Monday, January 24, 2022

ಬ್ರಹ್ಮರ್ಷಿ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು: HDK ಆಕ್ರೋಶ

ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಜನವರಿ 26ರಂದು ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್‌ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್‌ ಮಾಡಿದ ಅವರು ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ.

ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೂ ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು.

ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ರಿಪಬ್ಲಿಕ್‌ ಡೇ ಪರೇಡ್‌ನಲ್ಲಿ ಕೇರಳದ ‘ಶ್ರೀ ನಾರಾಯಣ ಗುರುʼ ಸ್ತಬ್ದ ಚಿತ್ರ ಬೇಡವೆಂದ ಕೇಂದ್ರ

Hot Topics

ಸುಳ್ಯ: ಅಂಗಡಿಗೆ ಬಂದ ಗ್ರಾಹಕನಿಗೆ ಮಾಲಕನಿಂದ ಹಲ್ಲೆ- ದೂರು ದಾಖಲು

ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಸುನೀಲ್‌ ಕುಮಾರ್‌-ಉಡುಪಿಗೆ ಅಂಗಾರ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ...