BELTHANGADY
ದೂರು ನೀಡಲು ಬಂದವಳನ್ನೇ ಅತ್ಯಾಚಾರ ಮಾಡಿದ ಧೂರ್ತ ಪಿಎಸ್‌ಐನನ್ನು ಬಂಧಿಸಲು ಹೈಕೋರ್ಟ್ ಸೂಚನೆ..!
ಮಂಗಳೂರು : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಯುವತಿ ಮೊಬೈಲ್ ನಂಬರ್ ಪಡೆದು ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವ ಭರವಸೆ ನೀಡಿ ಬಳಿಕ ಬೆಳ್ತಂಗಡಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿ ವಂಚನೆ ಎಸಗಿದ್ದ ಆರೋಪಿ ಚಾಮರಾಜಪೇಟೆ ಠಾಣೆಯ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ವಿಶ್ವನಾಥ್ ಬಿರಾದಾರ್‌ಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಆದೇಶಿಸಿದೆ.
ಯುವತಿ ದೂರು ನೀಡಿದ್ದರೂ ಆರೋಪಿ ವಿರುದ್ಧ ಕ್ರಮ ಜರುಗಿಸದೇ, ಆತನಿಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್, ಪಿಎಸ್‌ಐ ಪವನ್ ಹಾಗೂ ಇತರ ಸಿಬ್ಬಂದಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿ ತನಿಖೆ ನಡೆಸಿ ಮೂರು ತಿಂಗಳಿನಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣವನ್ನು ಸ್ಥಳೀಯ ಪೊಲೀಸರು ಸರಿಯಾಗಿ ನಿಭಾಯಿಸಿಲ್ಲ. ಆರೋಪಿ ಠಾಣೆಯಲ್ಲೇ ಇದ್ದರೂ ಆತನನ್ನು ಬಂಧಿಸಿಲ್ಲ. ಬದಲಿಗೆ ನೆರವು ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಪೀಠ, ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬದಲಿಗೆ ಸಿಒಡಿ ತನಿಖೆ ಮಾಡಬೇಕು, ನಾಲ್ಕು ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ.
ಲ್ಯಾಪ್ಟಾಪ್ ಕಳೆದು ಹೋಯಿತೆಂದು ಬೆಂಗಳೂರು ಮೂಲದ ೩೦ರ ಹರೆಯದ ಯುವತಿ ೨೦೨೦ರ ಆಗಸ್ಟ್‌ನಲ್ಲಿ ಚಾಮರಾಜ ಪೇಟೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು.
ಈ ಸಂದರ್ಭ ಪಿಎಸ್‌ಐ ವಿಶ್ವನಾಥ್ ಬಿರಾದಾರ್ ಆಕೆಯನ್ನು ಪರಿಚಯಿಸಿಕೊಂಡು ಮೊಬೈಲ್ ನಂಬರ್ ಪಡೆದು ಸಲುಗೆ ಬೆಳೆಸಿ ಮದುವೆಯಾಗುವ ಭರವಸೆ ನೀಡಿದ್ದ. ಅಲ್ಲದೆ ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಮದುವೆಯಾಗದೇ ವಂಚನೆ ಮಾಡಿದ್ದ ಹಿನ್ನೆಲೆಯಲ್ಲಿ ಯುವತಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಳು.
BELTHANGADY
Belthangady: ಕಾರಿನ ಮೇಲೆ ಕಾಡಾನೆ ದಾಳಿ- 6 ಮಂದಿಗೆ ಗಾಯ..!
ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ.
ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ನೆರಿಯಾ ಗ್ರಾಮ ಕಾಡಿನ ಅಂಚಿನಲ್ಲಿರೋ ಕಾರಣ ಕಾಡಾನೆ ಆತಂಕ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
BELTHANGADY
Belthangady: ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರು ಕಳವು- ನಾಲ್ವರು ಅರೆಸ್ಟ್..!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್ ನಿವಾಸಿ ಕಿಶೋರ್ ಟಿ.(32) ಬಂಧಿತ ಆರೋಪಿಗಳು.
ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನ. 9 ರಂದು ರಾತ್ರಿ 10 ಗಂಟೆ ವೇಳೆಗೆ ಇಸಾಕ್ ಅವರ ಅಕ್ಕನ ಮಗ ನೌಫಾಲ್ ತನ್ನ ಕಾರ್‌ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಗೆಳೆಯ ಸೈಫುದ್ದಿನ್‌ನ ಸ್ನೇಹಿತ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಅವರು ಬಾಡಿಗೆಗೆ ನೀಡುವಂತೆ ಕೇಳಿದ್ದರು. ಆದರೆ ಕಾರನ್ನು ನೀಡದ ಕಾರಣ ಅವರೇ ಕಳವು ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ಡಿ. ಮತ್ತು ಸಬ್ ಇನ್‌ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ, ಎಎಸ್‌ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬಂದಿ ರಾಜೇಶ್ ಎನ್., ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
BELTHANGADY
ಜನ್ಮ ದಿನಾಚರಣೆಯ ಸಂಭ್ರಮದಲ್ಲಿ ಧರ್ಮಸ್ಥಳದ ಖಾವಂದರು
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು 76ನೇ ವರ್ಷಕ್ಕೆ ನ. 25ರಂದು ಪಾದಾರ್ಪಣೆ ಮಾಡುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಶುಭಾಶಯ ಕೋರಿದ್ದಾರೆ. 1948ರ ನವೆಂಬರ್ 25ರಂದು ಜನಿಸಿದ್ದ ಹೆಗ್ಗಡೆ ಅವರು 1964ರ ಅ. 24ರಂದು ಕ್ಷೇತ್ರದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿದ್ದರು. ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವ ಉದ್ಯೋಗ ತರಬೇತಿ ಕೇಂದ್ರಗಳು, ಸಿರಿ ಸಂಸ್ಥೆಗಳು, ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ವಿದ್ಯಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಉಜಿರೆ ಸೇರಿದಂತೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಉಡುಪಿ ಮೊದಲಾದ ಕಡೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ನಡೆಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ನೌಕರರು, ಊರಿನ ನಾಗರಿಕರು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳ ಸಿಬಂದಿಯಿಂದ ವಿಶೇಷ ಗೌರವ ಸಲ್ಲಿಸಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು