Monday, January 24, 2022

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಬೆಳಗಾವಿಯಲ್ಲಿ ಮೂರು ಮನೆ ಕುಸಿತ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದೆ. ಬೆಳಗಾವಿ ಕಂಗ್ರಾಳ ಗಲ್ಲಿಯಲ್ಲಿ ಒಂದು ಮನೆ, ನಂದಗಡದಲ್ಲಿ ಎರಡು ಮನೆಗಳು ಕುಸಿದಿವೆ.


ಸತತ ಮಳೆಯಿಂದ ಶಿಥಿಲಗೊಂಡ ಕಟ್ಟಡಗಳಿಗೆ ಅಪಾಯ ಒದಗುವ ಶಂಕೆ ವ್ಯಕ್ತವಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೊಯ್ನಾ ಡ್ಯಾಂ ಸಾಮಥ್ರ್ಯ 100 ಟಿಎಂಸಿ ಇದ್ದು, ಸದ್ಯ ಡ್ಯಾಂನಲ್ಲಿ 60 ಟಿಎಂಸಿ ನೀರು ತುಂಬಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಸಧ್ಯಕ್ಕೆ ಪ್ರವಾಹ ಭೀತಿ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ತಿಳಿಸಿದರು.

ಗುರುವಾರ ಎಸ್‍ಎಸ್‍ಎಲ್‍ಸಿ 2ನೇ ಪರೀಕ್ಷೆ ಹಿನ್ನೆಲೆ ಬೆಳಗಾವಿಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ನಿನ್ನೆಯಿಂದ ಬೆಳಗಾವಿ ಜಿಲ್ಲೆಯಾಧ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಚಿಕ್ಕೋಡಿ ಡಿಡಿಪಿಐ ಮನ್ನಿಕೇರಿ ಅವರ ಜೊತೆಗೆ ಮಾತನಾಡಿದ್ದೇನೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ, ಉತ್ತರಪತ್ರಿಕೆ ತಲುಪಿದೆ. ಹೀಗಾಗಿ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಸರ್ದಾರ್ ಹೈಸ್ಕೂಲ್‍ನಲ್ಲಿ ಬೇರೆ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಕೊಯ್ನಾದಲ್ಲಿ ನಿನ್ನೆ ಜಾಸ್ತಿ ಮಳೆ ಆಗಿರುವುದರಿಂದ ಸುಮಾರು 6.5 ಟಿಎಂಸಿ ನೀರು ಕೊಯ್ನಾ ಡ್ಯಾಂಗೆ ಬಂದಿದೆ. ಸದ್ಯ 60 ಟಿಎಂಸಿ ನೀರು ಇರುವುದರಿಂದ ನೀರು ಬಿಡುಗಡೆ ಮಾಡಿಲ್ಲ. ಕೊಯ್ನಾ ಡ್ಯಾಂ ಸಾಮಥ್ರ್ಯ 100 ಟಿಎಂಸಿ ಇದೆ. ಹೀಗಾಗಿ ಸದ್ಯಕ್ಕೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಇಲ್ಲ. ಆದರೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

Hot Topics

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...