯಾದ ಘಟನೆ ಉಡುಪಿಯ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ (ಡಿ.21) ಸಂಜೆ ಸಂಭವಿಸಿದೆ.

    ಜೆಟ್ ಸ್ಕೀ ರೈಡರ್  ರವಿದಾಸ್ (45) ನಾ*ಪತ್ತೆಯಾಗಿದ್ದು, ಮತ್ತೋರ್ವ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ.

     

    ಇದನ್ನೂ ಓದಿ :  ದಿ*ಢೀರ್ ಹ*ಚ್ಚಿಕೊಂಡ ಬೆಂ*ಕಿ; ಆರು ಅಂಗಡಿಗಳು ಅ*ಗ್ನಿಗಾ*ಹುತಿ !!

     

    ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದ ಸಂದರ್ಭ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮ*ಗುಚಿ ಬಿದ್ದಿತ್ತು. ರೈಡ್‌ಗೆ ಹೋಗುವ ಮುನ್ನ ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್‌ಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ. ನಾ*ಪತ್ತೆಯಾದ ರೈಡರ್ ಮುರುಡೇಶ್ವರ ಮೂಲದ ರವಿದಾಸ್ ನ ಶೋ*ಧ ಕಾರ್ಯ ನಡೆಯುತ್ತಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending