ಮಂಗಳೂರು/ಬೀಜಿಂಗ್ : ಚೀನಾದಲ್ಲಿ ಕೊರೊನಾ ವೈರಸ್ ಮಾದರಿಯ ಹೂಮನ್ ಮೆಟಾಪ್ ನ್ಯುಮೋ (HMPV) ಸೋಂಕು ಹರಡಿ ಭಾರೀ ಆತಂಕ ಸೃಷ್ಟಿಸಿದೆ.
ಈ ಹಿಂದೆ ಚೀನಾದಲ್ಲಿ ಜನ್ಮ ತಾಳಿದ್ದ ಕೊರೊನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಆವರಿಸಿ, ಲಾಕ್ ಡೌನ್ ಪರಿಸ್ಥಿತಿಗೆ ದೂಡಿತ್ತು. ವೈರಲ್ ಸೋಂಕಿಗೆ ಲೆಕ್ಕವಿಲ್ಲದಷ್ಟು ಜನ ಜೀವವನ್ನು ಕಳೆದುಕೊಂಡರು. ಅಂದು ಜನರನ್ನು ಕಾಡಿದ್ದ ಕೋವಿಡ್ ಈಗ ಐದು ವರ್ಷಗಳ ನಂತರ ಮತ್ತೊಂದು ರೂಪದಲ್ಲಿ ಚೀನಾದಲ್ಲಿ ಪತ್ತೆಯಾಗಿರುವುದು ಸದ್ಯ ಜಗತ್ತನ್ನು ಭಾರೀ ಆತಂಕಕ್ಕೆ ದೂಡಿದೆ.
ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ
ಕೋವಿಡ್ ನ ರೀತಿಯಲ್ಲಿ ಪತ್ತೆಯಾಗಿರುವ ಈ ವೈರಸ್ ನ ಹೆಸರು ಹ್ಯೂಮನ್ ಮೆಟಾಪ್ ನ್ಯುಮೋ ವೈರಸ್ (HMPV) ಎಂದು ಹೇಳಲಾಗಿದೆ. ಈ ಖಾಯಿಲೆ ಕೋವಿಡ್ ನಷ್ಟೇ ಮಾರಕ ಎನ್ನಲಾಗಿದ್ದು, ಈಗಾಗಲೇ ಹಲವರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗೂ ಚೀನಾದ ಆಸ್ಪತ್ರೆಗಳಲ್ಲಿ ಹಾಸಿಗೆಯು ಸಿಗದಷ್ಟು ರೋಗಿಗಳು ಆವರಿಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಕುರಿತು ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದ್ದು, ಯಾರೂ ಸಹ ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ: ಚೀನಾದಲ್ಲಿ ಮತ್ತೆ ವೈರಸ್ ಸ್ಫೋಟ; ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು
ಈ ಬಗ್ಗೆ ಮಾತನಾಡಿದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಡಾ. ಅತುಲ್ ಗೋಯೆಲ್, ‘ಎಚ್ಚರಿಕೆಯ ಅಗತ್ಯವಿಲ್ಲ, ಅಲಾರಂ ಬೇಕಿಲ್ಲ. ಚೀನಾದಲ್ಲಿ HMPV ನಿಗೂಢ ವೈರಸ್ ಶೀತವನ್ನು ಉಂಟುಮಾಡುವ ಇತರೆ ಉಸಿರಾಟದ ವೈರಸ್ ನಂತೆ. ಇದು ಶೀತ-ಕೆಮ್ಮು ರೋಗ ಲಕ್ಷಣಗಳನ್ನು ತೋರಿಸುತ್ತದೆ. ಇದಕ್ಕೆ ತೀರ ಭಯ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಅಂತರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ನಾವು ಇಲ್ಲಿನ ಪರಿಸ್ಥಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ. ಮಾಹಿತಿಯನ್ನು ಆಗಾಗ್ಗೆ ಅಪ್ಡೇಟ್ ಮಾಡುತ್ತಿರುತ್ತೇವೆ ಮತ್ತು ಅದಕ್ಕೆ ಅನುಗುಣವಾಗಿ ನವೀಕರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
HMPV ವೈರಸ್ ಲಕ್ಷಣಗಳು ಏನು ?
ಕೆಮ್ಮು, ಜ್ವರ, ಮೂಗು ಕಟ್ಟುವುದು, ಶೀತ ಈ ವೈರಸ್ ನ ಸಾಮಾನ್ಯ ಲಕ್ಷಣಗಳಾಗಿವೆ. HMPV ವೈರಸ್ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಆಗಾಗ್ಗೆ ಕೈ ತೊಳೆಯುವುದಾಗಿದೆ. ಜೊತೆಗೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದೆ.