ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್ ಎಂದು ಗುರುತಿಸಲಾಗಿದೆ.
ಖಾರ್ಕಿವ್ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು ಹೊಟೇಲ್‌ಗೆ ಹೋಗಿದ್ದ ವೇಳೆ ರಷ್ಯಾ ಸೇನೆಯ ರಾಕೆಟ್ ದಾಳಿಗೆ ಬಲಿಯಾಗಿದ್ದಾನೆ.
ಈ ಬಗ್ಗೆ ವಿದೇಶಾಂಗ ಇಲಾಖೆ ಟ್ವೀಟ್ ಮಾಡಿದೆ. ಸದ್ಯ ಆತನ ದೇಹ ಖಾರ್ಕಿವ್ ನಗರದ ಶವಗಾರದಲ್ಲಿರಿಸಲಾಗಿದೆ.
‘ಉಕ್ರೇನ್ ಖಾರ್ಕಿವ್ನಲ್ಲಿ ಬೆಳಗ್ಗೆ ನಡೆದ ಶೆಲ್ ದಾಳಿಯ ವೇಳೆ ಭಾರತೀಯ ವಿದ್ಯಾರ್ಥಿವೊರ್ವ ಸಾವಿಗೀಡಾಗಿರುವುದು ಅತ್ಯಂತ ದುಃಖದ ವಿಚಾರ.
ವಿದ್ಯಾರ್ಥಿಯ ಪೋಷಕರ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಪರ್ಕದಲ್ಲಿದೆ’ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಗ್ಚಿ ಮಾಹಿತಿ ನೀಡಿದ್ದಾರೆ.
ಉಕ್ರೇನ್ ರಾಜಧಾನಿ ಕೀವ್ ನ್ನು ಈಗಿಂದೀಗಲೇ ತೊರೆಯಿರಿ : ಭಾರತದ ನಾಗರಿಕರಿಗೆ ರಾಯಭಾರಿ ಕಚೇರಿ ಟ್ವೀಟ್..!
